ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುವಂತೆ ಅಲ್ಲಿನ ಜನರು ಕಾಯುತ್ತಿರುವಾಗ, “ನಿರಂತರ ಹಾರುವ ಪ್ರಧಾನಿ” ಕುವೈತ್‌ಗೆ ತೆರಳಿದ್ದಾರೆ ಎಂದು ಕಾಂಗ್ರೆಸ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ. ರಕ್ಷಣಾ ಮತ್ತು ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಾಂಧವ್ಯವನ್ನು ಹೆಚ್ಚಿಸಲು ಮೋದಿ ಶನಿವಾರ ಕುವೈತ್‌ಗೆ ಎರಡು ದಿನಗಳ ಭೇಟಿಯನ್ನು ಪ್ರಾರಂಭಿಸಿದ್ದಾರೆ. ನಿರಂತರ ಹಾರುವ ಪ್ರಧಾನಿ
ಪ್ರಧಾನಿ ಮೋದಿಯ ಪ್ರವಾಸದ ಬಗ್ಗೆ ಎಕ್ಸ್‌ನಲ್ಲಿ ‘ಪ್ರಾಸಬದ್ಧ’ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂವಹನಗಳ ಉಸ್ತುವಾರಿ ಜೈರಾಮ್ ರಮೇಶ್, “ಮಿಸ್ಟರ್ ಮೋದಿ ಭೇಟಿಯನ್ನು ನಿರಾಕರಿಸುತ್ತಾ ಇದ್ದು, ಅದು ಅವರ ಹಣೆಬರಹ ಆಗಿ ಹೋಗಿದೆ. ಮಣಿಪುರದ ಜನರು ಇನ್ನೂ ಕಾಯುತ್ತಲೆ ಇದ್ದು, ಆದರೆ ನಿರಂತರ ಹಾರಾಡುತ್ತಿರುವ ಪ್ರಧಾನಿ ಕುವೈಟ್‌ಗೆ ತೆರಳಿದ್ದಾರೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮಣಿಪುರಕ್ಕೆ ಭೇಟಿ ನೀಡುವಂತೆ ಕಾಂಗ್ರೆಸ್ ಪದೇ ಪದೇ ಮೋದಿಯವರನ್ನು ಒತ್ತಾಯಿಸುತ್ತಿದೆ. ಅವರ ಭೇಟಿಯು ಗಲಭೆ ಪೀಡಿತ ರಾಜ್ಯದಲ್ಲಿ ಶಾಂತಿ ಮತ್ತು ಸಹಜತೆಯನ್ನು ಪುನಃಸ್ಥಾಪಿಸಲು ಸಹಾಯವಾಗುತ್ತದೆ ಎಂದು ಪಕ್ಷವು ಒತ್ತಿಹೇಳುತ್ತಿದೆ.
Such is their fate,
As Mr. Modi refuses to find a date.
The people of Manipur continue to wait,
While the Frequent Flyer PM is off to Kuwait. pic.twitter.com/dMsUauUnOD— Jairam Ramesh (@Jairam_Ramesh) December 21, 2024
2023ರ ಮೇ 3ರಂದು ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಬುಡಕಟ್ಟು ಜನಾಂದ ನಡುವೆ ಜನಾಂಗೀಯ ಹಿಂಸಾಚಾರಗಳು ಭುಗಿಲೆದ್ದಿತ್ತು. ನವೆಂಬರ್ 2024 ರ ಅಂತ್ಯದ ವೇಳೆಗೆ ಹಿಂಸಾಚಾರದಲ್ಲಿ 258 ಜನರು ಮೃತಪಟ್ಟಿದ್ದಾರೆ. ಹಿಂಸಾಚಾರದಿಂದ 9,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸುಮಾರು 60,000 ಜನರು ನಿರಾಶ್ರಿತರಾಗಿದ್ದಾರೆ. ಬಿಕ್ಕಟ್ಟಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸುವುದರೊಂದಿಗೆ ಪರಿಸ್ಥಿತಿಯು ಉಲ್ಬಣಗೊಳ್ಳುತ್ತಲೆ ಇದೆ.
ಇತ್ತಿಚೆಗಷ್ಟೆ, ಮಣಿಪುರದ ಜನಾಂಗೀಯ ಹಿಂಸಾಚಾರದ ಸಂದರ್ಭದಲ್ಲಿ ಸಂಪೂರ್ಣ ಅಥವಾ ಭಾಗಶಃ ಸುಟ್ಟು ಭಸ್ಮವಾಗಿರುವ ವಸತಿಗಳು ಮತ್ತು ಆಸ್ತಿಗಳ ವಿವರಗಳನ್ನು ಮುಚ್ಚಿದ ಕವರ್‌ನಲ್ಲಿ ಒದಗಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಜೊತೆಗೆ, ಅಪರಾಧಿಗಳು ಮತ್ತು ಅತಿಕ್ರಮಣದಾರರ ವಿರುದ್ಧ ತೆಗೆದುಕೊಂಡ ಕ್ರಮಗಳ ವಿವರಗಳನ್ನು ಹೇಳುವಂತೆ ಕೂಡಾ ನೀಡುವಂತೆ ಅದು ಹೇಳಿತ್ತು. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಜನವರಿ 20 ನಂತರದ ಅರ್ಜಿಯ ವಿಚಾರಣೆಗೆ ನಿಗದಿಪಡಿಸಿದೆ.
ಕಳೆದ ವರ್ಷ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್, ಸಂತ್ರಸ್ತರ ಪರಿಹಾರ ಮತ್ತು ಪುನರ್ವಸತಿ ಮತ್ತು ಅವರಿಗೆ ಪರಿಹಾರವನ್ನು ಮೇಲ್ವಿಚಾರಣೆ ಮಾಡಲು ಮೂವರು ಮಾಜಿ ಮಹಿಳಾ ಹೈಕೋರ್ಟ್ ನ್ಯಾಯಾಧೀಶರ ಸಮಿತಿಯನ್ನು ಸ್ಥಾಪಿಸಲು ಆದೇಶಿಸಿತ್ತು. ಜೊತೆಗೆ ಅಪರಾಧ ಪ್ರಕರಣಗಳ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಮಹಾರಾಷ್ಟ್ರದ ಮಾಜಿ ಪೊಲೀಸ್ ಮುಖ್ಯಸ್ಥ ದತ್ತಾತ್ರೇ ಪಡಸಾಲ್ಗಿಕರ್ ಅವರನ್ನು ಕೇಳಿತ್ತು.
ಇದನ್ನೂ ಓದಿ: ಮಣಿಪುರ: ಕಕ್ಚಿಂಗ್ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು
ಮಣಿಪುರ: ಕಕ್ಚಿಂಗ್ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು


