Homeಚಳವಳಿ'ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಸಮಯವನ್ನೂ, ರೈತರನ್ನೂ ಕೊಲ್ಲುತ್ತಿದೆ: AIKSCC

‘ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಸಮಯವನ್ನೂ, ರೈತರನ್ನೂ ಕೊಲ್ಲುತ್ತಿದೆ: AIKSCC

AIKSCC ಸಮಸ್ತ ರೈತ-ದಲಿತ-ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಡಿಸೆಂಬರ್ 16 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ನಿರಂತರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ.

- Advertisement -
- Advertisement -

ಕೇಂದ್ರ ಸರ್ಕಾರವು ಅಸಾಂವಿಧಾನಿಕ ವಿಧಾನದಿಂದ, ಅತ್ಯಂತ ಅಪ್ರಜಾತಾಂತ್ರಿಕ ರೀತಿಯಲ್ಲಿ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ಖಾತರಿ (ಎಂಎಸ್‌ಪಿ)ಯನ್ನು ಶಾಸನಬದ್ಧಗೊಳಿಸಬೇಕು ಮತ್ತು ಸಾರ್ವಜನಿಕ ಸಾಲ ಒದಗಿಸುವ ಹಾಗೂ ಋಣಮುಕ್ತಿ ನೀಡುವ ಕಾಯ್ದೆ ಜಾರಿಗೆ ತರಬೇಕು ಎಂಬ ಹಕ್ಕೊತ್ತಾಯಗಳೊಂದಿಗೆ ದೇಶದ ನಾನಾ ಭಾಗಗಳ ಒಂದು ಕೋಟಿಗೂ ಹೆಚ್ಚು ರೈತರು ಇದೇ ನವೆಂಬರ್ 26 ರಿಂದ ದೆಹಲಿಯ ಸರಹದ್ದಿನಲ್ಲಿ ಸತತವಾಗಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕಳೆದ 70 ವರ್ಷಗಳಲ್ಲೆಂದೂ ಇರದಿದ್ದಂತಹ ತೀವ್ರ ಚಳಿಯಿಂದಾಗಿ ಈ ಕಷ್ಟಜೀವಿಗಳು ಅಪಾರ ಬವಣೆಗೆ ಈಡಾಗಿರುವುದಲ್ಲದೆ ಈಗಾಗಲೇ ಸುಮಾರು 40ಕ್ಕೂ ಹೆಚ್ಚು ಜನರು ದಾರುಣವಾಗಿ ಸಾವಿಗೆ ಬಲಿಯಾಗಿದ್ದಾರೆಂದು ವರದಿಗಳು ತಿಳಿಸಿವೆ. ಇದ್ಯಾವುದನ್ನೂ ಪರಿವೆ ಮಾಡದ ‘ಐಲುದೊರೆ ನೀರೋ’ನಂಥ ಕ್ರೂರಿ ಕೇಂದ್ರ ಸರ್ಕಾರ ಮಾತುಕತೆಯ ನಾಟಕವಾಡುತ್ತ ಸಮಯವನ್ನೂ ರೈತರನ್ನೂ ಕೊಲ್ಲುತ್ತಿದೆ ಎಂದು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ರಾಜ್ಯ ಸಮಿತಿ ಕಿಡಿಕಾರಿದೆ.

ದೇಶದ ಅನ್ನದಾತರಾದ ರೈತಾಪಿ ವರ್ಗ ಅಮಾಯಕರಿರಬಹುದು, ಆದರೆ ಸರ್ಕಾರಗಳು ಬಿಂಬಿಸುತ್ತಿರುವಂತೆ ದಡ್ಡರೋ, ಮೂರ್ಖರೋ ಅಲ್ಲ; ತಮಗೇನು ಬೇಕು, ಏನು ಬೇಡ ಎಂಬ ಬಗ್ಗೆ ಅವರಿಗೆ ಪೂರ್ಣ ಅರಿವಿದೆ ಎಂಬುದನ್ನು ಜನತೆ ಮನಗಾಣುತ್ತಾರೆಂಬ ನಂಬಿಕೆಯಿದೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ AIKSCC ಸಂಪೂರ್ಣ ಬೆಂಬಲ ನೀಡುವುದಲ್ಲದೆ ರೈತರು ಡಿ. 16 ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ದೇಶವ್ಯಾಪಿ ಪ್ರತಿಭಟನೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಇತ್ತ ಕರ್ನಾಟಕದ ಬಿಜೆಪಿ ಸರ್ಕಾರವೂ ಸಹ ಕೇಂದ್ರದ ಈ ಎಲ್ಲ ಕಾಯ್ದೆಗಳನ್ನು ರಾಜ್ಯದಲ್ಲೂ ಅನುಷ್ಠಾನಕ್ಕೆ ತರಲು ಸುಗ್ರೀವಾಜ್ಞೆಗಳನ್ನು ಬಳಸುತ್ತ, ವಿಧಾನಮಂಡಲದಲ್ಲೂ ಕಾಯ್ದೆಯಾಗಿ ಪಾಸು ಮಾಡಿಕೊಳ್ಳಲು ಹವಣಿಸಿದೆ. ಅಲ್ಲದೆ, ಕಾರ್ಪೊರೇಟ್ ಕಂಪನಿಗಳು, ಭೂಗಳ್ಳ ಮಾಫಿಯಾಗಳು ಹಾಗೂ ಕಪ್ಪುಹಣದ ತಿಮಿಂಗಿಲಗಳು ತಮಗೆ ಬೇಕಾದಂತೆ, ಬೇಕಾದ ಕೃಷಿಯೇತರ ಲಾಭಕೋರ ಉದ್ದೇಶಕ್ಕೆ, ಬೇಕಾದಷ್ಟು ಕೃಷಿ ಭೂಮಿಯನ್ನು ಖರೀದಿಸಲು, ವ್ಯವಸಾಯದಲ್ಲಿ ತೊಡಗಲು ಅನುಕೂಲವಾಗುವಂತೆ ‘ಕರ್ನಾಟಕ ಭೂ ಸುಧಾರಣೆ ಕಾಯ್ದೆ-1961’ಕ್ಕೆ ಕೃಷಿಗೆ ಮಾರಕವಾಗುವಂತಹ ತಿದ್ದುಪಡಿಗಳನ್ನು ಮಾಡಿ ರೈತರನ್ನು ದಿವಾಳಿಯಾಗಿಸಲು ಹೊರಟಿದೆ. ಅದೇ ರೀತಿಯಲ್ಲಿ ಕಾರ್ಪೋರೇಟ್ ಕಂಪನಿಗಳ ಮುಂಗಡ ಕೃಷಿ ವ್ಯಾಪಾರಕ್ಕೆ ಅನೂಕೂಲವಾಗುವಂತೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಇದರ ವಿರುದ್ಧ ಕರ್ನಾಟಕದ ಸಮಸ್ತ ರೈತಾಪಿ ಜನತೆ ತಿಂಗಳುಗಟ್ಟಲೆ ಹೋರಾಟ ಮಾಡಿದರೂ ಸರ್ಕಾರ ಅದಕ್ಕೆ ಕಿವಿಗೊಡುತ್ತಿಲ್ಲ ಎಂದು ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.

ಇಷ್ಟು ಸಾಲದೆಂಬಂತೆ, ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗಲು, ರೈತರಿಗೆ ಮಾರಕವಾಗುವಂತಹ ಜಾನುವಾರು ಹತ್ಯ ನಿಷೇಧ(ತಿದ್ದುಪಡಿ) ಕಾಯ್ದೆಯನ್ನು ಜಾರಿಗೊಳಿಸಲು ಸರ್ಕಾರ ಸಜ್ಜಾಗಿದೆ. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಅನಾದಿ ಕಾಲದಿಂದಲೂ ರೈತರು ತಮ್ಮ ಅಗತ್ಯಕ್ಕೆ ತಕ್ಕಂತೆ ಜಾನುವಾರುಗಳನ್ನು ಸಾಕುತ್ತ, ದನಕರುಗಳನ್ನು ಗೋಮಾತೆಯೆಂದು ಪೂಜಿಸುತ್ತ ಬಂದಿದ್ದಾರೆ. ಅನುಪಯುಕ್ತವಾದವುಗಳನ್ನು ವಿಲೇವಾರಿ (ಡಿಸ್ಪೋಸ್) ಮಾಡುತ್ತಲೂ ಬಂದಿದ್ದಾರೆ. ದೇಸೀ ತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸರ್ಕಾರಗಳು ಸರಿಯಾಗಿ ಗಮನ ನೀಡದೆ ಹೋದ ಕಾರಣ ಹಲವು ಗೋ ತಳಿಗಳು ಅವಸಾನದ ಹಂತ ತಲುಪಿವೆಯೇ ಹೊರತು, ರೈತರು ಅನುಪಯುಕ್ತ ಜಾನುವಾರುಗಳನ್ನು ವಿಲೇವಾರಿ ಮಾಡಿದ್ದರಿಂದಾಗಲಿ, ಅಂಥವುಗಳ ಮಾಂಸವನ್ನು ಕೆಲವು ಜನಸಮುದಾಯಗಳು ಆಹಾರವಾಗಿ ಬಳಸುತ್ತ ಬಂದುದರಿಂದಾಗಲಿ ದೇಶದಲ್ಲಿ ಯಾವತ್ತೂ ದನಕರುಗಳ/ಜಾನುವಾರುಗಳ ಕೊರತೆ ಉಂಟಾಗಿಲ್ಲ. ಈಗ ಬಿಜೆಪಿ ಸರ್ಕಾರ ತರಲು ಹೊರಟಿರುವ ಕಾಯ್ದೆ ಕೇವಲ ದುರುದ್ದೇಶದಿಂದ ಕೂಡಿದ್ದು, ಅದರಿಂದಾಗಿ ರೈತರು ಜಾನುವಾರು ಸಾಕುವುದನ್ನೇ ಕೈಬಿಡುವಂತಾಗಿ, ಕೃಷಿ ಬದುಕಿನ ಮೇಲೆ, ಹೈನುಗಾರಿಕೆಯ ಮೇಲೆ ಹಾಗೂ ಕೃಷಿ ಆರ್ಥಿಕತೆಯ ಮೇಲೆ ತೀವ್ರವಾದ ಮಾರಕ ಪರಿಣಾಮಗಳು ಉಂಟಾಗುತ್ತವೆ. ಇರುವ ದನಕರುಗಳ ಸಂತತಿಯೂ ಕ್ರಮೇಣ ಅವಸಾನಗೊಳ್ಳುತ್ತದೆ. ಹೈನೋದ್ಯಮ, ಮಾಂಸೋದ್ಯಮ ಮತ್ತು ಚರ್ಮೋದ್ಯಮಗಳು ಕಾರ್ಪೋರೇಟ್ ಲೂಟಿಯ ಪಾಲಾಗಲಿವೆ.
ಆದಕಾರಣ, ಕರ್ನಾಟಕ ಸರ್ಕಾರ ವಿಧಾನ ಮಂಡಲದಲ್ಲಿ ಪಾಸು ಮಾಡಿಕೊಂಡಿರುವ ಭೂ ಸುಧಾರಣಾ ತಿದ್ದುಪಡಿ ಮಸೂದೆ-2020, ಎಪಿಎಂಸಿ ತಿದ್ದುಪಡಿ ಮಸೂದೆ-2020, ಜಾನುವಾರು ಹತ್ಯ ನಿಷೇಧ ತಿದ್ದುಪಡಿ ಮಸೂದೆ-2020 ಮತ್ತು ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಬೇಕು, ಕೇಂದ್ರ ಸರ್ಕಾರ ತಂದಿರುವ ಕಾಯ್ದೆಗಳನ್ನು ರಾಜ್ಯದಲ್ಲಿ ಜಾರಿ ಮಾಡಬಾರದು ಎಂದು AIKSCC ರಾಜ್ಯ ಘಟಕ ಆಗ್ರಹಿಸಿದೆ.

ಈ ನಿಟ್ಟಿನಲ್ಲಿ AIKSCC ಸಮಸ್ತ ರೈತ-ದಲಿತ-ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಡಿಸೆಂಬರ್ 16 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ನಿರಂತರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ. ರೈತಾಪಿಯ ಈ ಎಲ್ಲ ಹಕ್ಕೊತ್ತಾಯಗಳು ಈಡೇರುವವರೆಗೂ ಹೋರಾಟಗಳು ನಿಲ್ಲುವುದಿಲ್ಲ, ಇದರಿಂದ ಉಂಟಾಗುವ ಯಾವುದೇ ದುಷ್ಪರಿಣಾಮಗಳಿಗೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

AIKSCC ರಾಜ್ಯ ಸಮತಿಯ ಪರವಾಗಿ ಕವಿತಾ ಕುರುಗಂಟಿ, ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ ಜಿ.ಸಿ.ಬಯ್ಯಾರೆಡ್ಡಿ, ಪಿ.ವಿ.ಲೋಕೇಶ್, ಎಚ್.ವಿ.ದಿವಾಕರ್ ನಿತ್ಯಾನಂದ ಸ್ವಾಮಿ, ಯು. ಬಸವರಾಜ,
ಚಂದ್ರಪ್ಪ ಹೊಸ್ಕೇರಾ, ಕುಮಾರ್ ಸಮತಳ, ಡಾಟ ಜನಾರ್ದನ, ಚಾಮರಸ ಮಾಲಿಪಾಟೀಲ್‌ರವರು ಪತ್ರಿಕಾ ಹೇಳಿಕೆಗೆ ಸಹಿ ಮಾಡಿದ್ದಾರೆ.


ಇದನ್ನೂ ಓದಿ: ರಾಜ್ಯಪಾಲರೇ, ಭೂಸುಧಾರಣಾ ಕಾಯ್ದೆಗೆ ಸಹಿ ಹಾಕಬೇಡಿ: ಟ್ವಿಟ್ಟರ್ ದಾಳಿಗೆ ಸಿದ್ದತೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...