Homeಮುಖಪುಟಮಣಿಪುರ : ಶಾಂತಿ ಮಾತುಕತೆಯ ಬೆನ್ನಲ್ಲೇ ಮತ್ತೆ ಹಿಂಸಾಚಾರ

ಮಣಿಪುರ : ಶಾಂತಿ ಮಾತುಕತೆಯ ಬೆನ್ನಲ್ಲೇ ಮತ್ತೆ ಹಿಂಸಾಚಾರ

- Advertisement -
- Advertisement -

ಮಣಿಪುರದ ಜಿರಿಬಾಮ್‌ನಲ್ಲಿ ಶಾಂತಿ ಮರುಸ್ಥಾಪನೆಗೆ ಮೈತೆಯಿ-ಹ್ಮಾರ್ ಸಮುದಾಯಗಳು ಒಪ್ಪಿಗೆ ಸೂಚಿಸಿ 24 ಗಂಟೆ ಕಳೆಯುವುದೊರೊಳಗೆ ಮತ್ತೆಯ ಹಿಂಸಾಚಾರ ಭುಗಿಲೆದ್ದಿದೆ.

ಸೆಜಾಂಗ್ ಎಂಬ ಕುಕಿ ಹಳ್ಳಿಯ ಸಮೀಪವಿರುವ ಬೆಂಗಾಲಿ ಬಹುಸಂಖ್ಯಾತ ಪ್ರದೇಶವಾದ ಜಿರಿಬಾಮ್‌ನ ಲಾಲ್ಪಾನಿಯಲ್ಲಿ ಮೈತೆಯಿ ಕುಟುಂಬದ ಮನೆಗೆ ಬೆಂಕಿ ಹಚ್ಚಲಾಗಿದೆ.

“ಲಾಲ್ಪಾನಿ ಮೈತೆಯಿ ಸಮುದಾಯದ ನಿವಾಸಿಗಳು ವಾಸಿಸುತ್ತಿದ್ದ ಮನೆಗಳಿದ್ದ ಕಾಲನಿಯಾಗಿದ್ದು, ಜಿಲ್ಲೆಯಲ್ಲಿ ಹಿಂಸಾಚಾರ ಸ್ಫೋಟಗೊಂಡ ನಂತರ, ಬಹುತೇಕ ಮಂದಿ ತಮ್ಮ ಮನೆಗಳನ್ನು ತೊರೆದು ಹೋಗಿದ್ದರು. ಈ ಪ್ರದೇಶದಲ್ಲಿನ ಭದ್ರತಾ ವೈಫಲ್ಯದ ಲಾಭವನ್ನು ಪಡೆದು, ಅಪರಾಧ ಕೃತ್ಯ ಎಸಗಲು ದುಷ್ಕರ್ಮಿಗಳು ಬಳಸಿಕೊಂಡಿದ್ದು, ಅವರ ಗುರುತನ್ನು ಇನ್ನಷ್ಟೇ ಪತ್ತೆ ಹಚ್ಚಬೇಕಿದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ವರದಿಯಾಗಿದೆ.

“ಘಟನಾ ಸ್ಥಳಕ್ಕೆ ನಾವು ಸಿಆರ್‌ಪಿಎಫ್‌ನೊಂದಿಗೆ ಸಂಯೋಜಿತ ತಂಡವನ್ನು ಕಳುಹಿಸಿದ್ದೇವೆ” ಎಂದು ಜಿರಿಬಾಮ್ ಪೊಲೀಸ್ ವರಿಷ್ಠಾಧಿಕಾರಿ ಎಂ ಪ್ರದೀಪ್ ಸಿಂಗ್ ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. “ಕೊಂಚ ಉದ್ವಿಗ್ನತೆ ಇತ್ತು. ಆದರೆ, ಅದು ಮತ್ತಷ್ಟು ಉಲ್ಬಣಗೊಳ್ಳದಂತೆ ನಾವು ಪರಿಸ್ಥಿತಿ ನಿಯಂತ್ರಿಸಿದ್ದೇವೆ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಹೇಗೆ ಎಂಬುದರ ಕುರಿತು ಚರ್ಚಿಸಲು ಸಭೆ ನಡೆಸುತ್ತಿದ್ದೇವೆ” ಎಂದು ಪ್ರದೀಪ್ ಸಿಂಗ್ ಹೇಳಿದ್ದಾರೆ.

ಗುರುವಾರ ಅಸ್ಸಾಂನ ಕ್ಯಾಚಾರ್‌ನಲ್ಲಿರುವ ಸಿಆರ್‌ಪಿಎಫ್ ಸೌಲಭ್ಯದಲ್ಲಿ ನಡೆದ ಮೈತೆಯಿ ಮತ್ತು ಹ್ಮಾರ್ ಸಮುದಾಯಗಳ ಪ್ರತಿನಿಧಿಗಳ ಸಭೆಯಲ್ಲಿ ಶಾಂತಿ ಒಪ್ಪಂದಕ್ಕೆ ಮಾಡಿಕೊಳ್ಳಲಾಗಿತ್ತು. ಜಿರಿಬಾಮ್ ಜಿಲ್ಲಾಡಳಿತ, ಅಸ್ಸಾಂ ರೈಫಲ್ಸ್ ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಿರಿಬಾಮ್ ಜಿಲ್ಲೆಯ ಥಾಡೌ, ಪೈಟೆ ಮತ್ತು ಮಿಜೋ ಸಮುದಾಯಗಳ ಪ್ರತಿನಿಧಿಗಳೂ ಇದ್ದರು.

ಫೋಟೋ ಸಾಂದರ್ಭಿಕ

ಇದನ್ನೂ ಓದಿ : ವಯನಾಡ್ ಭೂಕುಸಿತ | ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ನಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...