Homeಮುಖಪುಟಇನ್ಮುಂದೆ ಜನನ ಪ್ರಮಾಣಪತ್ರವೇ ಎಲ್ಲದಕ್ಕೂ ಆಧಾರ: 1969ರ ಕಾಯ್ದೆಗೆ ತಿದ್ದುಪಡಿ ಮಸೂದೆ ಮಂಡನೆ

ಇನ್ಮುಂದೆ ಜನನ ಪ್ರಮಾಣಪತ್ರವೇ ಎಲ್ಲದಕ್ಕೂ ಆಧಾರ: 1969ರ ಕಾಯ್ದೆಗೆ ತಿದ್ದುಪಡಿ ಮಸೂದೆ ಮಂಡನೆ

- Advertisement -
- Advertisement -

1969ರ ಜನನ ಮತ್ತು ಮರಣಗಳ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಉದ್ದೇಶದ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಬುಧವಾರ ಮಂಡಿಸಿದೆ. ಈ ಕಾಯ್ದೆ ಜಾರಿಗೆ ಬಂದು 54 ವರ್ಷಗಳ ನಂತರ ಮೊದಲ ಬಾರಿಗೆ ತಿದ್ದುಪಡಿ ಮಾಡುತ್ತಿರುವುದು ಗಮನಾರ್ಹವಾಗಿದೆ.

ಈ ತಿದ್ದುಪಡಿ ಮೂಲಕ ಇನ್ನುಮುಂದೆ ಶಾಲಾ-ಕಾಲೇಜುಗಳಲ್ಲಿ ಪ್ರವೇಶ, ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹಾಗೂ ಸರ್ಕಾರಿ ನೌಕರಿಗೆ ನಡೆಯುವ ನೇಮಕಾತಿ ಸಂದರ್ಭಗಳಲ್ಲಿ ಜನನ ಪ್ರಮಾಣಪತ್ರವನ್ನು ಒಂದೇ ದಾಖಲೆ ಬಳಸಲು ಅವಕಾಶ ನೀಡಲಾಗುತ್ತದೆ.

ಅಷ್ಟೇ ಅಲ್ಲದೇ ಮತದಾರರ ಪಟ್ಟಿ ಸಿದ್ಧಪಡಿಸಲು, ಆಧಾರ್ ಸಂಖ್ಯೆ, ನೀಡುವಾಗ ಹಾಗೂ ವಿವಾಹ ನೋಂದಣಿ ಸಂದರ್ಭದಲ್ಲಿಯೂ ಜನನ ಪ್ರಮಾಣಪತ್ರವನ್ನು ಬಳಸುವುದನ್ನು ಈ ಉದ್ದೇಶಿತ ತಿದ್ದುಪಡಿ ಒಳಗೊಂಡಿದೆ.

ಈ ಹಿಂದೆ ಜನನ ಪ್ರಮಾಣಪತ್ರ ಬಳಸಬೇಕು ಎಂಬ ಸರ್ಕಾರದ ಯೋಜನೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಖಾಸಗಿತನದ ಬಗ್ಗೆ ಕಳವಳ ವ್ಯಕ್ತಪಡಿಸಿದ ಹಲವರು ಈ ನಡೆಯು ರಾಜ್ಯಗಳ ಹಕ್ಕುಗಳನ್ನು ಕಸಿಯಲಿದೆ ಎಂದು ದೂರಿದ್ದರು. ಜನರಿಗೆ ಸಂಬಂಧಿಸಿದ ಮಾಹಿತಿಯನ್ನು ಸರ್ಕಾರವು ಅನಿಯಂತ್ರಿತವಾಗಿ ಪಡೆಯುವುದು ಸಾಧ್ಯವಾಗಲಿದೆ ಎಂಬ ಆತಂಕವನ್ನು ಹೊರಹಾಕಿದ್ದರು.

ಈ ಬಗ್ಗೆ ಮಾತನಾಡಿದ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್, ”ಸಾಮಾಜಿಕ ಬದಲಾವಣೆ ಮತ್ತು ತಂತ್ರಜ್ಞಾನದಲ್ಲಿನ ಪ್ರಗತಿಗೆ ತಕ್ಕಂತೆ ಈ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ’ ಎಂದು ಹೇಳಿದ್ದಾರೆ.

”ತಿದ್ದುಪಡಿ ಮೂಲಕ ಕಾಯ್ಕೆಯನ್ನು ಮತ್ತಷ್ಟು ನಾಗರಿಕಸ್ನೇಹಿಯಾಗಿಸುವ ಉದ್ದೇಶ ಹೊಂದಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರಗಳು, ಸಾರ್ವಜನಿಕರು ಹಾಗೂ ಇತರ ಭಾಗೀದಾರರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಲಾಗಿದೆ” ಎಂದು ಅವರು ತಿಳಿಸಿದರು.

ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದ ಮನೀಷ್ ತಿವಾರಿ, ”ಈ ಮಸೂದೆಯು ವ್ಯಕ್ತಿಯ ಖಾಸಗಿತನ ಹಕ್ಕು ಕೇಂದ್ರ ಮತ್ತು ರಾಜ್ಯಗಳ ನಡುವೆ ಅಧಿಕಾರ ವಿಂಗಡಣೆಯ ಉಲ್ಲಂಘನೆಯಾಗಲಿದೆ” ಎಂದು ಹೇಳಿದರು.

ಇದನ್ನೂ ಓದಿ: ಮೈಕ್ ಆಫ್ ಮಾಡಿರುವುದು ನನ್ನ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ, ಅವಮಾನ ಮಾಡಲಾಗಿದೆ: ಮಲ್ಲಿಕಾರ್ಜುನ ಖರ್ಗೆ

ಈ ಮಸೂದೆಯಲ್ಲಿನ ಪ್ರಮಖ ಅಂಶಗಳು:

* ಜನನ ಪ್ರಮಾಣಪತ್ರವನ್ನು ಜನಿಸಿದ ದಿನಾಂಕ ಮತ್ತು ಸ್ಥಳದ ಪುರಾವೆಯ ದಾಖಲೆಯಂತೆ ಬಳಸಬಹುದು.

* ಜನಸಂಖ್ಯಾ, ರಿಜಿಸ್ಟರ್, ಮತದಾರರ ಪಟ್ಟಿ, ಆಧಾರ್ ಸಂಖ್ಯೆ, ಪಡಿತರ ಚೀಟಿ, ಪಾಸ್‌ಪೋರ್ಟ್, ಆಸ್ತಿ ನೋಂದಣಿ ಹಾಗೂ ಕೇಂದ್ರ ಸರ್ಕಾರದಿಂದ ಅಧಿಸೂಚಿತ ಇತರ ಡೇಟಾಬೇಸ್‌ಗಳನ್ನು ನಿರ್ವಹಿಸುವ ಪ್ರಾಧಿಕಾರಗಳಿಗೆ ಜನನ ಮತ್ತು ಮರಣಗಳ ಡೇಟಾಬೇಸ್ ಒದಗಿಸುವುದು.

* ದತ್ತು ಪಡೆದ ಮಗು, ಅನಾಥ, ಪರಿತ್ಯಕ್ತ, ಬಾಡಿಗೆ ತಾಯ್ತನದಿಂದ ಪಡೆದ ಮಗು, ಒಬ್ಬರೇ ಪಾಲಕರಿರುವ ಅಥವಾ ಅವಿವಾಹಿತ ತಾಯಿಯ ಮಗುವಿನ ನೋಂದಣಿಗೆ ತಿದ್ದುಪಡಿ ನೆರವಾಗಲಿದೆ.

* ವಿಪತ್ತು ಅಥವಾ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡ ಸಂದರ್ಭದಲ್ಲಿ ಮರಣಗಳ ನೋಂದಣಿ ಹಾಗೂ ಮರಣ ಪ್ರಮಾಣಪತ್ರ ವಿತರಣೆ ಪ್ರಕ್ರಿಯೆಗೆ ವೇಗ ನೀಡುವುದಕ್ಕಾಗಿ ವಿಶೇಷ ಸಬ್‌ರಿಜಿ‌ಗಳ ನೇಮಕಕ್ಕೆ ಅವಕಾಶ.

* ಜನನ ನೋಂದಣಿ ಸಂದರ್ಭದಲ್ಲಿ ಪಾಲಕರ ಅಥವಾ ಮಾಹಿತಿ ನೀಡುವವರ ಆಧಾ‌ ಸಂಖ್ಯೆಯನ್ನು ಸಂಗ್ರಹಿಸಲು ಅವಕಾಶ.

* ರಿಜಿಸ್ಕಾ‌ ಅಥವಾ ಜಿಲ್ಲಾ ರಿಜಿಸ್ಟ್ರಾ‌ಗಳು ತೆಗೆದುಕೊಂಡ ಕ್ರಮ ಇಲ್ಲವೇ ಹೊರಡಿಸಿದ ಆದೇಶದಿಂದ ತೊಂದರೆಗೆ ಒಳಗಾಗುವ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರ ಒದಗಿಸಲು ಮತ್ತು ದಂಡದ ಮೊತ್ತವನ್ನು ಹೆಚ್ಚಿಸಲು ಅವಕಾಶ ಕಲ್ಪಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...