ಮೈಸೂರು ವಿಶ್ವವಿದ್ಯಾಲಯ ಸೆಮಿಸ್ಟರ್ ಪರೀಕ್ಷಾ ಶುಲ್ಕ ಏರಿಕೆ ಮಾಡಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆ ಎಐಡಿಎಸ್ಓ ಸೋಮವಾರ ಪ್ರತಿಭಟನೆ ನಡೆಸಿದೆ. ವಿಶ್ವವಿದ್ಯಾಲಯದ ವ್ಯಾಪಾರಿ ಧೋರಣೆಯನ್ನು ಖಂಡಿಸಿರುವ ವಿದ್ಯಾರ್ಥಿ ಸಂಘಟನೆ, ವಿಶ್ವವಿದ್ಯಾಲಯವು ತನ್ನ ಆಶಯದಿಂದು ದೂರ ಸರಿದು ವಿದ್ಯಾರ್ಥಿಗಳಿಂದ ಸುಲಿಗೆ ಮಾಡುತ್ತಿದೆ ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಿಂದ
ಎಐಡಿಎಸ್ಓ ನೇತೃತ್ವದಲ್ಲಿ ಪಿಜಿ ವಿದ್ಯಾರ್ಥಿಗಳು ಕ್ರಾಫರ್ಡ್ ಹಾಲ್ ಎದುರು ಪ್ರತಿಭಟನೆ ನಡೆಸಿದ್ದಾರೆ. ವಿಶ್ವವಿದ್ಯಾಲಯವು ಒಂದು ಸೆಮಿಸ್ಟರ್ ಪರೀಕ್ಷೆಗೆ ರೂ. 3300 ರೂ ಹೆಚ್ಚಳ ಮಾಡಿದೆ ಎಂದು ಎಐಡಿಎಸ್ಓ ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್ಓ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ, “ಪ್ರತಿಷ್ಟಿತ ಮೈಸೂರು ವಿಶ್ವವಿದ್ಯಾನಿಲಯಕ್ಕೆ ವಿವಿಧ ಜಿಲ್ಲೆ, ರಾಜ್ಯಗಳಿಂದ ಎಷ್ಟೋ ಬಡ- ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಹಲವು ಕನಸುಗಳನ್ನು ಹೊತ್ತು ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುತ್ತಾರೆ. ಆದರೆ ಮೈಸೂರು ವಿವಿಯು ತನ್ನ ವ್ಯಾಪಾರಿ ಧೋರಣೆಯಿಂದಾಗಿ ಪ್ರತಿ ವರ್ಷ 10% ಪರೀಕ್ಷಾ ಶುಲ್ಕ ಹೆಚ್ಚುಸುತ್ತಿದೆ. ಪ್ರಸ್ತುತ ಮತ್ತು ಭವಿಷ್ಯದಲ್ಲಿ ಉನ್ನತ ಶಿಕ್ಷಣ ದಿಂದ ಬಡ ವಿದ್ಯಾರ್ಥಿಗಳು ದೂರ ಉಳಿಯುವುದರಲ್ಲಿ ಯಾವುದೇ ಸಂದೇಹವಿಲ್ಲ.” ಎಂದು ಹೇಳಿದ್ದಾರೆ.
“ಒಂದು ಸೆಮಿಸ್ಟರ್‌ನ ಪರೀಕ್ಷಾ ಶುಲ್ಕ 3,300 ರೂ. ದಾಟಿದೆ. ಎಷ್ಟೋ ಸರ್ಕಾರಿ ಕಾಲೇಜುಗಳಲ್ಲಿ ವಾರ್ಷಿಕ ಶುಲ್ಕವೇ 3 ಸಾವಿರ ರೂಪಾಯಿ ಇಂದ ನಾಲ್ಕು ಸಾವಿರ ಇರುತ್ತವೆ. ಇದು ಅತ್ಯಂತ ದುಬಾರಿ ಪರೀಕ್ಷಾ ಶುಲ್ಕವಾಗಿದ್ದು, ಬಹುಸಂಖ್ಯಾತ ವಿದ್ಯಾರ್ಥಿಗಳು ಹಾಗೂ ಪೋಷಕರು ಆರ್ಥಿಕ ಬಿಕ್ಕಟ್ಟಿನಿಂದಾಗಿ ಶುಲ್ಕ ಪಾವತಿ ಮಾಡಲು ಅಸಾಧ್ಯವಾಗಿದೆ. ಅಲ್ಲದೇ, ವಿದ್ಯಾರ್ಥಿಗಳ ಶಿಕ್ಷಣದ ನಿರಂತರತೆಯ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ” ಎಂದು ಕಿಡಿ ಕಾರಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಿಂದ
ಪ್ರತಿಯೊಬ್ಬ ಬಡ ವಿದ್ಯಾರ್ಥಿಗಳಿಗೂ ಶಿಕ್ಷಣ ಸಿಗಬೇಕೆಂಬುದು ಮೈಸೂರು ವಿಶ್ವವಿದ್ಯಾನಿಲಯದ ಸ್ಥಾಪನೆಯ ಆಶಯವಾಗಿತ್ತು. ಆದರೆ ಇದಕ್ಕೆ ತದ್ವಿರುದ್ಧವಾಗಿ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳ ಪರ ನಿಲುವು ತೆಗೆದುಕೊಳ್ಳದೆ, ವಿದ್ಯಾರ್ಥಿಗಳಿಂದ ಸುಲಿಗೆ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರತಿ ವರ್ಷವೂ ಹೆಚ್ಚಿಸುತ್ತಿರುವ 10% ಶುಲ್ಕವನ್ನು ಹಿಂಪಡೆಯಬೇಕು ಹಾಗೂ ಪ್ರಸ್ತುತ ಸೆಮಿಸ್ಟರ್ ಪರೀಕ್ಷಾ ಶುಲ್ಕ ಹೆಚ್ಚಳವನ್ನು ಕೈಬಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡಿದವರಿಗೆ ₹25,000 ಬಹುಮಾನ: ಕೇಂದ್ರ ಸಚಿವ ನಿತಿನ್ ಗಡ್ಕರಿ
ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡಿದವರಿಗೆ ₹25,000 ಬಹುಮಾನ: ಕೇಂದ್ರ ಸಚಿವ ನಿತಿನ್ ಗಡ್ಕರಿ


