Homeಮುಖಪುಟಮಾಧ್ಯಮ ಸ್ವಾತಂತ್ರ್ಯವೆಂದರೆ 'ಅಪರಾಧ ನಿರ್ಣಯ'ದ ಪರವಾನಗಿ ಅಲ್ಲ: ಕೇರಳ ಹೈಕೋರ್ಟ್

ಮಾಧ್ಯಮ ಸ್ವಾತಂತ್ರ್ಯವೆಂದರೆ ‘ಅಪರಾಧ ನಿರ್ಣಯ’ದ ಪರವಾನಗಿ ಅಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ತನಿಖೆಗಳು ನಡೆಯುತ್ತಿರುವ ವೇಳೆ ಕ್ರಿಮಿನಲ್ ಪ್ರಕರಣಗಳ ಕುರಿತು ವರದಿ ಮಾಡುವಾಗ ಮಾಧ್ಯಮಗಳು ತನಿಖಾ ಅಥವಾ ನ್ಯಾಯಾಂಗ ಅಧಿಕಾರಿಗಳ ಪಾತ್ರವನ್ನು ವಹಿಸಿಕೊಳ್ಳುವುದರಿಂದ ದೂರವಿರಬೇಕು ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ಸಂವಿಧಾನದ 19(1)(ಎ) ವಿಧಿಯ ಅಡಿಯಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಮೂಲಭೂತವಾಗಿದೆ ಎಂಬುವುದು ನಿಜ. ಆದರೆ, ಕೋರ್ಟ್‌ ತೀರ್ಪು ಪ್ರಕಟಿಸುವ ಮೊದಲು ಆರೋಪಿಯನ್ನು ಅಪರಾಧಿ ಅಥವಾ ನಿರಪರಾಧಿ ಎಂದು ತೀರ್ಪು ನೀಡಲು ಮಾಧ್ಯಮಕ್ಕೆ ಈ ವಿಧಿ ‘ಪರವಾನಗಿ’ ನೀಡುವುದಿಲ್ಲ ಎಂದು ಐವರು ನ್ಯಾಯಮೂರ್ತಿಗಳು ಹೇಳಿದ್ದಾರೆ. ಮಾಧ್ಯಮ ಸ್ವಾತಂತ್ರ್ಯವೆಂದರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನ್ಯಾಯಮೂರ್ತಿಗಳಾದ ಎಕೆ ಜಯಶಂಕರನ್ ನಂಬಿಯಾರ್, ಕೌಸರ್ ಎಡಪ್ಪಗತ್, ಮೊಹಮ್ಮದ್ ನಿಯಾಸ್ ಸಿಪಿ, ಸಿಎಸ್ ಸುಧಾ ಮತ್ತು ಶ್ಯಾಮ್ ಕುಮಾರ್ ವಿಕೆ ಅವರನ್ನೊಳಗೊಂಡ ಪೀಠವು ಈ ಹೇಳಿಕೆ ನೀಡಿದೆ. ಯಾವುದೆ ನಿರ್ಬಂಧವಿಲ್ಲದ ವರದಿಯ ಕಾರಣಕ್ಕೆ ಅಭಿಪ್ರಾಯಗಳಲ್ಲಿ ಪೂರ್ವಾಗ್ರಹ ಮತ್ತು ನ್ಯಾಯಾಂಗದ ತೀರ್ಪಿನ ಮೇಲೆ ಸಾರ್ವಜನಿಕರು ಅಪನಂಬಿಕೆ ಪಡುವುದಕ್ಕೆ ಕಾರಣವಾಗಲಿದೆ ಎಂದು ಪೀಠವು ತೀರ್ಪಿನಲ್ಲಿ ಹೇಳಿದೆ.

ಮಾಧ್ಯಮಗಳ ಈ ‘ವಿಚಾರಣೆ’ಯು ಸಾರ್ವಜನಿಕರ ಅಭಿಪ್ರಾಯವನ್ನು ತಪ್ಪಾಗಿ ಪ್ರಭಾವಿಸುತ್ತದೆ ಮತ್ತು ಶಂಕಿತರ ಬಗ್ಗೆ “ಮೊದಲೆ ತೀರ್ಮಾನ”ಕ್ಕೆ ಬರಲು ಕಾರಣವಾಗುತ್ತದೆ. ಇದರ ಪರಿಣಾಮ ಮಾಧ್ಯಮ “ಕಾಂಗರೂ ನ್ಯಾಯಾಲಯ”ವಾಗಿ ಪರಿವರ್ತನೆಯಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ. ಮಾಧ್ಯಮ ಸ್ವಾತಂತ್ರ್ಯವೆಂದರೆ

ಪ್ರಕರಣವೊಂದರ ಬಗ್ಗೆ ತನಿಖೆ ನಡೆಯುತ್ತಿರುವ ವೇಳೆ ಮಾಧ್ಯಮಗಳು ‘ವಿಚಾರಣೆ’ ನಡೆಸುತ್ತಿರುವುದರ ವಿರುದ್ಧ ಮಾಧ್ಯಮಗಳ ಅಧಿಕಾರವನ್ನು ನಿರ್ಬಂಧಿಸಲು ಕೋರಿ ಸಲ್ಲಿಕೆಯಾಗಿದ್ದ ಮೂರು ರಿಟ್ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಈ ತೀರ್ಪು ನೀಡಲಾಗಿದೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...