ಹಿರಿಯ ಸ್ವಾತಂತ್ಯ್ರ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಹೃದಯಾಘಾತದಿಂದ ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 104 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ತಾನೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರು ಚೇತರಿಸಿಕೊಂಡಿದ್ದರು. ಅದರ ನಂತರ ಉಸಿರಾಟದ ತೊಂದರೆಯಿಂದಾಗಿ ಚಿಕಿತ್ಸೆಗೆ ಜಯದೇವ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ಕೊರೊನಾ ಕಾರಣಕ್ಕೆ ಅವರ ಅಂತಿಮ ದರ್ಶನವನ್ನು ಪಡೆಯಲು ಸಾಧ್ಯವಾಗದ ಅವರ ಅಭಿಮಾನಿಗಳಿಗಾಗಿ ಆನ್‌ಲೈನ್ ಮೂಲಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಅಂತಿಮ ಸಂಸ್ಕಾರಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲೂ ಸಿದ್ದತೆ ನಡೆಯುತ್ತಿದೆ.
ಹಿರಿಯ ಚೇತನದ ಅಗಲಿಕೆಗೆ ರಾಜಕೀಯ ನಾಯಕರು ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಗೌರವ ನಮನ| ದೊರೆಸ್ವಾಮಿ ಅವರ ಸಾರ್ಥಕ ಬದುಕಿನ ಮೈಲಿಗಲ್ಲುಗಳು
ಮುಖ್ಯಮಂತ್ರಿ ಯಡಿಯೂರಪ್ಪ, “ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿ, ಪತ್ರಕರ್ತ, ಸಮಾಜ ಸೇವಕರು, ನಾಡುನುಡಿ ಜನಪರ ಕಾಳಜಿಗಳಿಗೆ ಸದಾ ಧ್ವನಿಯಾಗಿದ್ದ ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ವಿಧಿವಶರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತಾ, ದೇವರು ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ” ಎಂದು ಹೇಳಿದ್ದಾರೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿ, ಪತ್ರಕರ್ತ, ಸಮಾಜ ಸೇವಕರು, ನಾಡುನುಡಿ ಜನಪರ ಕಾಳಜಿಗಳಿಗೆ ಸದಾ ಧ್ವನಿಯಾಗಿದ್ದ ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ವಿಧಿವಶರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತಾ, ದೇವರು ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ.
— B.S. Yediyurappa (@BSYBJP) May 26, 2021
ಕಾಂಗ್ರೆಸ್ ಪಕ್ಷವು, “ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ, ಬದುಕಿನ ಕೊನೆಯ ದಿನಗಳವರೆಗೂ ಮುಂಚೂಣಿಯಲ್ಲಿ ನಿಂತು ಜನಪರ ಧ್ವನಿಯಾಗುತ್ತಿದ್ದ ಶತಾಯುಷಿ, ಸ್ವತಂತ್ರ ಹೋರಾಟಗಾರ, ನಿಸ್ಟೂರವಾದಿ ದೊರೆಸ್ವಾಮಿಯವರ ನಿಧನವು ಈ ನಾಡಿಗೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳ ನೋವಿನಲ್ಲಿ ನಾವೂ ಬಾಗಿಗಳಾಗಿದ್ದೇವೆ” ಎಂದು ತಿಳಿಸಿದೆ.
ನಾಡಿನ ಸಾಕ್ಷಿಪ್ರಜ್ಞೆ, ಶತಾಯುಷಿ, ಸ್ವತಂತ್ರ ಹೋರಾಟಗಾರ ದೊರೆಸ್ವಾಮಿಯವರ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ.
ಬದುಕಿನ ಕೊನೆಯವರೆಗೂ ಜನಪರ ಚಳುವಳಿಯಲ್ಲಿ, ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಅವರ ಚೈತನ್ಯ ಅಪಾರವಾದುದು.
ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳ ನೋವಿನಲ್ಲಿ ನಾವೂ ಬಾಗಿಗಳಾಗಿದ್ದೇವೆ. pic.twitter.com/6t1HO58BBD
— Karnataka Congress (@INCKarnataka) May 26, 2021
ಗೃಹ ಸಚಿವ ಬಸವರಾಜ್ ಬೊಮ್ಮಾಯಿ, “ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಶ್ರೀ ಎಚ್. ಎಸ್. ದೊರೈಸ್ವಾಮಿ ಅವರು ನಿಧನರಾದ ಸುದ್ದಿ ತುಂಬಾ ದುಃಖದ ವಿಷಯ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಶ್ರೀ ಎಚ್. ಎಸ್. ದೊರೈಸ್ವಾಮಿ ಅವರು ನಿಧನರಾದ ಸುದ್ದಿ ತುಂಬಾ ದುಃಖದ ವಿಷಯ.
ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ#HSDoraiswamy pic.twitter.com/rzGT6sE9Nn
— Basavaraj S Bommai (@BSBommai) May 26, 2021
ಇದನ್ನೂ ಓದಿ: ಕೊರೊನಾ ಗೆದ್ದ ಹಿರಿಯಜೀವ ಎಚ್.ಎಸ್ ದೊರೆಸ್ವಾಮಿ


