Homeಕರ್ನಾಟಕ‘ಬ್ಲಾಕ್‌ ಫಂಗಸ್‌‌’ಗೆ ಉಚಿತ ಚಿಕಿತ್ಸೆ ನೀಡಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

‘ಬ್ಲಾಕ್‌ ಫಂಗಸ್‌‌’ಗೆ ಉಚಿತ ಚಿಕಿತ್ಸೆ ನೀಡಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ಬ್ಲಾಕ್‌ ಫಂಗಸ್‌‌ ಕಾಯಿಲೆಯನ್ನು ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ ಸೂಕ್ತ ಅಧಿಸೂಚನೆ ಹೊರಡಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸೋಮವಾರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಬ್ಲಾಕ್ ಫಂಗಸ್, ಕಪ್ಪು ಶಿಲೀಂದ್ರದ ಸಮಸ್ಯೆ ಅಥವಾ ವೈದ್ಯಕೀಯ ಪರಿಭಾಷೆಯಲ್ಲಿ ಮ್ಯೂಕರ್ ಮೈಕೋಸಿಸ್ ಎಂದು ಕರೆಯಲಾಗುವ ಈ ಕಾಯಿಲೆಯು ಕೋವಿಡ್ ರೋಗಕ್ಕೆ ತುತ್ತಾಗಿ  ರೋಗ ನಿರೋಧಕ ಶಕ್ತಿ ಕಡಿಮೆಯಾಗಿರುವವರಲ್ಲಿ ಮಾರಣಾಂತಿಕವಾಗಿ ಪರಿಣಮಿಸುತ್ತಿದೆ. ಕೋವಿಡ್‌ನಿಂದಾಗಿ ಸಾವು ಬದುಕಿನ ನಡುವೆ ಹೋರಾಡಿ ಬದುಕಿ ಬಂದವರನ್ನು ಗುರಿ ಮಾಡಿಕೊಂಡು ದಾಳಿ ಮಾಡುತ್ತಿರುವ ಈ ಕಾಯಿಲೆಯನ್ನು ಬಡವರಿರಲಿ, ಮಧ್ಯಮ ವರ್ಗದವರಿಗೂ ಕೂಡ ಸೂಕ್ತ ಚಿಕಿತ್ಸೆ ಪಡೆಯಲಾಗದಷ್ಟು ದುಬಾರಿಯಾಗಿದೆ. ಈ ರೋಗ ಬಂದವರಿಗೆ ದಿನಕ್ಕೆ ಮೂರರಂತೆ 30 ದಿನಗಳವರೆಗೂ ಆಂಫೊಟೆರೆಸಿನ್ ಎಂಬ ಇಂಜೆಕ್ಷನ್‍ಗಳನ್ನು ನೀಡಬೇಕಾಗುತ್ತದೆ ಎಂದು ವೈದ್ಯರು ಹೇಳುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬ್ಲಾಕ್ ಫಂಗಸ್‌ಗೆ ಇಬ್ಬರು ಬಲಿ- ಪ್ರಕರಣಗಳ ನಿಖರ ಮಾಹಿತಿಯಿಲ್ಲ ಎಂದ ಆರೋಗ್ಯ ಸಚಿವರು!

“ಮಾರುಕಟ್ಟೆಯಲಿ ಈ ಔಷಧಗಳು ಸಿಗುತ್ತಿಲ್ಲ. ಒಂದೊಂದು ಇಂಜೆಕ್ಷನ್ನಿನ ಬೆಲೆ ಕಾಳಸಂತೆಯಲ್ಲಿ ಈಗಾಗಲೇ  5 ರಿಂದ 7 ಸಾವಿರ ರೂಗಳವರೆಗೆ ಮಾರಾಟವಾಗುತ್ತಿವೆ ಎಂಬ ದೂರುಗಳು ಬರುತ್ತಿವೆ. ಕೋವಿಡ್ ಸಾಂಕ್ರಾಮಿಕವನ್ನು ಅತ್ಯಂತ ಅರಾಜಕವಾಗಿ ನಿರ್ವಹಿಸುತ್ತಿರುವ, ಸತ್ತವರು ಸಾಯಲಿ ಎಂಬಂತೆ ನಡದುಕೊಳ್ಳುತ್ತಿರುವ ಸರ್ಕಾರ ಬ್ಲಾಕ್ ಫಂಗಸ್ ರೋಗದ ಕುರಿತು ಇನ್ನೂ ಕೂಡ ಸಮರ್ಪಕ ನಿರ್ಧಾರ ತೆಗೆದುಕೊಂಡಿಲ್” ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

“ಚಿಕಿತ್ಸೆ ನೀಡುವ ಕುರಿತಾದಂತೆ ಅಷ್ಟೆ ಅಲ್ಲ. ರೋಗ ಹರಡುತ್ತಿರುವ ಕುರಿತಂತೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕಾಗಿದೆ. ರೋಗ ಯಾರಲ್ಲಿ ಹರಡುತ್ತಿದೆ? ಏಕೆ ಹರಡುತ್ತಿದೆ? ಯಾವಾಗ ಹರಡುತ್ತಿದೆ? ರೋಗ ಲಕ್ಷಣಗಳೇನು? ರೋಗ ಬಂದರೆ ಹೇಗೆ ಚಿಕಿತ್ಸೆ ಪಡೆಯಬೇಕು? ರೋಗ ಬರದಂತೆ ತಡೆಯಲು ಯಾವ ಕ್ರಮಗಳನ್ನು ಅನುಸರಿಸಬೇಕು? ಕೋವಿಡ್ ಚಿಕಿತ್ಸೆಯಿಂದ ಈ ಶಿಲೀಂದ್ರ ಸೋಂಕು ಬರುತ್ತದೆ ಅಂತಾದರೆ, ಕೋವಿಡ್ ಚಿಕಿತ್ಸೆಯಲ್ಲಿ ಮಾಡಿಕೊಳ್ಳಬೇಕಾದ ಮಾರ್ಪಾಟುಗಳೇನು? ಎಂಬೆಲ್ಲ ವಿಚಾರಗಳ ಕುರಿತು ಸಮರ್ಪಕ ಎಸ್‍ಓಪಿ ಯನ್ನು ಹೊರಡಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಕೋವಿಡ್ ಸೋಂಕಿನ ವಿಚಾರದಲ್ಲಿ ಅವೈಜ್ಞಾನಿಕವಾಗಿ ನಡೆದುಕೊಂಡಂತೆ ಬ್ಲಾಕ್ ಫಂಗಸ್ಸಿನ ವಿಚಾರದಲ್ಲಿ ನಡೆದುಕೊಳ್ಳಬಾರದು. ಉತ್ತರ ಭಾರತದ ಅನೇಕ ಕಡೆ ಸಗಣಿ ಬಳಸಿ ಚಿಕಿತ್ಸೆ ಪಡೆಯಲು ಹೊರಟವರಲ್ಲಿ ಈ ಸೋಂಕು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಹೇಳಲಾಗುತ್ತಿದೆ. ಬಹುತೇಕ ವೈದ್ಯರು  ಕೋವಿಡ್ ಚಿಕಿತ್ಸೆಯಲ್ಲಿ ಅನಿಯಮಿತವಾಗಿ ಬಳಸುವ ಸ್ಟಿರಾಯ್ಡ್‍ಗಳಿಂದ ಹರಡುತ್ತಿದೆ ಎನ್ನುತ್ತಾರೆ. ಕೋವಿಡ್ ಬಂದವರಿಗೆ ಸಕ್ಕರೆ ಕಾಯಿಲೆ ಇದ್ದರೆ ಅವರಿಗೆ ಸುಲಭವಾಗಿ ಹರಡುತ್ತದೆ ಎನ್ನಲಾಗುತ್ತಿದೆ. ಆಕ್ಸಿಜನ್ ನೀಡುವಾಗ ಉಂಟಾಗುವ ಸೋಂಕುಗಳಿಂದ ಹರಡುತ್ತದೆ ಎಂಬ ಅಭಿಪ್ರಾಯವೂ ಇದೆ. ಆದ್ದರಿಂದ ಈ ಕುರಿತು ಸೂಕ್ತವಾಗಿ ಶೀಘ್ರವಾಗಿ ಅಧ್ಯಯನ ಮಾಡಿ ಚಿಕಿತ್ಸೆ ನೀಡಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವೆಂಟಿಲೇಟರ್ ಮತ್ತು ಪ್ರಧಾನಿ ಇಬ್ಬರೂ ವಿಫಲರಾಗಿದ್ದಾರೆ ಎಂದ ರಾಹುಲ್ ಗಾಂಧಿ

“ಪ್ರತಿವಾರ ಸುಮಾರು 400 ಜನಕ್ಕೆ ಈ ಸೋಂಕು ಬರಬಹುದು ಎಂದು ಅಂದಾಜಿಸಲಾಗುತ್ತಿದೆ. ಆದರೆ ಚಿಕಿತ್ಸೆ ನೀಡಲು ಬೇಕಾದ ತಯಾರಿಯನ್ನು ಇನ್ನೂ ಮಾಡಿಕೊಂಡಂತೆ ಕಾಣುತ್ತಿಲ್ಲ. ಮಧುಮೇಹ ಮುಂತಾದ ಸಮಸ್ಯೆ ಇದ್ದು ಕೋವಿಡ್ ಬಂದವರನ್ನು ಕನಿಷ್ಟ ಮೂರು ತಿಂಗಳ ಕಾಲ ಗಮನಿಸುತ್ತಿರಬೇಕು. ಜೊತೆಗೆ ಕೋವಿಡ್ ರೋಗಿಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರ ವಿವರಗಳನ್ನು ಮತ್ತು ಹೆಚ್ಚು ಸ್ಟಿರಾಯ್ಡ್ ನೀಡಲಾಗಿರುವವರ ಪಟ್ಟಿಯನ್ನು ತಾಲ್ಲೂಕುವಾರು, ವಾರ್ಡ್‍ವಾರು ಸಿದ್ಧಪಡಿಸಿಕೊಂಡು ಅವರನ್ನೂ ಸಹ ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಕಾರ್ಯಕರ್ತರ ಮೂಲಕ ನಿಗಾವಹಿಸಬೇಕು” ಎಂದು ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

“ಈ ನಿಗಾ ಅವಧಿಯಲ್ಲಿ ಯಾರಿಗಾದರೂ ಸೋಂಕು ಕಾಣಿಸಿಕೊಂಡರೆ ಕೂಡಲೇ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿ ಉಚಿತವಾಗಿ ಸಮರ್ಪಕ ಚಿಕಿತ್ಸೆಯನ್ನು ನೀಡಬೇಕು. ಅದಕ್ಕೂ ಮೊದಲು ಈ ಕೂಡಲೇ ಈ ರೋಗಕ್ಕೆ ಚಿಕಿತ್ಸೆ ನೀಡಲು ಜಿಲ್ಲಾವಾರು ಆಸ್ಪತ್ರೆಗಳ ಪಟ್ಟಿ ಸಿದ್ಧಪಡಿಸಿ, ಅಧಿಸೂಚನೆ ಹೊರಡಿಸಬೇಕು. ಚಿಕಿತ್ಸೆಗಾಗಿ ಅಗತ್ಯ ಇರುವಷ್ಟು ಆಂಫೊಟೆರೆಸಿನ್ ಮುಂತಾದ ಔಷಧಗಳನ್ನು ಕೂಡಲೇ ಅಂದಾಜು ಮಾಡಿ ತರಿಸಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ಈ ಹಿನ್ನೆಲೆಯಲ್ಲಿ ಸರ್ಕಾರ ತಡಮಾಡದೆ ಸೂಕ್ತ ಅಧಿ ಸೂಚನೆಗಳನ್ನು ಹೊರಡಿಸಿ ಉಚಿತ ಚಿಕಿತ್ಸೆ ನೀಡಲು ಪ್ರಾರಂಭಿಸಬೇಕು. ಈಗಾಗಾಲೇ ಬಹಳಷ್ಟು ಜನರು ಬ್ಲಾಕ್ ಫಂಗಸ್ಸಿಗೆ ತುತ್ತಾಗಿ ಜೀವ ಕಳೆದುಕೊಂಡಿದ್ದಾರೆ. ಕಣ್ಣುಗಳನ್ನು ಕಳೆದುಕೊಂಡಿದ್ದಾರೆ. ಅಂಥವರಿಗೆ, ಅಂಥವರ ಕುಟುಂಬ ಸೂಕ್ತ ಪರಿಹಾರ ನೀಡಬೇಕು. ಈ ರೋಗವು ಇನ್ನಷ್ಟು ಅಮೂಲ್ಯ ಜೀವಗಳನ್ನು ಹೊತ್ತೊಯ್ಯುವ ಮೊದಲು ಕೂಡಲೇ ಉಚಿತ ಚಿಕಿತ್ಸೆ ನೀಡಲು  ಆರಂಭಿಸಬೇಕು” ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಒಳ್ಳೆಯ ಕೆಲಸ ಮಾಡುತ್ತಿದ್ದಾರೆ: ಬಿ.ವಿ ಶ್ರೀನಿವಾಸ್‌ ಸೇರಿ ಇತರರಿಗೆ ಕ್ಲೀನ್ ಚಿಟ್ ನೀಡಿದ ದೆಹಲಿ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...