ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆಯ ಗ್ಯಾರೆಂಟಿ ಶಕ್ತಿ ಯೋಜನೆಯಿಂದ ರಾಜ್ಯ ಸರ್ಕಾರಕ್ಕೆ ಭಾರಿ ನಷ್ಟ ಉಂಟಾಗಿದ್ದು, ರಾಜ್ಯ ಸಾರಿಗೆ ನಿಗಮ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಬುಧವಾರ ಪ್ರತಿಪಾದಿಸಿದ್ದಾರೆ. ಶಕ್ತಿ ಯೋಜನೆಯಿಂದ
“ಈ ಬಗ್ಗೆ ಕಾಂಗ್ರೆಸ್‌ನ ಹಿರಿಯ ಮುಖಂಡ ಬಸವರಾಜ ರಾಯರೆಡ್ಡಿ ಹಲವು ಬಾರಿ ಹೇಳಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಂಚಿತ್ತೂ ಗಮನಹರಿಸಿಲ್ಲ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವುದರಿಂದ ನಷ್ಟ ಉಂಟಾಗಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಸಾರಿಗೆ ನಿಗಮಗಳಿಗೆ ಸರ್ಕಾರ 4 ಸಾವಿರ ಕೋಟಿ ಪಾವತಿಸಬೇಕಿರುವ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರಿಗೆ ನೀಡಬೇಕಾಗಿದ್ದ ಸಬ್ಸಿಡಿಯಲ್ಲಿ ರಾಜ್ಯ ಸರ್ಕಾರ 1,500 ರೂಪಾಯಿ ಬಾಕಿ ಉಳಿಸಿಕೊಂಡಿದೆ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ. ಶಕ್ತಿ ಯೋಜನೆಯಿಂದ
ಈಗಾಗಲೆ, ಸರಕಾರ 1.5 ಲಕ್ಷ ಕೋಟಿ ಸಾಲ ಮಾಡಿದ್ದು, ಮುಂದಿನ ಹಣಕಾಸು ವರ್ಷಕ್ಕೆ ಸಿದ್ದರಾಮಯ್ಯ 2 ಲಕ್ಷ ಕೋಟಿ ಸಾಲ ಸಂಗ್ರಹಿಸಲು ಮುಂದಾದರೆ ರಾಜ್ಯದ ಪ್ರಗತಿಗೆ ಧಕ್ಕೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಮೈಸೂರಿನ ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು ಮರುನಾಮಕರಣ – ಅಶೋಕ್ ವಿರೋಧ
ಮೈಸೂರಿನ ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರನ್ನು ಮರುನಾಮಕರಣ ಮಾಡುವುದು ಒಳ್ಳೆಯ ಕ್ರಮವಲ್ಲ ಎಂದು ಆರ್. ಅಶೋಕ್ ಹೇಳಿದ್ದಾರೆ. “ಯಾವುದಾದರೂ ಹೆಸರಿಡಬೇಕಾದರೆ, ಹೊಸ ರಸ್ತೆಯನ್ನು ನಿರ್ಮಿಸಬೇಕು ಮತ್ತು ಅವನ ಅಥವಾ ಅವನ ಕುಟುಂಬದ ಹೆಸರನ್ನು ಇಡಬೇಕು” ಎಂದು ಅವರು ತಿಳಿಸಿದ್ದಾರೆ.
“ಮಹಾರಾಜರ ಕುಟುಂಬವು ಈ ದೇಶಕ್ಕೆ ಸೇವೆ ಸಲ್ಲಿಸಿದೆ, ಆಹಾರ ಮತ್ತು ನೀರನ್ನು ನೀಡಿದೆ. ಅವರ ಕುಟುಂಬವನ್ನು ಗುರಿಯಾಗಿಸಿಕೊಳ್ಳಬಾರದು. ಸಿದ್ದರಾಮಯ್ಯ ಅವರು ಎರಡು ಬಾರಿ ಸಿಎಂ ಆಗಿದ್ದು, ಇಂತಹ ಕೆಲಸದಲ್ಲಿ ತೊಡಗಿದರೆ ಅವರ ಬಗ್ಗೆ ಜನರ ಭಾವನೆ ಬದಲಾಗಲಿದೆ,’’ ಎಂದು ಅಶೋಕ್ ಹೇಳಿದ್ದಾರೆ.
ಇದನ್ನೂ ಓದಿ: ತೆಲುಗು ಚಿತ್ರರಂಗ ಪ್ರಮುಖರ ಜೊತೆ ರೇವಂತ್ ರೆಡ್ಡಿ ಸಭೆ; ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ರಾಜಿ ಇಲ್ಲ ಎಂದ ಸಿಎಂ
ತೆಲುಗು ಚಿತ್ರರಂಗ ಪ್ರಮುಖರ ಜೊತೆ ರೇವಂತ್ ರೆಡ್ಡಿ ಸಭೆ; ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ರಾಜಿ ಇಲ್ಲ ಎಂದ ಸಿಎಂ


