Homeಮುಖಪುಟ"ವಾಕ್ ಸ್ವಾತಂತ್ರ್ಯ ಎಂದರೆ ಇನ್ನೊಬ್ಬರ ಭಾವನೆಗಳಿಗೆ ನೋವುಂಟು ಮಾಡುವುದು ಎಂದಲ್ಲ": ಶರ್ಮಿಸ್ತಾ ಪನೋಲಿಗೆ ಜಾಮೀನು ನೀಡಲು...

“ವಾಕ್ ಸ್ವಾತಂತ್ರ್ಯ ಎಂದರೆ ಇನ್ನೊಬ್ಬರ ಭಾವನೆಗಳಿಗೆ ನೋವುಂಟು ಮಾಡುವುದು ಎಂದಲ್ಲ”: ಶರ್ಮಿಸ್ತಾ ಪನೋಲಿಗೆ ಜಾಮೀನು ನೀಡಲು ಹೈಕೋರ್ಟ್ ನಕಾರ

- Advertisement -
- Advertisement -

“ವಾಕ್ ಸ್ವಾತಂತ್ರ್ಯ ಎಂದರೆ ಇನ್ನೊಬ್ಬರ ಭಾವನೆಗಳಿಗೆ ನೋವುಂಟು ಮಾಡುವುದು ಎಂದಲ್ಲ” ಎಂದ ಕಲ್ಕತ್ತಾ ಹೈಕೋರ್ಟ್, ಸೋಷಿಯಲ್ ಮೀಡಿಯಾ ಇನ್‌ಫ್ಲ್ಯುಯೆನ್ಸರ್ ಹಾಗೂ ಕಾನೂನು ವಿದ್ಯಾರ್ಥಿನಿ ಶರ್ಮಿಸ್ತಾ ಪನೋಲಿಗೆ ಮಧ್ಯಂತರ ಜಾಮೀನು ನೀಡಲು ಮಂಗಳವಾರ (ಜೂ.3) ನಿರಾಕರಿಸಿದೆ.

ಶರ್ಮಿಸ್ತಾ ಅವರ ಪೋಸ್ಟ್ ಒಂದು ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿವೆ. ಭಾರತವು ವೈವಿಧ್ಯಮಯ ದೇಶವಾಗಿರುವುದರಿಂದ, ಇತರರನ್ನು ನೋಯಿಸಲು ವಾಕ್ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ನ್ಯಾಯಮೂರ್ತಿ ಪಾರ್ಥ ಸಾರಥಿ ಚಟರ್ಜಿ ಅವರು ಹೇಳಿದ್ದಾರೆ.

ಪ್ರವಾದಿ ಮುಹಮ್ಮದರನ್ನು ನಿಂದಿಸಿದ ಆರೋಪದ ಮೇಲೆ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಮತ್ತು ವಿವಾದಾತ್ಮಕ ವಿಡಿಯೋಗೆ ಸಂಬಂಧಿಸಿದಂತೆ ವಿವಿದೆಡೆ ದಾಖಲಾಗಿರುವ ಎಫ್‌ಐಆರ್‌ಗಳನ್ನು ಒಂದೆಡೆ ಕ್ರೋಢೀಕರಿಸುವಂತೆ ಕೋರಿ ಪನೋಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಚಟರ್ಜಿ ವಿಚಾರಣೆ ನಡೆಸಿದ್ದಾರೆ.

ಕೋಲ್ಕತ್ತಾದ ವಿಚಾರಣಾ ನ್ಯಾಯಾಲಯದ ಮೇ 31ರಂದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದನ್ನೂ ಶರ್ಮಿಸ್ತಾ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಆದರೆ, ಮಧ್ಯಂತರ ಪರಿಹಾರ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 5ಕ್ಕೆ ನಿಗದಿಪಡಿಸಿದೆ.

ಪುಣೆಯ ಸಿಂಬಿಯೋಸಿಸ್ ಕಾನೂನು ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಶರ್ಮಿಸ್ತಾ ಪನೋಲಿ, ಸಾಮಾಜಿಕ ಮಾಧ್ಯಮಗಳಾದ ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್‌ನಲ್ಲಿ ಮುಸ್ಲಿಂ ಸಮುದಾಯ ಮತ್ತು ಪ್ರವಾದಿ ಮುಹಮ್ಮದರ ವಿರುದ್ಧ ನಿಂದನಾತ್ಮಕ ಪೋಸ್ಟ್ ಹಾಕಿದ ಆರೋಪವಿದೆ.

ಮೇ 14ರಂದು ಹಾಕಿದ್ದ ತನ್ನ ಪೋಸ್ಟ್ ವಿವಾದಕ್ಕೆ ತಿರುಗುತ್ತಿದ್ದಂತೆ, ಅದನ್ನು ಡಿಲಿಟ್ ಮಾಡಿ ಎಕ್ಸ್‌ನಲ್ಲಿ ಕ್ಷಮೆಯಾಚಿಸಿದ್ದರು. ಆದರೆ, ಮೇ 15,2025 ರಂದು ಅವರ ವಿರುದ್ಧ ಕೊಲ್ಕತ್ತಾದಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎರಡು ದಿನಗಳ ನಂತರ ಮೇ 17,2025 ರಂದು ಶರ್ಮಿಸ್ತಾ ವಿರುದ್ದ ಬಂಧನ ವಾರೆಂಟ್ ಹೊರಡಿಸಲಾಗಿತ್ತು. ಮೇ 30ರಂದು ಕೋಲ್ಕತ್ತಾ ಪೊಲೀಸರು ಗುರುಗ್ರಾಮದಲ್ಲಿ ಶರ್ಮಿಸ್ತಾ ಅವರನ್ನು ಬಂಧಿಸಿದ್ದರು.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಮಿಲಿಟರಿ ಪ್ರತಿಕ್ರಿಯೆಯ ಕುರಿತು ಪಾಕಿಸ್ತಾನಿ ಫಾಲೋವರ್ ಒಬ್ಬರು ಕೇಳಿದ್ದ ಪ್ರಶ್ನೆಗೆ ಉತ್ತರವಾಗಿ ಶರ್ಮಿಸ್ತಾ ಪನೋಲಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಪೋಸ್ಟ್ ಹಾಕಿದ್ದರು.

ಆ ವಿಡಿಯೋದಲ್ಲಿ, ಅವರು ಇಸ್ಲಾಂ ಮತ್ತು ಪ್ರವಾದಿ ಮುಹಮ್ಮದರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಬಾಲಿವುಡ್ ನಟರು ಭಯೋತ್ಪಾದಕ ದಾಳಿಯ ವಿಷಯದಲ್ಲಿ ಮೌನವಾಗಿರುವುದನ್ನು ಟೀಕಿಸಿದ್ದರು.

ಸುಮಾರು 22 ವರ್ಷ ವಯಸ್ಸಿನ ಶರ್ಮಿಸ್ತಾ ಅವರಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಒಟ್ಟಾರೆಯಾಗಿ ಸುಮಾರು 2 ಲಕ್ಷ ಫಾಲೋವರ್ಸ್ ಇದ್ದಾರೆ.

‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...