HomeಮುಖಪುಟINDIA ಒಕ್ಕೂಟದಿಂದ ಟಿವಿ ನಿರೂಪಕರ ಕಾರ್ಯಕ್ರಮ ಬಹಿಷ್ಕಾರ: ಪಟ್ಟಿ ಸಿದ್ದಪಡಿಸಿದ ಉಪ ಸಮಿತಿ

INDIA ಒಕ್ಕೂಟದಿಂದ ಟಿವಿ ನಿರೂಪಕರ ಕಾರ್ಯಕ್ರಮ ಬಹಿಷ್ಕಾರ: ಪಟ್ಟಿ ಸಿದ್ದಪಡಿಸಿದ ಉಪ ಸಮಿತಿ

- Advertisement -
- Advertisement -

INDIA ಒಕ್ಕೂಟದ ನಾಯಕರು ಕೆಲ ಟಿವಿ ಕಾರ್ಯಕ್ರಮಗಳು ಮತ್ತು ನಿರೂಪಕರ ಕಾರ್ಯಕ್ರಮದಲ್ಲಿ ಭಾಗವಹಿಸದೆ ಬಹಿಷ್ಕಾರ ಹಾಕಲು ಸಮನ್ವಯ ಸಮಿತಿಯ ಸಭೆಯಲ್ಲಿ ನಿರ್ಧರಿಸಿದ್ದಾರೆ.

ಈ ಕುರಿತು INDIA ಒಕ್ಕೂಟದ ಸಮನ್ವಯ ಸಮಿತಿಯು, ಮಾಧ್ಯಮ ಉಪ ಸಮಿತಿ ರಚಿಸಿದ್ದು ಸಮಿತಿ ಬಹಿಷ್ಕಾರ ಹಾಕಬೇಕಾಗಿರುವ ನಿರೂಪಕರು ಮತ್ತು ಕಾರ್ಯಕ್ರಮಗಳ ಹೆಸರನ್ನು ಸಿದ್ಧಪಡಿಸಿದೆ.

ಅಮಾನ್‌ ಛೋಪ್ರಾ, ಪ್ರಾಚಿ ಪರಸಾರ್‌, ರುಬಿಕಾ ಲಿಯಾಕತ್‌, ಚೈತ್ರಾ ತೃಪ್ತಿ, ಸುದೀರ್‌ ಚೌದರಿ, ಅಮೀಶ್‌ ದೇವಗನ್‌, ಅರ್ನಬ್‌ ಗೋಸ್ವಾಮಿ, ನವಿಕಾ ಕುಮಾರ್‌, ಆನಂದ ನರಸಿಂಹನ್‌, ಗೌರವ್‌ ಸಾವಂತ್‌, ಅದಿತಿ ತ್ಯಾಗಿ, ಸುಶಾಂತ್‌ ಸಿನ್ಹಾ, ಅಶೋಕ್‌ ಶ್ರೀವತ್ಸವ್‌, ಶಿವ್‌ ಅರೂರ್‌ ಅವರ ಕಾರ್ಯಕ್ರಮ ಬಹಿಷ್ಕಾರಕ್ಕೆ ಮಾಧ್ಯಮ ಉಪ ಸಮಿತಿ ತೀರ್ಮಾನಿಸಿದೆ.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಮನೆಯಲ್ಲಿ ನಡೆದ  INDIA ಒಕ್ಕೂಟದ ಸಮನ್ವಯ ಸಮಿತಿಯ ಮೊದಲ ಸಭೆಯಲ್ಲಿ ಕೆಲ ಟಿವಿ ಕಾರ್ಯಕ್ರಮಗಳಿಗೆ ಬಹಿಷ್ಕಾರ ಹಾಕುವ ಸಲುವಾಗಿ ಆಂಕರ್‌ಗಳು ಮತ್ತು ಕಾರ್ಯಕ್ರಮಗಳನ್ನು ಪಟ್ಟಿ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು.

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಮಾಧ್ಯಮದ ಒಂದು ವಿಭಾಗವು ಕಡಿಮೆ ಕವರೇಜ್ ನೀಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಯಾತ್ರೆಗೆ ಜನ ಬೆಂಬಲ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಯಾತ್ರೆಗೆ ಹೆಚ್ಚು ಬೆಂಬಲ ನೀಡಲಾಗಿದೆ. ಆದರೆ ಮುಖ್ಯವಾಹಿನಿಯ ಮಾಧ್ಯಮಗಳು ರಾಹುಲ್‌ ಯಾತ್ರೆಯನ್ನು ಬಹಿಷ್ಕರಿಸುವುದನ್ನು ಮುಂದುವರೆಸಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದರು.

ಸಂಪಾದಕರು ಯಾತ್ರೆಯನ್ನು ಬಹಿಷ್ಕರಿಸಿದ್ದಾರೆ ಎಂಬುದು ನನ್ನ ಆರೋಪ. ಲಕ್ಷಗಟ್ಟಲೆ  ಜನ ಯಾತ್ರೆಗೆ ಸೇರಿದ್ದಾರೆ. ಇಷ್ಟು ದೊಡ್ಡ ಯಾತ್ರೆಯನ್ನು ನೀವು ತೋರಿಸುವುದಿಲ್ಲವೇ? ಎಂದು ರಾಜಸ್ಥಾನ ಮುಖ್ಯಮಂತ್ರಿ ಪ್ರಶ್ನಿಸಿದ್ದರು.

ಸಮನ್ವಯ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ 12 ಪಕ್ಷಗಳ ಪರವಾಗಿ ಮಾತನಾಡಿದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಇಂಡಿಯಾ ಒಕ್ಕೂಟದ ನಾಯಕರು ಟಿವಿಯ ಕೆಲ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಲಿದ್ದು, ಮಾಧ್ಯಮದ ಉಪ ಸಮಿತಿಯು ಈ ಕುರಿತ ಟಿವಿ ಶೋಗಳು ಮತ್ತು ನಿರೂಪಕರನ್ನು ಪಟ್ಟಿ ಮಾಡಲಿದೆ ಎಂದು ಹೇಳಿದ್ದರು.

 

ಇದನ್ನು ಓದಿ: ಬೆಂಗಳೂರು: ಸೆ.16ರಂದು ‘ಒಂದು ದೇಶ, ಒಂದು ಚುನಾವಣೆ’ ಸಂವಾದ ಕಾರ್ಯಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...