Homeಕರ್ನಾಟಕಮತ್ತೆ ಇಂಧನ ಬೆಲೆ ಏರಿಕೆ; ಎರಡು ವಾರಗಳಲ್ಲಿ ಪೆಟ್ರೋಲ್‌ ಬೆಲೆ 10 ರೂ. ಹೆಚ್ಚಳ

ಮತ್ತೆ ಇಂಧನ ಬೆಲೆ ಏರಿಕೆ; ಎರಡು ವಾರಗಳಲ್ಲಿ ಪೆಟ್ರೋಲ್‌ ಬೆಲೆ 10 ರೂ. ಹೆಚ್ಚಳ

- Advertisement -
- Advertisement -

ಮಂಗಳವಾರದಂದು ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಮತ್ತೆ ಏರಿಕೆ ಮಾಡಿದೆ. ಇದರಿಂದಾಗಿ ಇಂಧನ ದರಗಳು ಲೀಟರ್‌ಗೆ 80 ಪೈಸೆಗಳಷ್ಟು ಏರಿಕೆಯಾಗಿದೆ. ಕಳೆದ ಎರಡು ವಾರಗಳಲ್ಲಿ ಮಾಡಲಾಗಿರುವ ನಿರಂತರವಾದ ಬೆಲೆ ಏರಿಕೆಯಿಂದಾಗಿ, ಈ ಹಿಂದಿನ ದರಕ್ಕಿಂತ ಹೆಚ್ಚುವರಿಯಾಗಿ ಪ್ರತಿ ಲೀಟರ್‌ಗೆ 9.20 ರೂ. ಏರಿಕೆಯಾಗಿದೆ.

ರಾಜ್ಯ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಈ ಹಿಂದೆ ಇದ್ದ 103.81 ರೂ. ನಿಂದ 104.61 ರೂ.ಗೆ ತಲುಪಿದೆ. ನಿನ್ನೆ ಡೀಸೆಲ್ ದರಗಳು ಪ್ರತಿ ಲೀಟರ್‌ಗೆ 95.07 ರೂ. ಇದ್ದು, 95.87 ರೂ.ಗೆ ಏರಿಕೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬೆಲೆ ಏರಿಕೆಯೊಂದಿಗೆ ರಾಜ್ಯದಲ್ಲಿ ಸರಾಸರಿಯಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 1 ರೂ. ಮತ್ತು 93 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸರಾಸರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 110.80 ಮತ್ತು 94.53 ರೂ. ತಲುಪಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಭಟ್ಕಳ-ಹೊನ್ನಾವರ: ಧರ್ಮಕಾರಣ ಮತ್ತು ಜಾತಿಕಾರಣದ ಜುಗಲ್‌ಬಂದಿಯ ಆಖಾಡ!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ಕ್ರಮವಾಗಿ 84 ಪೈಸೆ ಮತ್ತು 78 ಪೈಸೆ ಏರಿಕೆಯಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 110.25 ರೂ. ಮತ್ತು 94.01 ರೂ. ತಲುಪಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 1.81 ರೂ. ಪೆಟ್ರೋಲ್‌ಗೆ ಏರಿಕೆಯಾಗಿದ್ದು ಅಲ್ಲಿ ಪ್ರತಿ ಲೀಟರ್‌ಗೆ 111.26 ರೂ. ತಲುಪಿದೆ. ದಾವಣಗೆರೆಯಲ್ಲಿ ಪೆಟ್ರೋಲ್ ಬೆಲೆ 1.16 ರೂ. ಏರಿಕೆಯಾಗಿದ್ದು 112.05 ರೂ. ಪ್ರತಿ ಲೀಟರ್‌ಗೆ ಏರಿಕೆಯಾಗಿದೆ. ಇದು ರಾಜ್ಯದಲ್ಲೇ ಅತೀ ಹೆಚ್ಚು ಪೆಟ್ರೋಲ್ ದರವಿರುವ ಜಿಲ್ಲೆಯಾಗಿ ಹೊರಹೊಮ್ಮಿದೆ.

ಚಿತ್ರದುರ್ಗದಲ್ಲೂ ಪೆಟ್ರೋಲ್‌ಗೆ 112.04 ರೂ.ಗೆ ತಲುಪಿದ್ದು, ಬಳ್ಳಾರಿಯಲ್ಲಿ 112.02 ರೂ.ಗೆ ತಲುಪಿದೆ. ಉಳಿದಂತೆ ಇತರ ಜಿಲ್ಲೆಗಳ ಪೆಟ್ರೋಲ್ ಏರಿಕೆ ಪಟ್ಟಿ ಈ ಕೆಳಗಿನಂತಿದೆ.

ಐದು ರಾಜ್ಯಗಳಲ್ಲಿ ಚುನಾವಣೆ ಇದ್ದುದರಿಂದ ಕಚ್ಚಾ ತೈಲ ಬೆಲೆ ಏರಿಕೆಯ ಹೊರತಾಗಿಯೂ ನಾಲ್ಕು ತಿಂಗಳ ಕಾಲ ಇಂಧನ ದರಗಳನ್ನು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಏರಿಸಿರಲಿಲ್ಲ. ಇದರ ಬಂತರ ದರ ಪರಿಷ್ಕರಣೆ ಮಾರ್ಚ್ 22 ರ ನಂತರ ಮತ್ತೆ ಪ್ರಾರಂಭವಾಗಿತ್ತು.

ಬಿಜೆಪಿ ಸರ್ಕಾರ ಇತ್ತೀಚೆಗಷ್ಟೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಏರಿಕೆ ಮಾಡಿರುವುದರಿಂದ ಬೆಂಗಳೂರಿನ ಹೋಟೆಲ್‌ಗಳು ಊಟ-ಉಪಹಾರಗಳ ಬೆಲೆಯನ್ನು ಏರಿಕೆ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಕತ್ತಲೆ ದಾರಿಗೆ ಬೆಳಕು ಹಿಡಿಯುವವರ್‍ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...