Homeಮುಖಪುಟಸಿಯೆರಾ ಲಿಯೋನ್‌: ಇಂಧನ ಟ್ಯಾಂಕರ್‌ ಭೀಕರ ಸ್ಪೋಟ; 91 ಮಂದಿ ದುರ್ಮರಣ

ಸಿಯೆರಾ ಲಿಯೋನ್‌: ಇಂಧನ ಟ್ಯಾಂಕರ್‌ ಭೀಕರ ಸ್ಪೋಟ; 91 ಮಂದಿ ದುರ್ಮರಣ

- Advertisement -
- Advertisement -

ಆಫ್ರಿಕಾ ಖಂಡದ ಸಿಯೆರಾ ಲಿಯೋನ್‌ ದೇಶದ ರಾಜಧಾನಿಯಲ್ಲಿ ಶುಕ್ರವಾರ ಇಂಧನ ಟ್ಯಾಂಕರ್ ಡಿಕ್ಕಿಯಾದ ಬಳಿಕ ಸ್ಫೋಟಗೊಂಡಿದ್ದು, ತೊಂಬತ್ತೊಂದು ಜನರು ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸಿಯೆರಾ ಲಿಯೋನ್‌‌ದ ಕೇಂದ್ರ ಶವಾಗಾರ ಮತ್ತು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರವು ಸಾವಿನ ಸಂಖ್ಯೆಯನ್ನು ನಿಖರವಾಗಿ ತಿಳಿಸಿಲ್ಲ. ರಾಜಧಾನಿ ಫ್ರೀಟೌನ್‌ನಲ್ಲಿರುವ ಸೆಂಟ್ರಲ್ ಸ್ಟೇಟ್ ಮೋರ್ಗ್‌ನ ವ್ಯವಸ್ಥಾಪಕರು ಸ್ಫೋಟದ ನಂತರ 91 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.

ರಾಜಧಾನಿಯಲ್ಲಿನ ಹಲವು ಆಸ್ಪತ್ರೆಗಳು, ಕ್ಲಿನಿಕ್‌ಗಳಲ್ಲಿ ನೂರಕ್ಕೂ ಹೆಚ್ಚು ಜನರು ಚಿಕಿತ್ಸೆಗಾಗಿ ದಾಖಲಾಗಿದ್ದಾರೆ ಎಂದು ಉಪಆರೋಗ್ಯ ಸಚಿವ ಅಮರ ಜುಂಬೈ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಛಿದ್ರಗೊಂಡ ವಾಹನದಿಂದ ಸೋರಿಕೆಯಾಗುವ ಇಂಧನವನ್ನು ಸಂಗ್ರಹಿಸಲು ಸೇರಿದ್ದ ಜನರೂ ಸಾವಿಗೀಡಾಗಿದ್ದಾರೆ ಎಂದು ಬಂದರು ನಗರಿ ಫ್ರೀಟೌನ್‌‌ ಮೇಯರ್ ಯವೊನ್ನೆ ಅಕಿ-ಸಾಯೆರ್ ಅವರು ಆರಂಭದಲ್ಲಿ ಫೇಸ್‌ಬುಕ್‌ನಲ್ಲಿನ ಪೋಸ್ಟ್ ಮಾಡಿದ್ದರು. ನಂತರದಲ್ಲಿಅದನ್ನು ಎಡಿಟ್ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಅವರು ನೀಡುತ್ತಿದ್ದಾರೆ.

“ನಾವು ಸಾವುನೋವುಗಳಿಗೆ ಒಳಗಾಗಿದ್ದೇವೆ. ಜನರು ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ” ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯ ಮುಖ್ಯಸ್ಥ ಬ್ರಿಮಾ ಬುರೆಹ್ ಸೆಸೆ ಅವರು ವಿಡಿಯೊ ಮೂಲಕ ತಿಳಿಸಿದ್ದಾರೆ. “ಇದು ಭಯಾನಕ, ಭಯಾನಕ ಅಪಘಾತ” ಎಂದು ವಿಷಾದಿಸಿದ್ದಾರೆ.

ಮೃತಪಟ್ಟವರ ಚಿತ್ರಗಳೆಂದು ಆನ್‌ಲೈನ್‌ನಲ್ಲಿ ಚಿತ್ರಗಳು ವೈರಲ್‌ ಮಾಡಲಾಗುತ್ತಿದ್ದು, ತಕ್ಷಣವೇ ಪರಿಶೀಲಿಸಲು ಸಾಧ್ಯವಾಗುತ್ತಿಲ್ಲ ಎಂದು ರಾಯಿಟರ್ಸ್‌ ತಿಳಿಸಿದೆ. ಸೋರಿಕೆಯಾಗಿದ್ದ ಇಂಧನ ತೆಗೆದುಕೊಳ್ಳಲು ಹೋದಾಗ ಟ್ಯಾಂಕರ್ ಟ್ರಕ್‌ ಅವಘಡಗಳು ಈ ಹಿಂದೆಯೂ ಆಫ್ರಿಕಾ ಖಂಡದಲ್ಲಿ ಘಟಿಸಿದ್ದವು ಎಂದು ವರದಿ ತಿಳಿಸಿದೆ.

2019ರಲ್ಲಿ ಪೂರ್ವ ತಾಂಜಾನಿಯಾದಲ್ಲಿ ಘಟಿಸಿದ ಟ್ಯಾಂಕರ್ ಸ್ಫೋಟದಲ್ಲಿ 85 ಜನರು ಸಾವನ್ನಪ್ಪಿದ್ದರೆ, 2018ರಲ್ಲಿ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ಇದೇ ರೀತಿಯ ದುರಂತದಲ್ಲಿ ಸುಮಾರು 50 ಜನರು ಸಾವನ್ನಪ್ಪಿದರು.

ಫ್ರೀಟೌನ್‌ನಲ್ಲಿನ ಹಾನಿಯ ಪ್ರಮಾಣವು ಇನ್ನೂ ಸ್ಪಷ್ಟವಾಗಿಲ್ಲ ಎಂದು ಮೇಯರ್ ಹೇಳಿದ್ದಾರೆ. ವಿಪತ್ತು ನಿರ್ವಹಣಾ ಅಧಿಕಾರಿಗಳಿಗೆ ಸಹಾಯ ಮಾಡಲು ಪೊಲೀಸರು ಮತ್ತು ಉಪ ಆಯುಕ್ತರು ಸ್ಥಳದಲ್ಲಿದ್ದಾರೆ ಎಂದು ಮೇಯರ್‌ ತಿಳಿಸಿದ್ದಾರೆ.

“ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ, ಅಂಗವಿಕಲರಾದವರಿಗೆ ನನ್ನ ಹೃದಯಾಂತರಾಳದ ಸಹಾನುಭೂತಿ ಇದೆ” ಎಂದು ಅಧ್ಯಕ್ಷ ಜೂಲಿಯಸ್ ಮಾದಾ ಬಯೋ ಟ್ವೀಟ್ ಮಾಡಿದ್ದಾರೆ.

“ಸಂತ್ರಸ್ತ ಕುಟುಂಬಗಳ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ” ಎಂದು ಅವರು ಭರವಸೆ ನೀಡಿದ್ದಾರೆ.


ಇದನ್ನೂ ಓದಿರಿ: ಕೋವಿಡ್‌ ವಾರ್ಡ್‌‌ನಲ್ಲಿ ಬೆಂಕಿ ಅವಘಡ: ಹತ್ತು ಮಂದಿ ದುರ್ಮರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...