Homeಮುಖಪುಟನಿತಿನ್ ಗಡ್ಕರಿ ಕುರಿತ ವಿಡಿಯೋ ಹಂಚಿಕೊಂಡ ಖರ್ಗೆ, ಜೈರಾಮ್ ರಮೇಶ್‌ಗೆ ನೊಟೀಸ್‌

ನಿತಿನ್ ಗಡ್ಕರಿ ಕುರಿತ ವಿಡಿಯೋ ಹಂಚಿಕೊಂಡ ಖರ್ಗೆ, ಜೈರಾಮ್ ರಮೇಶ್‌ಗೆ ನೊಟೀಸ್‌

- Advertisement -
- Advertisement -

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ತಮ್ಮ ಬಗ್ಗೆ ತಪ್ಪುದಾರಿಗೆಳೆಯುವ ಮತ್ತು ಅವಹೇಳನಕಾರಿ ಸುದ್ದಿಗಳನ್ನು ಎಕ್ಸ್‌ನಲ್ಲಿ ಹಂಚಿಕೊಂಡ ಆರೋಪದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರಿಗೆ ಶುಕ್ರವಾರ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ಕಾಂಗ್ರೆಸ್‌ನ ಅಧಿಕೃತ ಹ್ಯಾಂಡಲ್‌ನಲ್ಲಿ ಹಂಚಿಕೊಂಡ ವಿಷಯಗಳು ಮತ್ತು ಪೋಸ್ಟ್‌ಗಳನ್ನು ನೋಡಿದ ತಮ್ಮ ಕಕ್ಷಿದಾರರಿಗೆ ಆಘಾತವಾಗಿದೆ ಎಂದು ಗಡ್ಕರಿ ಅವರ ವಕೀಲ ಬಲೇಂದು ಶೇಖರ್ ಹೇಳಿದ್ದಾರೆ.

ಗಡ್ಕರಿಯವರು ‘ದಿ ಲಲ್ಲಾಂಟಾಪ್‌’ ವೆಬ್‌ ಪೋರ್ಟಲ್‌ಗೆ ನೀಡಿರುವ ಸಂದರ್ಶನದ 19 ಸೆಕೆಂಡುಗಳ ವಿಡಿಯೊ ತುಣುಕನ್ನು ಖರ್ಗೆ ಮತ್ತು ರಮೇಶ್‌ ಅವರು ಉದ್ದೇಶಪೂರ್ವಕವಾಗಿ ಪೋಸ್ಟ್‌ ಮಾಡಿದ್ದಾರೆ. ಅಲ್ಲದೆ, ಗಡ್ಕರಿ ಅವರ ಮಾತುಗಳನ್ನು ತಿರುಚಲಾಗಿದ್ದು, ಸಂದರ್ಭೋಚಿತ ಉದ್ದೇಶ ಮತ್ತು ಅರ್ಥವನ್ನು ಮರೆಮಾಚಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.

ಗಡ್ಕರಿ ಅವರ ಕುರಿತು ಸಾರ್ವಜನಿಕರ ದೃಷ್ಟಿಯಲ್ಲಿ ಗೊಂದಲ, ಉದ್ರೇಕ ಮತ್ತು ಅಪಖ್ಯಾತಿ ಸೃಷ್ಟಿಸುವ ದುರುದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜನರ ವಿಶ್ವಾಸವನ್ನು ಗಳಿಸಲು ಸಜ್ಜಾಗಿರುವ ಬಿಜೆಪಿಯ ಒಗ್ಗಟ್ಟಿನಲ್ಲಿ ಬಿರುಕು ಸೃಷ್ಟಿಸುವ ವ್ಯರ್ಥ ಪ್ರಯತ್ನ ಇದಾಗಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ದೇಶದ ಹಲವೆಡೆ ಕಾರ್ಮಿಕರು ಮತ್ತು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವು ಗ್ರಾಮಗಳಲ್ಲಿ ಉತ್ತಮ ರಸ್ತೆಗಳಿಲ್ಲ, ಕುಡಿಯಲು ಶುದ್ಧ ನೀರಿಲ್ಲ, ಉತ್ತಮ ಆಸ್ಪತ್ರೆಗಳು ಮತ್ತು ಶಾಲೆಗಳಿಲ್ಲ ಎಂದು ಗಡ್ಕರಿ ಅವರು ಮಾತನಾಡಿರುವ ವಿಡಿಯೊಗೆ ಹಿಂದಿ ಶೀರ್ಷಿಕೆಯನ್ನು ನೀಡುವ ಮೂಲಕ ಉದ್ದೇಶಪೂರ್ವಕವಾಗಿ ಖರ್ಗೆ, ರಮೇಶ್ ಅವರು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ. ಗಡ್ಕರಿ ಅವರ ಸಂದರ್ಶನವನ್ನು ತಿರುಚಿ ವೀಡಿಯೊವನ್ನು ಅಪ್‌ಲೋಡ್ ಮಾಡಲಾಗಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಆಜ್ ಗಾಂವ್, ಮಜ್ದೂರ್ ಔರ್ ಕಿಸಾನ್ ದುಖೀ ಹೈ ಎಂದು ಹೇಳುವ ಆಯ್ದ ಹಿಂದಿ ಶೀರ್ಷಿಕೆಯೊಂದಿಗೆ ಉದ್ದೇಶಪೂರ್ವಕವಾಗಿ ಮತ್ತು ಪ್ರಜ್ಞಾಪೂರ್ವಕವಾಗಿ ಇದನ್ನು ಮಾಡಲಾಗಿದೆ. ಗ್ರಾಮಗಳು, ಕಾರ್ಮಿಕರು ಮತ್ತು ರೈತರು ಇಂದು ಅತೃಪ್ತರಾಗಿದ್ದಾರೆ. ಹಳ್ಳಿಗಳಿಗೆ ರಸ್ತೆಗಳಿಲ್ಲ, ಕುಡಿಯುವ ನೀರು ಇಲ್ಲ, ಉತ್ತಮ ಆಸ್ಪತ್ರೆಗಳು ಮತ್ತು ಶಾಲೆಗಳು ಇಲ್ಲ ಎಂದು ಮೋದಿ ಸರ್ಕಾರದಲ್ಲಿ ಮಂತ್ರಿಯಾಗಿರುವ ನಿತಿನ್‌ ಗಡ್ಕರಿ ಹೇಳಿರುವುದಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಲಾಗಿದೆ.

ಖರ್ಗೆ ಮತ್ತು ರಮೇಶ್‌ ಅವರು ಗಡ್ಕರಿಯವರ ಸಂದರ್ಶನದ ಸಂಪೂರ್ಣ ವಿಷಯಗಳ ಬಗ್ಗೆ ತಿಳಿದಿದ್ದರೂ ಸಹ ಉದ್ದೇಶಪೂರ್ವಕವಾಗಿ ಹಿಂದಿ ಶೀರ್ಷಿಕೆ ಮತ್ತು ವಿಡಿಯೊ ತುಣುಕನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ಮೂಲಕ ಗಡ್ಕರಿ ಅವರ ಖ್ಯಾತಿಯನ್ನು ಕೆಡಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಈ ನೋಟಿಸ್‌ ಸ್ವೀಕರಿಸಿದ 24 ಗಂಟೆಗಳ ಒಳಗಾಗಿ ‘ಎಕ್ಸ್‌’ನಲ್ಲಿ ಹಂಚಿಕೊಂಡಿರುವ ಪೋಸ್ಟ್‌ನ್ನು ಅಳಿಸುವಂತೆ ತಿಳಿಸಲಾಗಿದೆ. ಜೊತೆಗೆ ಮೂರು ದಿನಗಳೊಳಗೆ ನನ್ನ ಕಕ್ಷಿದಾರರಿಗೆ ಲಿಖಿತ ಕ್ಷಮೆಯಾಚಿಸಬೇಕು, ಇಲ್ಲವಾದಲ್ಲಿ ನನ್ನ ಕಕ್ಷಿದಾರರು ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಇದನ್ನು ಓದಿ: ಗಾಝಾದಲ್ಲಿನ ಪತ್ರಕರ್ತರಿಗೆ ಒಗ್ಗಟ್ಟು ಪ್ರದರ್ಶಿಸಿ ಪತ್ರ ಬರೆದ ಮಾದ್ಯಮ ಸಂಸ್ಥೆಗಳು

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...