HomeಅಂಕಣಗಳುKarnataka against SIRಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

- Advertisement -
- Advertisement -

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ ಡಾ. ಇಸಾಬೆಲ್ಲ ಝೇವಿಯರ್ ಹೇಳಿದರು.

ಗದಗದ ಪತ್ರಿಕಾ ಭವನದಲ್ಲಿ ಬುಧವಾರ (ಜೂನ.17) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್‌ಐಆರ್‌ ಎಂಬುವುದು ಹೆಸರಿಗೆ ಮತದಾರರ ಪಟ್ಟಿಯ ಪರಿಷ್ಕರಣೆ ಆಗಿರಬಹುದು. ಆದರೆ, ಇದರ ಹಿಂದಿನ ಉದ್ದೇಶ ಬೇರೆಯದ್ದೇ ಇದೆ. ಇದು ಆರ್‌ಎಸ್‌ಎಸ್‌-ಸಂಘಪರಿವಾರದ ಹಿಡನ್‌ ಅಜೆಂಡಾದ ಜಾರಿ ಪ್ರಕ್ರಿಯೆ ಎಂದು ಟೀಕಿಸಿದರು.

ಎಸ್‌ಐಆರ್‌ ಪ್ರಕ್ರಿಯೆ ಸಂಪೂರ್ಣವಾಗಿ ಒಪ್ಪುವಂತದಲ್ಲ. ನಾವು ಮತದಾರರ ಪಟ್ಟಿಯ ಪರಿಷ್ಕರಣೆಯ ವಿರುದ್ದವಿಲ್ಲ, ವಿಶೇಷ ಪರಿಷ್ಕರಣೆಯನ್ನು ವಿರೋಧಿಸುತ್ತೇವೆ. ಲಾಜಿಕಲ್ ಡಿಸ್ಕ್ರಿಪೆನ್ಸಿಯಂತಹ ಕೋಟ್ಯಾಂತರ ಮತದಾರರನ್ನು ಹೊರಗಿಡುವ ಕುತಂತ್ರವನ್ನು ಒಪ್ಪುವುದಿಲ್ಲ ಎಂದರು.

ಎಸ್‌ಐಆರ್‌ ಹೆಚ್ಚು ಪರಿಣಾಮ ಎದುರಿಸುವವರು ನಮ್ಮ ಹೆಣ್ಣು ಮಕ್ಕಳು. ಅವರಿಗೆ ತಂದೆಯ ಮನೆಯಲ್ಲಿ ಒಂದು ಹೆಸರಿದ್ದರೆ, ಮದುವೆಯಾದ ಮೇಲೆ ಮತ್ತೊಂದು ಹೆಸರಿರುತ್ತದೆ. ಎಸ್‌ಐಆರ್‌ನಲ್ಲಿ ಒಂದು ಸ್ಲೆಲ್ಲಿಂಗ್ ತಪ್ಪಿದರೂ ನಾವು ಮತದಾರರ ಪಟ್ಟಿಯಿಂದ ಹೊರ ಬೀಳುತ್ತೇವೆ. ಹೀಗಿರುವಾಗ ಹೆಸರು ಬದಲಿಸುವ ಹೆಣ್ಣು ಮಕ್ಕಳ ಗತಿಯೇನು ಎಂದು ಪ್ರಶ್ನಿಸಿದರು.

ಎಸ್‌ಐಆರ್‌ನಲ್ಲಿ ಹೆಚ್ಚು ಸಮಸ್ಯೆಗೆ ಸಿಲುಕುವವರು ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು ಮತ್ತು ಹೆಣ್ಣು ಮಕ್ಕಳು. ಅವರಲ್ಲಿ ಚುನಾವಣಾ ಆಯೋಗ ಕೇಳಿದ ದಾಖಲೆಗಳು ಇರಲು ಸಾಧ್ಯವೇ ಇಲ್ಲ. ಹಾಗಾಗಿ, ಮತದಾರರ ಪಟ್ಟಿಯ ಪರಿಷ್ಕರಣೆ ನಡೆಯುವುದಾದರೆ ನಾವು ಮುಂದಿಟ್ಟಿರುವ ಬೇಡಿಕೆಗಳಿಗೆ ಆಯೋಗ ಸ್ಪಂದಿಸಬೇಕು. ಒಬ್ಬರೇ ಒಬ್ಬರು ಅರ್ಹರು ಮತದಾರರ ಪಟ್ಟಿಯಿಂದ ಹೊರ ಬೀಳದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ರೂಪಿಸಲಾಗುವುದು ಎಂದರು.

ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾದ ಸಂಚಾಲಕ ಹಾಗೂ ಜಮಾಅತೆ ಇಸ್ಲಾಮಿ ಹಿಂದ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಯೂಸುಫ್ ಕನ್ನಿ ಮಾತನಾಡಿ, ನಮ್ಮ ದೇಶದಲ್ಲಿ ಕೇವಲ 36 ಶೇಕಡ ಜನರಲ್ಲಿ ಮಾತ್ರ ಚುನಾವಣಾ ಆಯೋಗ ಕೇಳಿರುವ ದಾಖಲೆಗಳಿವೆ. ಉಳಿದ 64 ಶೇಕಡ ಜನರಲ್ಲಿ ದಾಖಲೆಗಳು ಇಲ್ಲ. ಹಾಗಾಗಿ, ರಾಜ್ಯದಲ್ಲಿ ಲಕ್ಷಾಂತರ ಜನರು ಮತದಾನದ ಹಕ್ಕು ಕಳೆದುಕೊಳ್ಳುವುದು ಖಚಿತ ಎಂದು ಕಳವಳ ವ್ಯಕ್ತಪಡಿಸಿದರು.

ಇಲ್ಲದ ದಾಖಲೆಗಳನ್ನು ಕೇಳಿ, ಲಾಜಿಕಲ್ ಡಿಸ್ಕ್ರಿಪೆನ್ಸಿಯಂತಹ ಹೊಸ ನಿಯಮಗಳ ಮೂಲಕ ಲಕ್ಷಾಂತರ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ. ಎಸ್‌ಐಆರ್ ಮೂಲಕ ಚುನಾವಣಾ ಆಯೋಗ ನಮ್ಮ ಪೌರತ್ವ ಪರಿಶೀಲನೆಗೆ ಇಳಿದಿದೆ. ಪೌರತ್ವ ನಿರ್ಣಯಿಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಇಲ್ಲ. ಹಾಗಾಗಿ, ಈ ಪ್ರಕ್ರಿಯೆ ಒಪ್ಪುವಂತದಲ್ಲ ಎಂದರು.

ನುಸುಳುಕೋರರನ್ನು ಹೊರಗೆ ಹಾಕುತ್ತೇವೆ ಎಂಬ ನೆಪ ಹೇಳಿ ಎಸ್‌ಐಆರ್‌ ನಡೆಸುತ್ತಿದ್ದಾರೆ. ಈಗಾಗಲೇ ಎಸ್‌ಐಆರ್ ನಡೆದಿರುವ ರಾಜ್ಯಗಳಲ್ಲಿ 6.5 ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟಿದ್ದಾರೆ. ಇವರೆಲ್ಲ ನುಸುಳುಕೋರರ ಎಂದು ಪ್ರಶ್ನಿಸಿದರು.

ಮೈ ಓಟ್ ಮೈ ರೈಟ್ ಆಂದೋಲನದ ನಾಯಕ ಆರಿಫುಲ್ಲಾ ಮಾತನಾಡಿ, ಚುನಾವಣಾ ಆಯೋಗದ ಮುಂದೆ ಜನ ಸಂಘಟನೆಗಳು ಇಟ್ಟಿರುವ ಬೇಡಿಕೆಗಳನ್ನು ಈಡೇರಿಸಬೇಕು. ಜನರ ಮತದಾನದ ಹಕ್ಕನ್ನು ಉಳಿಸುವ ಕೆಲಸವನ್ನು ಆಯೋಗ ಮಾಡಬೇಕು. ರಾಜ್ಯ ಸರ್ಕಾರ ಕೂಡ ತ್ವರಿತ ಗತಿಯಲ್ಲಿ ಜನರಿಗೆ ದಾಖಲೆಗಳನ್ನು ನೀಡಿ ಅವರ ಮತದಾನದ ಹಕ್ಕನ್ನು ಉಳಿಸುವ ಕೆಲಸ ಮಾಡಬೇಕು. ಆಯೋಗದ ಮೇಲೆ ಒತ್ತಡ ಹೇರಲು ಜೂನ್ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸಮಾವೇಶ ಆಯೋಜಿಸಿದ್ದೇವೆ. ಆಯೋಗ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಸ್‌ಡಿಪಿಐ ಗದಗ ಜಿಲ್ಲಾಧ್ಯಕ್ಷ ಬಿಲಾಲ್ ಗೋಕಾವಿ, ವೇಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಮುಖಂಡ ಜುನೈದ್, ಸಂವಿಧಾನ ಸಂರಕ್ಷರ ಪಡೆಯ ಸರೋವರ್ ಬೆಂಕಿಕೆರೆ, ಗದಗ-ಬೆಟಗೇರಿ ಅಂಜುಮಾನ್ ಎ ಇಸ್ಲಾಮಿ ಅಧ್ಯಕ್ಷ ಅನ್ವರ್ ಬಾಗೇವಾಡಿ, ಸಾಮಾಜಿಕ ಕಾರ್ಯಕರ್ತ ಮುತ್ತು ಇದ್ದರು.

ಸುದ್ದಿಗೋಷ್ಠಿಗೂ ಮುನ್ನ ಎಸ್‌ಐಆರ್ ವಿರೋಧಿ ಜನಜಾಗೃತಿ ತಂಡ ಗದಗ-ಬೆಟಗೇರಿ ನಗರಸಭೆಯ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಮಾಲಾರ್ಪಣೆ ಮಾಡಿತು. ಸ್ಥಳೀಯರ ಮುಖಂಡರು ಈ ವೇಳೆ ಸಾಥ್ ನೀಡಿದರು.

ಸುದ್ದಿಗೋಷ್ಠಿ ಬಳಿಕ ಜಾಥಾ ತಂಡ ಬೆಟಗೇರಿಯ ಸಂತ ಇಗ್ನೇಷಿಯಸ್ ಲೊಯೋಲಾ ಚರ್ಚ್‌ನಲ್ಲಿ ಫಾದರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು.

ಸಂಜೆ 6 ಗಂಟೆಗೆ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸಮುದಾಯ ಸಂಘಟನೆಗಳ ಮುಖಂಡರೊಂದಿಗೆ ಜಾಥಾ ತಂಡದ ನಾಯಕರು ಸಭೆ ನಡೆಸಿದರು. ಎಸ್‌ಐಆರ್ ವಿಚಾರದಲ್ಲಿ ಬೀದಿಗಿಳಿದು ಜನರಲ್ಲಿ ಜಾಗೃತಿ ಮೂಡಿಸುವಂತೆ ಕರೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...