Homeಅಂತರಾಷ್ಟ್ರೀಯಫ್ರೀಡಂ ಫ್ಲೋಟಿಲ್ಲಾ ಸದಸ್ಯರ ಮೇಲೆ ಇಸ್ರೇಲಿ ಪಡೆಗಳಿಂದ ಲೈಂಗಿಕ ದೌರ್ಜನ್ಯ ಆರೋಪ : ಸ್ವತಂತ್ರ ತನಿಖೆ...

ಫ್ರೀಡಂ ಫ್ಲೋಟಿಲ್ಲಾ ಸದಸ್ಯರ ಮೇಲೆ ಇಸ್ರೇಲಿ ಪಡೆಗಳಿಂದ ಲೈಂಗಿಕ ದೌರ್ಜನ್ಯ ಆರೋಪ : ಸ್ವತಂತ್ರ ತನಿಖೆ ಆಗ್ರಹ

- Advertisement -
- Advertisement -

ಗಾಝಾ ಮೇಲೆ ವಿಧಿಸಲಾಗಿದ್ದ ದಿಗ್ಬಂಧನವನ್ನು ಮುರಿಯಲು ಪ್ರಯತ್ನಿಸಿದ ಫ್ಲೋಟಿಲ್ಲಾ ಹಡಗುಗಳನ್ನು ತಡೆದ ನಂತರ, ಅವುಗಳಲ್ಲಿದ್ದ ಜಗತ್ತಿನ ವಿವಿಧ ಭಾಗಗಳ ಹಲವು ಹೋರಾಟಗಾರರನ್ನು ಇಸ್ರೇಲ್ ಸೇನೆ ಬಂಧಿಸಿದೆ.

ಈ ಬಂಧಿತರ ಮೇಲೆ ಇಸ್ರೇಲಿ ಪೊಲೀಸರು ಮತ್ತು ಜೈಲು ಅಧಿಕಾರಿಗಳು ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ನಡೆಸಿದ್ದಾರೆ ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಆರೋಪಿಸಿದೆ. ಆಪಾದಿತ ದೌರ್ಜನ್ಯ ಅಂತಾರಾಷ್ಟ್ರೀಯ ಕಾನೂನಿನ ಗಂಭೀರ ಉಲ್ಲಂಘನೆ ಎಂದಿರುವ ಒಕ್ಕೂಟ, ಈ ಕುರಿತು ಸ್ವತಂತ್ರ ಅಂತಾರಾಷ್ಟ್ರೀಯ ತನಿಖೆಗೆ ಒತ್ತಾಯಿಸಿದೆ.

ಗಾಝಾ ಬಳಿಯ ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಫ್ಲೋಟಿಲ್ಲಾ ಹಡುಗಗಳನ್ನು ಇಸ್ರೇಲ್ ತಡೆದು ನಿಲ್ಲಿಸಿದ ಬಳಿಕ, ಅದರಲ್ಲಿದ್ದ ಪತ್ರಕರ್ತರು ಮತ್ತು ಹೋರಾಟಗಾರರನ್ನು ಬಂಧಿಸಲಾಗಿದೆ. ಬಂಧಿತರ ಮೇಲೆ ಭೀಕರ ದೌರ್ಜನ್ಯ ನಡೆಸಲಾಗಿದೆ ಎಂದು ಒಕ್ಕೂಟ ಪ್ರಕಟನೆಯಲ್ಲಿ ತಿಳಿಸಿದೆ.

ಫ್ಲೋಟಿಲ್ಲಾ ತಂಡದ ಭಾಗವಾಗಿದ್ದ ‘ಕಾನ್ಸೈನ್ಸ್‌’ ಎಂಬ ಹಡಗಿನಲ್ಲಿದ್ದ ಜರ್ಮನ್ ಪತ್ರಕರ್ತೆ ಅನ್ನಾ ಲೀಡ್ಟ್ಕೆ ಡಿಸೆಂಬರ್ 21ರಂದು ನಡೆದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಇಸ್ರೇಲಿ ಕಸ್ಟಡಿಯಲ್ಲಿದ್ದಾಗ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಹೇಳಿಕೊಂಡಿದ್ದು, ಆ ಬಳಿಕ ದೌರ್ಜನ್ಯದ ವಿಷಯ ಬೆಳಕಿಗೆ ಬಂದಿದೆ.

“ತನ್ನನ್ನು ಬಂಧಿಸಿದ ಬಳಿಕ ಇಸ್ರೇಲಿ ಸೈನಿಕರು ಬಲವಂತವಾಗಿ ವಿವಸ್ತ್ರಗೊಳಿಸಿ ಶೋಧ ನಡೆಸಲು ಮುಂದಾದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಅತ್ಯಾಚಾರವೆಸಗಿದ್ದಾರೆ” ಎಂದು ಲೀಡ್ಟ್ಕೆ ಹೇಳಿದ್ದಾರೆ. ಈ ವಿಷಯ ಬಹಿರಂಗಪಡಿಸಿದಾಗಿನಿಂದ ಆಕೆಗೆ ನಾವು ಬೆಂಬಲವಾಗಿ ನಿಂತಿದ್ದೇವೆ ಎಂದು ಫ್ಲೋಟಿಲ್ಲಾ ಒಕ್ಕೂಟ ತಿಳಿಸಿದೆ.

ಇಟಾಲಿಯನ್ ಪತ್ರಕರ್ತ ವಿನ್ಸೆಂಜೊ ಫುಲೋನ್ ಮತ್ತು ಆಸ್ಟ್ರೇಲಿಯಾದ ಹೋರಾಟಗಾರ ಸೂರ್ಯ ಮೆಕ್‌ವೆನ್ ಕೂಡ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆಂದು ವರದಿ ಮಾಡಿದ್ದಾರೆ ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಹೇಳಿದೆ. ಈ ರೀತಿಯ ಹೆಚ್ಚುವರಿ ಮಾಹಿತಿಗಳು ಹೊರಬರುವ ನಿರೀಕ್ಷೆಯಿದೆ ಎಂದಿದೆ.

ದೌರ್ಜನ್ಯಕ್ಕೊಳಗಾದವರು, ಆ ವಿಷಯವನ್ನು ಹಂಚಿಕೊಳ್ಳುವಂತೆ ನಾವು ಒತ್ತಡೆ ಹೇರುವುದಿಲ್ಲ. ಅದು ಅವರ ಸ್ವಇಚ್ಚೆಗೆ ಬಿಟ್ಟಿದ್ದು. ಮಾಹಿತಿಯನ್ನು ಹಂಚಿಕೊಳ್ಳಬೇಕೆ, ಬೇಡವೇ ಎಂಬುವುದು ಅವರೇ ನಿರ್ಧರಿಸುತ್ತಾ ಎಂದು ಒಕ್ಕೂಟ ಹೇಳಿದೆ.

ಇಸ್ರೇಲ್‌ನ ಕೃತ್ಯಗಳು ಮಾನವ ಘನತೆ, ಅಂತಾರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಮಾನವೀಯ ಕಾನೂನಿನ ಗಂಭೀರ ಉಲ್ಲಂಘನೆಯಾಗಿವೆ. ಈ ಕುರಿತು ಸ್ವತಂತ್ರ ಮತ್ತು ಅಂತಾರಾಷ್ಟ್ರೀಯ ತನಿಖೆ ನಡೆಯಬೇಕು ಎಂದು ಒಕ್ಕೂಟ ಆಗ್ರಹಿಸಿದೆ.

ಫ್ಲೋಟಿಲ್ಲಾ ತಂಡದ ಸದಸ್ಯರ ಮೇಲೆ ನಡೆಸಿದ ದೌರ್ಜನ್ಯ, ಇಸ್ರೇಲ್ ಪ್ಯಾಲೆಸ್ತೀನ್ ಬಂಧಿತರ ಮೇಲೆ ನಡೆಸುತ್ತಿರುವ ದೌರ್ಜನ್ಯಕ್ಕೆ ಉದಾಹರಣೆಯಾಗಿದೆ. ಇಸ್ರೇಲಿ ಬಂಧನ ಕೇಂದ್ರಗಳಲ್ಲಿ ಪ್ಯಾಲೆಸ್ತೀನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ, ಅವರ ಘನೆತೆಯನ್ನು ಕುಗ್ಗಿಸುವ, ಮಾನವೀಯತೆಗೆ ವಿರುದ್ದವಾದ ಹಿಂಸೆಗಳು ನಡೆಯುತ್ತಿರುವ ಬಗ್ಗೆ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳು ವರದಿ ಮಾಡಿವೆ ಎಂದು ಒಕ್ಕೂಟ ಹೇಳಿದೆ.

ಗಾಝಾದಲ್ಲಿ ಇಸ್ರೇಲ್ ಆಕ್ರಮಣ ಪ್ರಾರಂಭಿಸಿದಾಗಿನಿಂದ ಪ್ಯಾಲೆಸ್ತೀನ್ ಬಂಧಿತರ ವಿರುದ್ಧ ವ್ಯವಸ್ಥಿತವಾಗಿ ಲೈಂಗಿಕ ಹಿಂಸೆಯನ್ನು ಬಳಸಲಾಗುತ್ತಿದೆ ಎಂದು ಪ್ಯಾಲೆಸ್ತೀನಿಯನ್ ಮಾನವ ಹಕ್ಕುಗಳ ಕೇಂದ್ರದ ಇತ್ತೀಚಿನ ವರದಿಗಳು ಆರೋಪಿಸಿವೆ. ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಸೇರಿದಂತೆ ವಿಶ್ವಸಂಸ್ಥೆಯ ಸಂಸ್ಥೆಗಳು ಮತ್ತು ಹಕ್ಕುಗಳ ಗುಂಪುಗಳು ಇಸ್ರೇಲಿ ಬಂಧನ ಕೇಂದ್ರಗಳಲ್ಲಿ ಲೈಂಗಿಕ ಮತ್ತು ಲಿಂಗ ಆಧಾರಿತ ಹಿಂಸಾಚಾರದ ಬಗ್ಗೆ ಈ ಹಿಂದೆ ವರದಿ ಮಾಡಿವೆ. ಕೆಲವು ದುರುಪಯೋಗಗಳನ್ನು ಸಂಭಾವ್ಯ ಯುದ್ಧ ಅಪರಾಧಗಳೆಂದು ವಿವರಿಸಿವೆ.

ವ್ಯವಸ್ಥಿತ ದುರುಪಯೋಗದ ಆರೋಪಗಳನ್ನು ಇಸ್ರೇಲ್ ಪದೇ ಪದೇ ತಿರಸ್ಕರಿಸಿದೆ ಮತ್ತು ಅದರ ಭದ್ರತಾ ಪಡೆಗಳು ಕಾನೂನಿನ ಆಳ್ವಿಕೆಯಡಿಯಲ್ಲಿ ಕಾರ್ಯನಿರ್ವಹಿಸುತ್ತವೆ ಎಂದು ಹೇಳುತ್ತದೆ. ದುರುಪಯೋಗದ ಆರೋಪಗಳನ್ನು ತನಿಖೆ ಮಾಡಲಾಗುತ್ತದೆ ಎಂದು ಇಸ್ರೇಲಿ ಅಧಿಕಾರಿಗಳು ಹೇಳಿದ್ದಾರೆ, ಆದರೂ ಮಾನವ ಹಕ್ಕುಗಳ ಗುಂಪುಗಳು ಆ ತನಿಖೆಗಳನ್ನು ನಿಷ್ಪರಿಣಾಮಕಾರಿ ಎಂದು ಟೀಕಿಸಿವೆ.

ಇಸ್ರೇಲ್‌ನ ಸಂಸ್ಥೆಗಳು, ಅಲ್ಲಿನ ಅಧಿಕಾರಿಗಳು ಮತ್ತು ಸಾಮಾನ್ಯ ಜನರು ಪ್ಯಾಲೆಸ್ತೀನಿಯರು ಮತ್ತು ಅವರನ್ನು ಬೆಂಬಲಿಸುವವರ ಮೇಲೆ ನಡೆಸುವ ದೌರ್ಜನ್ಯಗಳಿಗೆ ಯಾವುದೇ ಶಿಕ್ಷೆಯನ್ನು ವಿಧಿಸುತ್ತಿಲ್ಲ. ಅವರ ವಿರುದ್ದ ಕ್ರಮವೇ ಕೈಗೊಳ್ಳುತ್ತಿಲ್ಲ. ಹಾಗಾಗಿ, ಇಸ್ರೇಲ್‌ನ ನ್ಯಾಯಾಲಯಗಳು ಸೇರಿದಂತೆ ಯಾವುದೇ ಸಂಸ್ಥೆಗಳ ಮೇಲೆ ನಮಗೆ ನಂಬಿಕೆಯಿಲ್ಲ. ಹಾಗಾಗಿ, ಈ ದೌರ್ಜನ್ಯ ಪ್ರಕರಣಗಳನ್ನು ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಅಥವಾ ವಿಶ್ವಸಂಸ್ಥೆಯ ಅಧೀನಲ್ಲಿ ತನಿಖೆಯಾಗಬೇಕು ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಒತ್ತಾಯಿಸಿದೆ.

ಇಸ್ರೇಲ್‌ನ ಬಂಧನ ಕೇಂದ್ರಗಳಿಗೆ ಪ್ರವೇಶಿ ವಸ್ತುಸ್ಥಿತಿ ಅರಿಯಲು ಅವಕಾಶ ನೀಡುವಂತೆ ವಿಶ್ವಸಂಸ್ಥೆ ಮತ್ತು ಅದರ ಸದಸ್ಯ ರಾಷ್ಟ್ರಗಳು ಒತ್ತಾಯಿಸಬೇಕು. ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದ ಪ್ರತಿನಿಧಿಗಳು ಇಸ್ರೇಲ್ ಬಂಧನ ಕೇಂದ್ರಗಳಿಗೆ ತೆರಳಿ ಪರಿಶೀಲನೆ ನಡೆಸಬೇಕು. ಲೈಂಗಿಕ ಮತ್ತು ಚಿತ್ರಹಿಂಸೆಯ ಆರೋಪಗಳ ಕುರಿತು ತನಿಖೆಯಾಗಬೇಕು. ವಿಶೇಷವಾಗಿ ಪ್ಯಾಲೆಸ್ತೀನಿಯರ ಮೇಲಿನ ದೌರ್ಜನ್ಯದ ಕುರಿತು ತನಿಖೆ ನಡೆಸಬೇಕು ಎಂದು ಒಕ್ಕೂಟ ಮನವಿ ಮಾಡಿದೆ.

ನ್ಯೂಯಾರ್ಕ್ ಜೈಲಿನಲ್ಲಿ ಮಡುರೊ ; ವೆನಿಜುವೆಲಾವನ್ನು ಅಮೆರಿಕ ಆಳಲಿದೆ ಎಂದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...