Homeಕರ್ನಾಟಕಗದಗ: ಹೋಳಿಯಲ್ಲಿ ರಾಸಾಯನಿಕ ಮಿಶ್ರಿತ ಬಣ್ಣ; ಉಸಿರಾಟದ ತೊಂದರೆಯಿಂದ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ಗದಗ: ಹೋಳಿಯಲ್ಲಿ ರಾಸಾಯನಿಕ ಮಿಶ್ರಿತ ಬಣ್ಣ; ಉಸಿರಾಟದ ತೊಂದರೆಯಿಂದ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

- Advertisement -
- Advertisement -

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶುಕ್ರವಾರ ಹೋಳಿ ಆಚರಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಸುರಿದ ಪರಿಣಾಮ ಕನಿಷ್ಠ 8 ಶಾಲಾ ಬಾಲಕಿಯರು ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಘಟನೆ ನಡೆದಿದೆ.

8 ಶಾಲಾ ವಿದ್ಯಾರ್ಥಿನಿಯರಲ್ಲಿ, ನಾಲ್ವರು ಬಾಲಕಿಯರಿಗೆ ಉಸಿರಾಟದ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡ ಕಾರಣ ಅವರ ಸ್ಥಿತಿ ಗಂಭೀರವಾಯಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಐಎಂಎಸ್) ಗೆ ಸ್ಥಳಾಂತರಿಸಲಾಗಿದ್ದು, ಉಳಿದ ಬಾಲಕಿಯರು ಲಕ್ಷ್ಮೇಶ್ವರದ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸಂತ್ರಸ್ತರ ಪೋಷಕರು ಆಸ್ಪತ್ರೆಗೆ ಧಾವಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಪೊಲೀಸರು ದುಷ್ಕರ್ಮಿಗಳ ತಂಡಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ.

ಶಾಲಾ ಬಾಲಕಿಯರು ಇಂದು ಪರೀಕ್ಷೆ ಬರೆಯಬೇಕಾಗಿದ್ದರಿಂದ ಲಕ್ಷ್ಮೇಶ್ವರ ಪಟ್ಟಣದ ಸುವರ್ಣಗಿರಿ ತಾಂಡಾ ಬಳಿಯ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿ ಶಾಲೆಗೆ ಹೋಗಲು ಕಾಯುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳ ಗುಂಪೊಂದು ಬಸ್ ನಿಲ್ದಾಣದ ಬಳಿ ನಿಲ್ಲಿಸಿ, ಬಾಲಕಿಯರ ಮೇಲೆ ಬಣ್ಣಗಳನ್ನು ಸುರಿಯಲು ಪ್ರಾರಂಭಿಸಿತು. ಶಾಲಾ ಬಸ್ ಸಮಯಕ್ಕೆ ಸರಿಯಾಗಿ ಬಂದಿದ್ದರಿಂದ ಹುಡುಗಿಯರು ಅದನ್ನು ಹತ್ತುವಲ್ಲಿ ಯಶಸ್ವಿಯಾದರು. ಆದಾಗ್ಯೂ, ಆ ಗ್ಯಾಂಗ್ ಬೈಕ್‌ಗಳಲ್ಲಿ ಬಸ್ ಅನ್ನು ಬೆನ್ನಟ್ಟಿ, ವಾಹನ ಹತ್ತಿ, ಏಳು ಶಾಲಾ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು, ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಎರಚಿದೆ ಎಂದು ಮೂಲಗಳು ತಿಳಿಸಿವೆ.

ಪ್ರಾಥಮಿಕ ತನಿಖೆಯಲ್ಲಿ ಬಣ್ಣವು ಹಸುವಿನ ಸಗಣಿ, ಮೊಟ್ಟೆ, ಫಿನಾಯಿಲ್ ಮತ್ತು ಬಣ್ಣಗಳ ಮಿಶ್ರಣವನ್ನು ಹೊಂದಿತ್ತು ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿಯರ ಮೇಲೆ ರಾಸಾಯನಿಕ ಮಿಶ್ರಿತ ಬಣ್ಣ ಸುರಿದಾಗ ತಿಳಿಯದೆಯೇ ಸಣ್ಣ ಪ್ರಮಾಣದಲ್ಲಿ ಅದನ್ನು ಸೇವಿಸಿದರು, ಇದರಿಂದಾಗಿ ಅವರಿಗೆ ಉಸಿರಾಟದ ತೊಂದರೆ ಮತ್ತು ಇತರ ಲಕ್ಷಣಗಳು ಕಂಡುಬಂದವು ಅಸ್ಪತ್ರೆಯ ಮೂಲಗಳು ತಿಳಿಸಿವೆ.

ವಿದ್ಯಾರ್ಥಿಗಳು ಅಸ್ವಸ್ಥರಾದರು ಮತ್ತು ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿನ ದೃಶ್ಯಗಳು ಹೃದಯ ವಿದ್ರಾವಕವಾಗಿದ್ದವು, ಹುಡುಗಿಯರು ಉಸಿರಾಡಲು ಕಷ್ಟಪಡುತ್ತಿದ್ದರು ಮತ್ತು ತೀವ್ರ ಎದೆನೋವಿನಿಂದ ಬಳಲುತ್ತಿದ್ದರು. ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಆಗಮಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೋಷಕರಿಗೆ ಭರವಸೆ ನೀಡಿದರು.

ಆರೋಪಿಗಳು ಬೈಕ್‌ಗಳಲ್ಲಿ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರು ಸ್ಥಳೀಯರು ಮತ್ತು ಶಾಲಾ ಬಸ್‌ನಲ್ಲಿದ್ದ ಇತರ ಪ್ರಯಾಣಿಕರಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ತನಿಖೆ ಮುಂದುವರೆದಂತೆ ಹೆಚ್ಚಿನ ವಿವರಗಳು ಹೊರಬರುವ ನಿರೀಕ್ಷೆಯಿದೆ. ಪ್ರಕರಣದ ಬಗ್ಗೆ ಅಧಿಕಾರಿಗಳು ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

ಹೋಳಿ ಹಬ್ಬ: ಬಣ್ಣ ಹಚ್ಚಿಸಿಕೊಳ್ಳುವುದನ್ನು ನಿರಾಕರಿಸಿದ ವ್ಯಕ್ತಿಯ ಹತ್ಯೆ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...