Homeಮುಖಪುಟಇಂಧನ ಬೆಲೆ ಏರಿಕೆಗೆ ವ್ಯಂಗ್ಯ: ಚಾಕೋಲೆಟ್ ಹಂಚಿ, ಟ್ರ್ಯಾಕ್ಟರ್ ಎಳೆದು ವಿಭಿನ್ನ ಪ್ರತಿಭಟನೆ!

ಇಂಧನ ಬೆಲೆ ಏರಿಕೆಗೆ ವ್ಯಂಗ್ಯ: ಚಾಕೋಲೆಟ್ ಹಂಚಿ, ಟ್ರ್ಯಾಕ್ಟರ್ ಎಳೆದು ವಿಭಿನ್ನ ಪ್ರತಿಭಟನೆ!

ಕೇಂದ್ರ ಸರಕಾರ 300 ದಿನಗಳ ಅವಧಿಯಲ್ಲಿ 66 ಭಾರೀ ಇಂಧನ ದರ ಏರಿಕೆ ಮಾಡಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

- Advertisement -
- Advertisement -

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಖಂಡಿಸಿ ದಾವಣಗೆರೆಯಲ್ಲಿ ಬೀದಿ ಬೀದಿಗಳಲ್ಲಿ ಚಾಕೋಲೆಟ್ ಹಂಚುವ ಮೂಲಕ ವಿಭಿನ್ನ ಪ್ರತಿಭಟನೆ ನಡೆಸಲಾಗಿದೆ. ಅದೇ ರೀತಿಯಲ್ಲಿ ಸಿಂಧನೂರಿನಲ್ಲಿ ಟ್ರ್ಯಾಕ್ಟರ್ ಎಳೆದು, ಕತ್ತೆ ಮೆರೆವಣಿಗೆ ಮಾಡಿ ವ್ಯಕ್ತಪಡಿಸಲಾಗಿದೆ.

ಆಮ್ ಆದ್ಮಿ ಪಾರ್ಟಿ, ಕರ್ನಾಟಕ ಜನಶಕ್ತಿ, ಕರ್ನಾಟಕ ಸೋಷಿಯಲ್ ಸರ್ವೀಸ್, ಟಿಪ್ಪು ಸುಲ್ತಾನ್ ಟ್ರಸ್ಟ್ ವತಿಯಿಂದ ಇಂದು ದಾವಣಗೆರೆ ನಗರದ ಬೂದಾಳ್ ರಿಂಗ್ ರೋಡ್ ನಿಂದ ಅಖ್ತರ್ ರಜಾ ಸರ್ಕಲ್ ವರೆಗೂ ಸಾರ್ವಜನಿಕರಿಗೆ ಚಾಕಲೇಟ್ ಹಂಚುವ ಮೂಲಕ ಬೆಲೆ ಏರಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ.

ಹಿಂದೆಲ್ಲಾ ಇಂಧನ ಬೆಲೆ ಏರಿಕೆಯಾದಾಗ ಬಿಜೆಪಿ ಪಕ್ಷವು ಪ್ರತಿಭಟನೆ ನಡೆಸುತ್ತಿತ್ತು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದು ತೀವ್ರ ರೀತಿಯಲ್ಲಿ ಇಂಧನ ಬೆಲೆ ಏರಿಸುತ್ತಿದೆ. ಅದನ್ನು ಪ್ರಶ್ನಿಸಿದವರನ್ನು ದೇಶದ್ರೋಹಿಗಳು ಎನ್ನಲಾಗುತ್ತಿದೆ. ಹಾಗಾಗಿ ಬೆಲೆ ಏರಿಕೆಯನ್ನು ನಾವು ಸಂಭ್ರಮಿಸುತ್ತೇವೆ ಎಂದು ಚಾಕೋಲೆಟ್ ಹಂಚುವ ಮೂಲಕ ವ್ಯಂಗ್ಯ ಮಾಡಿದ್ದೇವೆ ಎಂದು ಕರ್ನಾಟಕ ಜನಶಕ್ತಿಯ ಜಿಲ್ಲಾ ಸಂಚಾಲಕ ಸತೀಶ್ ಅರವಿಂದ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಸಬ್ಸಿಡಿ ತಗೆದಿದೆ. ಪೆಟ್ರೋಲ್ ಡೀಸೆಲ್ ಮೇಲೆ ಕೇಂದ್ರ & ರಾಜ್ಯ ಸರ್ಕಾರಗಳು ಹೆಚ್ಚಿನ ತೆರಿಗೆ ವಿಧಿಸುತ್ತಿವೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದ ಸಾಮಾನ್ಯ ಜನರು ತೊಂದರೆಯಲ್ಲಿದ್ದಾರೆ. ಆದರೆ ಸರ್ಕಾರ ಮಾತ್ರ ಕಾರ್ಪೊರೇಟ್ ಕಂಪನಿಗಳ ಪರವಾದ ಆರ್ಥಿಕ ನೀತಿಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ಸಿಂಧನೂರು ವರದಿ 

ಇಂಧನ ಬೆಲೆ ಗಗನಕ್ಕೆ ಏರಿಸಿದ ಕೇಂದ್ರ ಸರ್ಕಾರದ ನೀತಿ ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಸಿಂಧನೂರು ವತಿಯಿಂದ ಇಂದು ನಗರದ ಎಪಿಎಂಸಿ ಗಂಜ್‌ನಿಂದ ಗಾಂಧಿ ಸರ್ಕಲ್ ವರೆಗೆ ಟ್ರಾಕ್ಟರ್ ಎಳೆದು ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಕೇಂದ್ರ ಸರಕಾರದ ಜನವಿರೋಧಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದ ಜನಸಾಮಾನ್ಯರು ಬದುಕಲಾರದಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಈಗಾಗಲೇ ಕೋವಿಡ್-19 ರ ದಾಳಿಯಿಂದಾಗಿ ಹೈರಾಣಾಗಿರುವ ಜನರ ಮೇಲೆ ತೈಲ ದರ ಏರಿಕೆಯು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ. ಕೇಂದ್ರ ಸರಕಾರದ ಇಂಧನ ದರ 300 ದಿನಗಳ ಅವಧಿಯಲ್ಲಿ 66 ಭಾರೀ ಏರಿಕೆಯಾಗಿದ್ದುರೂ ಅಬಕಾರಿ ಸುಂಕವನ್ನು ಇಳಿಸದೆ ಜನವಿರೋಧಿ ನೀತಿಯನ್ನು ಅನುಸರಿಸುವುದರ ಮೂಲಕ ಕಾರ್ಪೊರೇಟ್‌ಗಳ ಲಾಭಕ್ಕೆ ಪೂರಕವಾದ ಆಡಳಿತವನ್ನು ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಈ ರೈತ ಹೋರಾಟ ಭಾರತಕ್ಕೆ ಸ್ಪಷ್ಟ ದಿಕ್ಕು ತೋರಿದೆ: ದೆಹಲಿಯ ರೈತ ಹೋರಾಟ ಬೆಂಬಲಿಸಿ ಬಂದವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...