Homeಮುಖಪುಟಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ 66 ವರ್ಷದ ಅಜಿತ್‌ ಪವಾರ್ ಅವರ ಜೀವದ ಜೊತೆಗೆ ವೃತ್ತಿಜೀವನ್ನೂ ಮೊಟಕುಗೊಳಿಸಿತು.

ಜುಲೈ 22, 1959 ರಂದು ಅಹ್ಮದ್‌ನಗರ ಜಿಲ್ಲೆಯ ಡಿಯೋಲಾಲಿ ಪ್ರವರದಲ್ಲಿ ಜನಿಸಿದ ಅಜಿತ್ ಪವಾರ್, ಮಹಾರಾಷ್ಟ್ರದ ಸಾರ್ವಜನಿಕ ಜೀವನದಲ್ಲಿ ಆಳವಾಗಿ ಬೆಸೆದುಕೊಂಡಿದ್ದ ರಾಜಕೀಯ ಕುಟುಂಬದಲ್ಲಿ ಬೆಳೆದರು.

ಅಜಿತ್ 18 ವರ್ಷ ವಯಸ್ಸಿನವನಾಗಿದ್ದಾಗ ಅವರ ತಂದೆ ಅನಂತರಾವ್ ಪವಾರ್ ನಿಧನರಾದರು. ನಂತರ ಅವರು ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರ ಜೊತೆಗೆ ಸಕ್ರಿಯ ರಾಜಕೀಯಕ್ಕೆ ಸೇರಿಸಿಕೊಂಡರು. 1982 ರಲ್ಲಿ ಸಕ್ಕರೆ ಸಹಕಾರಿ ಸಂಸ್ಥೆಯ ಮಂಡಳಿಗೆ ಆಯ್ಕೆಯಾಗುವ ಮೂಲಕ ತಮ್ಮ ಸಾರ್ವಜನಿಕ ಜೀವನವನ್ನು ಪ್ರಾರಂಭಿಸಿದರು.

ಅವರ ಆರಂಭಿಕ ವರ್ಷಗಳು, ಪಶ್ಚಿಮ ಮಹಾರಾಷ್ಟ್ರದಲ್ಲಿ ರಾಜಕೀಯವನ್ನು ರೂಪಿಸಿದ ಸಹಕಾರಿ ಸಂಸ್ಥೆಗಳ ಸುತ್ತ ಕಳೆದವು. ಅವರು ಪ್ರಮುಖ ರಾಜಕೀಯ ಹುದ್ದೆಯನ್ನು ವಹಿಸಿಕೊಳ್ಳುವ ಮೊದಲೇ ಸಕ್ಕರೆ ಕಾರ್ಖಾನೆಗಳು, ಹಾಲು ಒಕ್ಕೂಟಗಳು ಮತ್ತು ಸ್ಥಳೀಯ ಬ್ಯಾಂಕ್‌ಗಳೊಂದಿಗೆ ಕೆಲಸ ಮಾಡುವ ಮೂಲಕ ತಮ್ಮ ರಾಜಕೀಯವಾಗಿ ಭದ್ರಗೊಂಡರು.

1991 ರಲ್ಲಿ, ಅವರು ಪುಣೆ ಜಿಲ್ಲಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದರು, 16 ವರ್ಷಗಳ ಕಾಲ ಆ ಹುದ್ದೆಯನ್ನು ಅಲಂಕರಿಸಿದರು.

ಪವಾರ್ ಅವರ ಮೊದಲ ಚುನಾವಣಾ ಸ್ಪರ್ಧೆಯು 1991 ರಲ್ಲಿ ಬಾರಾಮತಿಯಿಂದ ಲೋಕಸಭೆಗೆ ಆಯ್ಕೆಯಾದಾಗುವ ಮೂಲಕ ಆರಂಭವಾಯಿತು. ನರಸಿಂಹರಾವ್ ಸರ್ಕಾರದಲ್ಲಿ ಶರದ್ ಪವಾರ್ ರಕ್ಷಣಾ ಸಚಿವರಾದ ನಂತರ ಅವರು ಆ ಸ್ಥಾನವನ್ನು ತೊರೆದು ರಾಜ್ಯ ರಾಜಕೀಯಕ್ಕೆ ಬಂದರು. ಅದೇ ವರ್ಷ ಬಾರಾಮತಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಗೆದ್ದರು.

ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ನಿರಂತರವಾಗಿ ಪ್ರತಿನಿಧಿಸುತ್ತಿದ್ದ ಸ್ಥಾನ ಇದು. ನವೆಂಬರ್ 2024 ರಲ್ಲಿ, ಅವರು ಎಂಟನೇ ಬಾರಿಗೆ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಅಲ್ಲಿ ಗೆದ್ದರು.

ಅಲ್ಲಿಂದ, ಪವಾರ್ ಅವರ ರಾಜಕೀಯ ಏರಿಕೆ ಸ್ಥಿರವಾಗಿತ್ತು. ಅವರು ತಮ್ಮ ಆಡಳಿತಾತ್ಮಕ ದಕ್ಷತೆ ಮತ್ತು ರಾಜ್ಯ ನೀತಿಯಲ್ಲಿ, ವಿಶೇಷವಾಗಿ ಹಣಕಾಸು, ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಗಣನೀಯ ಪ್ರಭಾವ ಬೀರಿದ್ದಕ್ಕಾಗಿ ಹೆಸರುವಾಸಿಯಾದರು.

ಇತ್ತೀಚಿನ ವರ್ಷಗಳಲ್ಲಿ, ಅವರು ನೀರಾವರಿ, ಜಲಸಂಪನ್ಮೂಲಗಳು ಮತ್ತು ಹಣಕಾಸು ಸೇರಿದಂತೆ ಹಲವಾರು ಹೆವಿವೇಯ್ಟ್ ಖಾತೆಗಳನ್ನು ನಿರ್ವಹಿಸಿದರು. ಮಹಾರಾಷ್ಟ್ರದ ಬಜೆಟ್ ತಯಾರಿಕೆ ಮತ್ತು ಅಧಿಕಾರಶಾಹಿ ನಿರ್ಧಾರ ತೆಗೆದುಕೊಳ್ಳುವಿಕೆಯ ಪ್ರಮುಖ ವ್ಯಕ್ತಿಯಾದರು.

ಅವರು ಉಪಮುಖ್ಯಮಂತ್ರಿಯಾಗಿ ಹಲವು ಅವಧಿಗೆ ಸೇವೆ ಸಲ್ಲಿಸಿದರು. ಆ ಹುದ್ದೆಯಲ್ಲಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ರಾಜಕಾರಣಿಗಳಲ್ಲಿ ಒಬ್ಬರಾದರು.

ಅವರ ರಾಜಕೀಯ ಪ್ರಯಾಣವು ಹಲವಾರು ತಿರುವುಗಳಿಂದ ಗುರುತಿಸಲ್ಪಟ್ಟಿದೆ. ನವೆಂಬರ್ 2019 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ, ಭಾರತೀಯ ಜನತಾ ಪಕ್ಷ ಮತ್ತು ಶಿವಸೇನೆಯ ನಡುವಿನ ವಿಭಜನೆಯ ನಂತರ, ಅವರು ಮತ್ತು ದೇವೇಂದ್ರ ಫಡ್ನವಿಸ್ ಅವರು ರಾಜಭವನದಲ್ಲಿ ಬೆಳಿಗ್ಗೆ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಮತ್ತು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಪವಾರ್ ತಮ್ಮೊಂದಿಗೆ ಸಾಕಷ್ಟು ಶಾಸಕರನ್ನು ಕರೆದೊಯ್ಯಲು ಸಾಧ್ಯವಾಗದ ಕಾರಣ ಸರ್ಕಾರ ಕೇವಲ 80 ಗಂಟೆಗಳ ಕಾಲ ನಡೆಯಿತು.

ಜುಲೈ 2023 ರಲ್ಲಿ, ಅವರು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷವನ್ನು ವಿಭಜಿಸಿದರು. ಐದನೇ ಬಾರಿಗೆ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ನಡೆ ಶರದ್ ಪವಾರ್ ಅವರೊಂದಿಗಿನ ಅವರ ಅತ್ಯಂತ ನಾಟಕೀಯ ಸಂದರ್ಭಕ್ಕೆ ಸದಾಕ್ಷಿಯಾಯಿತು.

ಡಿಸೆಂಬರ್ 5, 2024 ರ ಹೊತ್ತಿಗೆ, ಅವರು ಮುಂಬೈನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಆರನೇ ಬಾರಿಗೆ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಅವರು ಮಹಾರಾಷ್ಟ್ರದ ರಾಜಕೀಯದಲ್ಲಿ ಪ್ರಬಲರಾಗಿ ಹೊರಹೊಮ್ಮಿದರು.

ಶರದ್ ಪವಾರ್ ಅವರ ರಾಜಕೀಯ ಪ್ರಭಾವದ ಹೊರತಾಗಿಯೂ, ಬಾರಾಮತಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಅಜಿತ್ ಪವಾರ್ ಅವರ ನೆಲೆ ದೃಢವಾಗಿತ್ತು. ಅವರ ತಳಮಟ್ಟದ ಸಂಪರ್ಕ, ಸಹಕಾರಿ ವಲಯದ ಬಲ ಮತ್ತು ಬಿಗಿಯಾದ ಸಾಂಸ್ಥಿಕ ನಿಯಂತ್ರಣದ ಸಂಯೋಜನೆಯು ಅವರನ್ನು ಬದಲಾಗುತ್ತಿರುವ ಮೈತ್ರಿಗಳ ಮೂಲಕ ರಾಜಕೀಯವಾಗಿ ಸುರಕ್ಷಿತವಾಗಿರಿಸಿತು.

ತಮ್ಮ ವೇಗದ ಕಾರ್ಯಶೈಲಿ ಮತ್ತು ನಿಯಮಿತ ಸಾರ್ವಜನಿಕ ಸಂವಹನಕ್ಕೆ ಹೆಸರುವಾಸಿಯಾದ ಪವಾರ್, ಕೊನೆಯವರೆಗೂ ಸರ್ಕಾರದಲ್ಲಿ ಸಕ್ರಿಯರಾಗಿದ್ದರು. ಅವರು ಸಾಯುವ ಸಮಯದಲ್ಲಿ ಪ್ರಸ್ತುತ ಮಹಾರಾಷ್ಟ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಅಜಿತ್ ಪವಾರ್ ಅವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳು ಇದ್ದಾರೆ. ಅವರ ಸಾವು ಮಹಾರಾಷ್ಟ್ರ ರಾಜಕೀಯದಲ್ಲಿ ಗಮನಾರ್ಹವಾಗಿ ಶೂನ್ಯ ಆವರಿಸುವಂತೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...