Homeಕರ್ನಾಟಕಸ್ವಾತಂತ್ಯ್ರ ಹೋರಾಟಗಾರ, ಶತಾಯುಷಿ ಹೆಚ್‌.ಎಸ್‌. ದೊರೆಸ್ವಾಮಿ ಇನ್ನಿಲ್ಲ

ಸ್ವಾತಂತ್ಯ್ರ ಹೋರಾಟಗಾರ, ಶತಾಯುಷಿ ಹೆಚ್‌.ಎಸ್‌. ದೊರೆಸ್ವಾಮಿ ಇನ್ನಿಲ್ಲ

- Advertisement -
- Advertisement -

ಹಿರಿಯ ಸ್ವಾತಂತ್ಯ್ರ ಹೋರಾಟಗಾರ ಹೆಚ್‌.ಎಸ್‌. ದೊರೆಸ್ವಾಮಿ ಹೃದಯಾಘಾತದಿಂದ ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 104 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ತಾನೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರು ಚೇತರಿಸಿಕೊಂಡಿದ್ದರು. ಅದರ ನಂತರ ಉಸಿರಾಟದ ತೊಂದರೆಯಿಂದಾಗಿ ಚಿಕಿತ್ಸೆಗೆ ಜಯದೇವ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಕೊರೊನಾ ಕಾರಣಕ್ಕೆ ಅವರ ಅಂತಿಮ ದರ್ಶನವನ್ನು ಪಡೆಯಲು ಸಾಧ್ಯವಾಗದ ಅವರ ಅಭಿಮಾನಿಗಳಿಗಾಗಿ ಆನ್‌ಲೈನ್‌ ಮೂಲಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಅಂತಿಮ ಸಂಸ್ಕಾರಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲೂ ಸಿದ್ದತೆ ನಡೆಯುತ್ತಿದೆ.

ಹಿರಿಯ ಚೇತನದ ಅಗಲಿಕೆಗೆ ರಾಜಕೀಯ ನಾಯಕರು ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗೌರವ ನಮನ| ದೊರೆಸ್ವಾಮಿ ಅವರ ಸಾರ್ಥಕ ಬದುಕಿನ ಮೈಲಿಗಲ್ಲುಗಳು

ಮುಖ್ಯಮಂತ್ರಿ ಯಡಿಯೂರಪ್ಪ, “ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿ, ಪತ್ರಕರ್ತ, ಸಮಾಜ ಸೇವಕರು, ನಾಡುನುಡಿ ಜನಪರ ಕಾಳಜಿಗಳಿಗೆ ಸದಾ ಧ್ವನಿಯಾಗಿದ್ದ ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ವಿಧಿವಶರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತಾ, ದೇವರು ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು, “ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ, ಬದುಕಿನ ಕೊನೆಯ ದಿನಗಳವರೆಗೂ ಮುಂಚೂಣಿಯಲ್ಲಿ ನಿಂತು ಜನಪರ ಧ್ವನಿಯಾಗುತ್ತಿದ್ದ ಶತಾಯುಷಿ, ಸ್ವತಂತ್ರ ಹೋರಾಟಗಾರ, ನಿಸ್ಟೂರವಾದಿ ದೊರೆಸ್ವಾಮಿಯವರ ನಿಧನವು ಈ ನಾಡಿಗೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳ ನೋವಿನಲ್ಲಿ ನಾವೂ ಬಾಗಿಗಳಾಗಿದ್ದೇವೆ” ಎಂದು ತಿಳಿಸಿದೆ.

ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ, “ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಶ್ರೀ ಎಚ್. ಎಸ್. ದೊರೈಸ್ವಾಮಿ ಅವರು ನಿಧನರಾದ ಸುದ್ದಿ ತುಂಬಾ ದುಃಖದ ವಿಷಯ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಗೆದ್ದ ಹಿರಿಯಜೀವ ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...