ಮುಡಾದ 142 ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಬಿಜೆಪಿ ಶನಿವಾರ ಒತ್ತಾಯಿಸಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಇಡಿ ಹೇಳಿದೆ. ಇಡಿಯಿಂದ
ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ, 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಸುಮಾರು 300 ಕೋಟಿ ರೂ. ಮಾರುಕಟ್ಟೆ ಮೌಲ್ಯದ 142 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ತಿಳಿಸಿತ್ತು.
ಮುಡಾ ಹಗರಣದ ಬಗ್ಗೆ ವಿವರಿಸಿದ ಇಡಿ, “ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ತಮ್ಮ ಪತ್ನಿ ಶ್ರೀಮತಿ ಬಿ ಎಂ ಪಾರ್ವತಿ ಅವರ ಹೆಸರಿನಲ್ಲಿ 14 ನಿವೇಶನಗಳ (ಪ್ಲಾಟ್‌ಗಳು) ಪರಿಹಾರವನ್ನು ಪಡೆಯಲು ಸಿದ್ದರಾಮಯ್ಯ ತಮ್ಮ ರಾಜಕೀಯ ಪ್ರಭಾವವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಭೂಮಿಯನ್ನು ಮೂಲತಃ ಮುಡಾ 3,24,700 ರೂ.ಗಳಿಗೆ ಸ್ವಾಧೀನಪಡಿಸಿಕೊಂಡಿತ್ತು. ಐಷಾರಾಮಿ ಪ್ರದೇಶದಲ್ಲಿ 14 ನಿವೇಶನಗಳ ರೂಪದಲ್ಲಿ ನೀಡಲಾದ ಪರಿಹಾರವು 56 ಕೋಟಿ ರೂ. (ಅಂದಾಜು) ಮೌಲ್ಯದ್ದಾಗಿದೆ” ಎಂದು ಇಡಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಪಾರ್ವತಿ ಅವರಿಗೆ ಅಕ್ರಮವಾಗಿ ಪರಿಹಾರ ನಿವೇಶನಗಳನ್ನು ಹಂಚಿಕೆ ಮಾಡುವಲ್ಲಿ ಮಾಜಿ ಮುಡಾ ಆಯುಕ್ತ ಡಿ ಬಿ ನಟೇಶ್ ಪಾತ್ರವು ಪ್ರಮುಖ ಪಾತ್ರ ವಹಿಸಿದೆ ಎಂದು ಇಡಿ ಆರೋಪಿಸಿದೆ. ಇಡಿಯಿಂದ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣದ ವಿರುದ್ಧದ ಹೋರಾಟದಲ್ಲಿ ಇದು ಪ್ರಮುಖ ವಿಜಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಣ್ಣಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಇಡಿ ತನಿಖೆಯು ಸಿದ್ದರಾಮಯ್ಯ ಅವರ ಪತ್ನಿಯ ಹೆಸರಿನಲ್ಲಿ ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಲು ತಮ್ಮ ರಾಜಕೀಯ ಪ್ರಭಾವವನ್ನು ಬಳಸಿದ್ದಾರೆ ಎಂದು ಆರೋಪಿಸಿ ಇಡಿ ತನಿಖೆ ನಡೆಸುತ್ತಿದೆ. ಪ್ರಭಾವಿ ವ್ಯಕ್ತಿಗಳ ‘ಬೇನಾಮಿ’ ಮತ್ತು ಡಮ್ಮಿಗಳಿಗೆ ನಿವೇಶನಗಳ ಹಂಚಿಕೆಯು ವ್ಯವಸ್ಥಿತ ಭ್ರಷ್ಟಾಚಾರವನ್ನು ಮತ್ತಷ್ಟು ಎತ್ತಿ ತೋರಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.
Major Victory in our Fight Against the MUDA Scam!
The ED's investigation has exposed significant corruption involving CM @siddaramaiah, who allegedly used his political influence to illegally allocate sites in the name of his wife. The allocation of sites to benamis and dummies… pic.twitter.com/YYZE2SnYfk
— Vijayendra Yediyurappa (@BYVijayendra) January 18, 2025
ಕರ್ನಾಟಕ ಹೈಕೋರ್ಟ್ ಕೂಡ ರಾಜ್ಯಪಾಲರ ನಿರ್ಧಾರವನ್ನು ಎತ್ತಿಹಿಡಿದಿದೆ ಎಂಬುವುದನ್ನು ಎತ್ತಿತೋರಿಸಿರುವ ವಿಜಯೇಂದ್ರ, ಮುಖ್ಯಮಂತ್ರಿ ಕುಟುಂಬದ ವಿರುದ್ಧದ ಆರೋಪಗಳು ತೀವ್ರ ತನಿಖೆಗೆ ಅರ್ಹವಾಗಿವೆ ಎಂದು ಒತ್ತಿ ಹೇಳಿದ್ದಾರೆ.
ಇಡಿಯನ್ನು ಶ್ಲಾಘಿಸಿರುವ ವಿಜಯೇಂದ್ರ, ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ತನಿಖೆಯನ್ನು ಬುಡಮೇಲು ಮಾಡಲು ಸಿಎಂ ಸಿದ್ದರಾಮಯ್ಯ ಮಾಡಿದ ದುರುದ್ದೇಶಪೂರಿತ ಪ್ರಯತ್ನವನ್ನು ತನಿಖಾ ಸಂಸ್ಥೆ ಇಡಿ ವಿಫಲಗೊಳಿಸಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಮತ್ತು ಅವರ ಬೆಂಬಲಿಗರ ಈ ಸ್ಪಷ್ಟ ಅಧಿಕಾರ ದುರುಪಯೋಗದ ವಿರುದ್ಧ ವಿಧಾನಸಭೆಯ ಒಳಗೆ ಮತ್ತು ಹೊರಗೆ ಬಿಜೆಪಿ ಮತ್ತು ಮಿತ್ರಪಕ್ಷ ಜೆಡಿಎಸ್ ನಿರಂತರ ಪ್ರತಿಭಟನೆ ನಡೆಸುತ್ತವೆ ಎಂದು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ, ಲೋಕಾಯುಕ್ತ ಪೊಲೀಸರು ಮುಡಾ ಹಗರಣದಲ್ಲಿ ಎಫ್‌ಐಆರ್ ದಾಖಲಿಸಿದ ನಂತರ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ‘ಮೈಸೂರು ಚಲೋ’ ಮೆರವಣಿಗೆ ನಡೆಸಿದ್ದನ್ನು ವಿಜಯೇಂದ್ರ ನೆನಪಿಸಿಕೊಂಡಿದ್ದು, “ಇಡಿಯ ವರದಿಗಳು ಭ್ರಷ್ಟಾಚಾರದ ವಿರುದ್ಧದ ನಮ್ಮ ನಿರಂತರ ಹೋರಾಟವನ್ನು ದೃಢೀಕರಿಸುವುದಲ್ಲದೆ, ಕಣ್ಣಿಗೆ ಕಾಣುವುದಕ್ಕಿಂತ ಇದರಲ್ಲಿ ಹೆಚ್ಚು ಅಕ್ರಮ ನಡೆದಿದೆ ಎಂಬುದನ್ನು ಸಾಬೀತುಪಡಿಸುತ್ತದೆ. ಭ್ರಷ್ಟಾಚಾರದ ವಿರುದ್ಧ ನಮ್ಮ ಅಭಿಯಾನವನ್ನು ಅಪಹಾಸ್ಯ ಮಾಡಿದವರಿಗೆ ಇದು ದೊಡ್ಡ ಹೊಡೆತವಾಗಿದೆ!” ಎಂದು ಅವರು ಹೇಳಿದ್ದಾರೆ.
ಇಡಿ ಬಹಿರಂಗಪಡಿಸಿರುವ ಈ ವರದಿ ಕೇವಲ ಮಂಜುಗಡ್ಡೆಯ ತುದಿ ಮಾತ್ರ. ಈ ಹಗರಣದಲ್ಲಿ ಸಾವಿರಾರು ಕೋಟಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಹಗರಣವನ್ನು ಸಂಪೂರ್ಣವಾಗಿ ಬಹಿರಂಗಪಡಿಸಲು ಸಮಗ್ರ ಸಿಬಿಐ ತನಿಖೆ ಅಗತ್ಯವಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಇದನ್ನೂಓದಿ: ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್


