Homeಕರ್ನಾಟಕಏಪ್ರಿಲ್ 30ರೊಳಗೆ ಉಚಿತ ಮರಳು ನೀತಿ ಜಾರಿ-ಸಚಿವ ಮುರುಗೇಶ್ ನಿರಾಣಿ

ಏಪ್ರಿಲ್ 30ರೊಳಗೆ ಉಚಿತ ಮರಳು ನೀತಿ ಜಾರಿ-ಸಚಿವ ಮುರುಗೇಶ್ ನಿರಾಣಿ

- Advertisement -
- Advertisement -

ಜನಸಾಮಾನ್ಯರು ಕಡಿಮೆ ದರದಲ್ಲಿ ಮನೆಗಳನ್ನು  ಕಟ್ಟಿಸಿಕೊಳ್ಳಲು ಅನುಕೂಲವಾಗುವಂತೆ ಏಪ್ರಿಲ್ 30 ರಿಂದ ರಾಜ್ಯಾದ್ಯಂತ ಉಚಿತ ಮರಳು ನೀತಿ ಜಾರಿಗೆ ಬರಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಕಲಬುರಗಿಯಲ್ಲಿ ಪ್ರಕಟಿಸಿದ್ದಾರೆ.

ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ವಿತರಣೆ ಮಾಡಬೇಕೆಂಬುದು ಸರ್ಕಾರದ ಪ್ರಮುಖ ಉದ್ದೇಶ ಹೀಗಾಗಿ ಇದೇ 30ರಿಂದ ಅನ್ವಯವಾಗುವಂತೆ ಉಚಿತ ಮರಳು ನೀತಿ ಜಾರಿಗೆ ತರುತ್ತಿದ್ದೇವೆ. ಜೊತೆಗೆ ಮರಳು ಅಕ್ರಮ ತಡೆಗಟ್ಟುವ ಉದ್ದೇಶದಿಂದ ಉಚಿತ ಮರಳು ನೀತಿ ಜೊತೆಗೆ ನೂತನ ಮರಳು ನೀತಿ ಜಾರಿಗೆ ತರಲಾಗುತ್ತಿದೆ ಎಂದು ಸಚಿವ ಮುರುಗೇಶ್ ನಿರಾಣಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ಹಿನ್ನೆಲೆ ರೈತ ಹೋರಾಟ ಮುಂದೂಡಿ, ಮಾತುಕತೆಗೆ ಬನ್ನಿ ಎಂದ ಕೃಷಿ ಸಚಿವ

ಕಲಬುರಗಿಯಲ್ಲಿ ಸಚಿವರಾದ ಆನಂದ್ ಸಿಂಗ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್ ಹಾಗೂ  ಶಿವರಾಮ್ ಹೆಬ್ಬಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಟಿ ನಡೆಸಿ ಉಚಿತ ಮರಳು ನೀತಿ ಮತ್ತು ನೂತನ ಮರಳು ನೀತಿ ಜಾರಿ ಕುರಿತು ತಿಳಿಸಿದ್ದಾರೆ.

ಜನಸಾಮಾನ್ಯರ ಹತ್ತು ಲಕ್ಷ ರೂಪಾಯಿಯೊಳಗಿನ ಮನೆ ನಿರ್ಮಾಣಕ್ಕೆ 100 ರೂ.ಗೆ ಒಂದು ಟನ್ ಮರಳು ವಿತರಣೆ ಮಾಡಲಿದ್ದೇವೆ.  ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಕಟ್ಟಿಕೊಳ್ಳುವವರಿಗೆ ಇದರಿಂದ ಅನುಕೂಲವಾಗಲಿದೆ ಎಂದರು. ಹಳ್ಳಕೊಳ್ಳ, ಚೆಕ್‍ಡ್ಯಾಂ, ಝರಿಗಳಲ್ಲಿ ಉಚಿತವವಾಗಿ ಮರಳು ತೆಗೆದು ಎತ್ತಿನ ಗಾಡಿ ಮೂಲಕ ಸಾಗಾಣಿಕಗೆ ಅವಕಾಶ ನೀಡಲಾಗುವುದು ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಏ.30ರೊಳಗೆ ಹೊಸ ಮರಳು ನೀತಿಯನ್ನು ಜಾರಿ ಮಾಡಲಾಗುತ್ತಿದ್ದು, ಈಗಾಗಲೇ ಮರಳು ನೀತಿ ಸಿದ್ದವಾಗಿದೆ. ದೇಶಕ್ಕೆ ಮಾದರಿಯಾಗುವಂತಹ ನೀತಿ ಇದಾಗಲಿದೆ. ಬೇರೆ ರಾಜ್ಯಗಳು ಕೂಡ ಕರ್ನಾಟಕ ಮಾದರಿಯನ್ನು ಅನುಸರಿಸಲಿದ್ದಾರೆ’ ಎಂಬ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...