Homeಕರ್ನಾಟಕರಾಜ್ಯದಲ್ಲಿ 18 ರಿಂದ 45 ವರ್ಷ ವಯಸ್ಸಿನವರಿಗೆ ಉಚಿತ ಲಸಿಕೆ- ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ 18 ರಿಂದ 45 ವರ್ಷ ವಯಸ್ಸಿನವರಿಗೆ ಉಚಿತ ಲಸಿಕೆ- ಸಿಎಂ ಯಡಿಯೂರಪ್ಪ

- Advertisement -
- Advertisement -

ಕೊರೊನಾ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ರಾಜ್ಯದಲ್ಲಿ 14 ದಿನಗಳು ಲಾಕ್‌ಡೌನ್ ಮಾಡಿ ಬಿಗಿಯಾದ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗಿದೆ. ಇದರ ಜೊತೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ 18 ರಿಂದ 45 ವರ್ಷ ವಯಸ್ಸಿನವರಿಗೆ ಉಚಿತ ಲಸಿಕೆ ನೀಡುವುದಾಗಿ ಘೋಷಿಸಲಾಗಿದೆ.

45 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡುತ್ತಿದ್ದು, ರಾಜ್ಯದ 18 ರಿಂದ 45 ವರ್ಷ ವಯಸ್ಸಿನ ನಾಗರಿಕರಿಗೆ ಉಚಿತ ಲಸಿಕೆ ನೀಡಲು ಸರ್ಕಾರ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಇದನ್ನೂ ಓದಿ: ನಾಳೆಯಿಂದ 14 ದಿನಗಳವರೆಗೆ ರಾಜ್ಯದಾದ್ಯಂತ ಲಾಕ್‌ಡೌನ್!‌

ಮೇ 1 ರಿಂದ ಆರಂಭವಾಗುವ ಲಸಿಕಾ ಕಾರ್ಯಕ್ರಮದಲ್ಲಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ವ್ಯವಸ್ಥೆ ಸಿಗಲಿದೆ. ರಾಜ್ಯದಲ್ಲಿ ಆಮ್ಲಜನಕದ ಸಮಸ್ಯೆಯಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ 800 ಟನ್ ಆಕ್ಸಿಜನ್ ಪೂರೈಕೆ ಆರಂಭವಾಗಿದ್ದು, ಆಕ್ಸಿಜನ್ ಕೊರತೆ ಸಮಸ್ಯೆ ಪೂರ್ಣ ಬಗೆಹರಿಯುತ್ತದೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇರುವುದಿಲ್ಲ ಎಂದಿದ್ದಾರೆ.

ಕೊರೊನಾ ನಿರ್ವಹಣೆಗೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ, ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ನೋಡಲ್ ಅಧಿಕಾರಿಗಳಾಗಿರುತ್ತಾರೆ.  ರಾಜ್ಯಕ್ಕೆ 1 ಲಕ್ಷ ರೆಮ್‌ಡಿಸಿವಿರ್ ಚುಚ್ಚುಮದ್ದು ಬರಲಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.

ಗುಜರಾತ್, ಒಡಿಶಾ, ರಾಜಸ್ಥಾನ, ಉತ್ತರ ಪ್ರದೇಶ, ಅಸ್ಸಾಂ, ಕೇರಳ, ಛತ್ತೀಸ್‌ಗಡ, ಮಹಾರಾಷ್ಟ್ರ, ದೆಹಲಿ, ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಉಚಿತ ಲಸಿಕೆ ನಿಡುವುದಾಗಿ ಘೋಷಿಸಿವೆ. ಇವುಗಳ ಸಾಲಿಗೆ ಕರ್ನಾಟಕ ಕೂಡ ಸೇರ್ಪಡೆಯಾಗಿದೆ.


ಇದನ್ನೂ ಓದಿ: ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...