Homeಮುಖಪುಟ‘ಪ್ರತಿಭಟಿಸುವ ಹಕ್ಕು ಪ್ರಜಾಪ್ರಭುತ್ವದ ಮೂಲಧ್ಯೇಯ': ದಿಶಾ ಬೆಂಬಲಿಸಿ ಗ್ರೆಟಾ ಟ್ವೀಟ್

‘ಪ್ರತಿಭಟಿಸುವ ಹಕ್ಕು ಪ್ರಜಾಪ್ರಭುತ್ವದ ಮೂಲಧ್ಯೇಯ’: ದಿಶಾ ಬೆಂಬಲಿಸಿ ಗ್ರೆಟಾ ಟ್ವೀಟ್

ಸ್ವೀಡಿಷ್ ಪರಿಸರ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ಅವರು ದಿಶಾ ರವಿ ಅವರಿಗೆ ಬೆಂಬಲ ನೀಡಿದ್ದಾರೆ.

- Advertisement -
- Advertisement -

ಆಗಸ್ಟ್ 2018 ರಲ್ಲಿ ಗ್ರೆಟಾ ಥನ್ಬರ್ಗ್ 15 ವರ್ಷದವರಾಗಿದ್ದಾಗ ಸ್ಥಾಪಿಸಿದ ಫ್ರೈಡೇಸ್ ಫಾರ್ ಫ್ಯೂಚರ್ (ಎಫ್‌ಎಫ್‌ಎಫ್), “ಎಲ್ಲರಿಗೂ ನ್ಯಾಯವನ್ನು ಖಾತ್ರಿಪಡಿಸಿಕೊಳ್ಳಲು ಹೋರಾಡಿದವರ ಪರ ನಮ್ಮ ಧ್ವನಿಯನ್ನು ಶಾಂತಿಯುತವಾಗಿ ಮತ್ತು ಗೌರವದಿಂದ ಎತ್ತುತ್ತೇವೆ” ಎಂದು ಟ್ವೀಟ್ ಮಾಡಿದೆ.

“ವಾಕ್ ಸ್ವಾತಂತ್ರ‍್ಯ ಮತ್ತು ಶಾಂತಿಯುತ ಪ್ರತಿಭಟನೆ ಮತ್ತು ಸಭೆ ಸೇರುವ ಹಕ್ಕು ಚರ್ಚೆಯ ವಿಷಯವೇ ಅಲ್ಲದ ಮಾನವ ಹಕ್ಕುಗಳು. ಇವು ಯಾವುದೇ ಪ್ರಜಾಪ್ರಭುತ್ವದ ಮೂಲಧ್ಯೇಯವಾಗಿರಬೇಕು. # ಸ್ಟ್ಯಾಂಡ್‌ವಿತ್‌ದಿಶಾರವಿ” ಎಂದು ಟ್ವೀಟ್ ಮಾಡಿರುವ ಗ್ರೇಟಾ, ಎಫ್‌ಎಫ್‌ಎಫ್ ಪೋಸ್ಟ್ ಮಾಡಿದ ಎಳೆಯನ್ನು ಇಷ್ಟಪಟ್ಟಿದ್ದಾರೆ.

ರೈತರ ಪ್ರತಿಭಟನೆ ಹೇಗೆ ನಡೆಯಬೇಕು ಎಂದು ಯೋಜಿಸಲು ನಿಕಿತಾ ಜಾಕೋಬ್, ಶಾಂತನು ಮುಲುಕ್ ಅವರೊಂದಿಗೆ ದಿಶಾ “ಟೂಲ್ಕಿಟ್” ಅನ್ನು ಸಂಪಾದಿಸಿದ್ದಾರೆ ಎಂದು ಆರೋಪಿಸಿದ್ದ ದೆಹಲಿ ಪೊಲೀಸರು ದಿಶಾರನ್ನು ಬಂಧಿಸಿದ್ದರು. ಇಂತಹ ಕೃತ್ಯವು ದೇಶದ್ರೋಹಕ್ಕೆ ಸಮನಾಗಿರುತ್ತದೆ ಎಂದು ಪೊಲೀಸರು ಹೇಳಿದ್ದರು. ಯಾವುದೇ ಸಾಮಾಜಿಕ ಹೋರಾಟಕ್ಕೂ ಪ್ರಚಾರಕ್ಕೂ ಇಂತಹ ಯೋಜನೆ ಸಾಮಾನ್ಯವಾಗಿದೆ ಎಂಬ ವ್ಯಾಪಕ ಟೀಕೆಗಳು ಪೊಲೀಸರ ವಿರುದ್ಧ ಕೇಳಿಬಂದಿವೆ.

“ದಿಶಾ ಎಫ್‌ಎಫ್‌ಎಫ್ ಚಳವಳಿಯ ಅವಿಭಾಜ್ಯ ಅಂಗವಾಗಿದ್ದಾರೆ. ಅವರು ಭಾರತದಲ್ಲಿ ಪರಿಸರ ಕಾಳಜಿಯನ್ನು ವ್ಯಕ್ತಪಡಿಸುತ್ತಿರುವುದು ಮಾತ್ರವಲ್ಲದೆ ಜಾಗತಿಕ ಹವಾಮಾನ ಚಳವಳಿಯ ನಿರೂಪಣೆಯಲ್ಲಿ ದೇಶದ ಹೆಚ್ಚು ಪೀಡಿತ ಮತ್ತು ಅಂಚಿನಲ್ಲಿರುವ ಗುಂಪುಗಳ ಸಮಾನತೆ ಮತ್ತು ಪ್ರಾತಿನಿಧ್ಯಕ್ಕಾಗಿ ಶ್ರಮಿಸಿದ್ದಾರೆ” ಎಂದು ಎಫ್‌ಎಫ್‌ಎಫ್ ಟ್ವೀಟ್ ಮಾಡಿದೆ.

ದಿಶಾ ಅವರ ಜಾಮೀನು ಅರ್ಜಿಯನ್ನು ಶನಿವಾರ ವಿಚಾರಣೆ ನಡೆಸಲಾಗುವುದು. “ಸಾಕ್ಷ್ಯವನ್ನು ಹಾಳುಮಾಡುವ” ಸಾಧ್ಯತೆಯನ್ನು ಒತ್ತಿಹೇಳಿದ ಪೊಲೀಸರು ಶುಕ್ರವಾರ ದಿಶಾರಿಗೆ ಇನ್ನೂ ಮೂರು ದಿನಗಳ ನ್ಯಾಯಾಂಗ ಬಂಧನ ವಿಸ್ತರಿಸುವಲ್ಲಿ ಸಫಲರಾಗಿದ್ದಾರೆ.

ದಿಶಾ ಮೂರು ಸುದ್ದಿ ವಾಹಿನಿಗಳ ವಿರುದ್ಧ ಕ್ರಮಕೈಗೊಳ್ಳಲು ಮತ್ತು ಅವರ ಖಾಸಗಿ ಚಾಟ್‌ಗಳ ವಿಷಯ ಸೇರಿದಂತೆ ತನಿಖಾ ಸಾಮಗ್ರಿಗಳನ್ನು ಪೊಲೀಸರು ಸೋರಿಕೆ ಮಾಡದಂತೆ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ ನಂತರ, ದೆಹಲಿ ಹೈಕೋರ್ಟ್ ಸೆನ್ಸೆಷಲಿಸಂ ವಿರುದ್ಧ ಮಾಧ್ಯಮಗಳಿಗೆ ಎಚ್ಚರಿಕೆ ನೀಡಿದೆ. ಯಾವುದೇ ಖಾಸಗಿ ಚಾಟ್‌ಗಳನ್ನು ವರದಿಗಾರರಿಗೆ ಸೋರಿಕೆ ಮಾಡಿರುವುದನ್ನು ತನಿಖಾಧಿಕಾರಿಗಳು ನಿರಾಕರಿಸಿದ್ದಾರೆ.


ಇದನ್ನೂ ಓದಿ: ಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...