Homeಮುಖಪುಟಕಾಂಗ್ರೆಸ್ ವಿರುದ್ಧ ಪ್ರತಿಭಟಿಸಿ ಟ್ರೋಲ್ ಆದ ಗಾಲ್ಗೋಟಿಯಾಸ್ ವಿವಿ ವಿದ್ಯಾರ್ಥಿಗಳು: ಕ್ಷಮಿಸುವಂತೆ ಮನವಿ

ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಿ ಟ್ರೋಲ್ ಆದ ಗಾಲ್ಗೋಟಿಯಾಸ್ ವಿವಿ ವಿದ್ಯಾರ್ಥಿಗಳು: ಕ್ಷಮಿಸುವಂತೆ ಮನವಿ

- Advertisement -
- Advertisement -

ಕಾಂಗ್ರೆಸ್ ವಿರುದ್ದ ಪ್ರತಿಭಟಿಸುವ ಮೂಲಕ ಉತ್ತರ ಪ್ರದೇಶದ ಗಾಲ್ಗೋಟಿಯಾಸ್ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ನಿನ್ನೆಯಿಂದ (ಮೇ 1) ಭಾರೀ ಸುದ್ದಿಯಲ್ಲಿದ್ದಾರೆ.

ಕಾಂಗ್ರೆಸ್‌ ವಿರುದ್ದ ಹಲವು ಆರೋಪಗಳನ್ನು ಹೊರಿಸಿ ಗಾಲ್ಗೋಟಿಯಾಸ್ ವಿವಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಪಿತ್ರಾರ್ಜಿತ ಆಸ್ತಿ ತೆರಿಗೆ (Inheritance tax), ನಗರ ನಕ್ಸಲರು (Urban Naxalism) ಇತ್ಯಾದಿ ಭಿತ್ತಿ ಪತ್ರಗಳನ್ನು ಹಿಡಿದು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಸಾಗುತ್ತಿದ್ದರು. ಈ ವೇಳೆ ಆಜ್‌ತಕ್ ಸುದ್ದಿ ವಾಹಿನಿಯ ವರದಿಗಾರ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಮಾತನಾಡಿಸಿದ್ದಾರೆ.

ವರದಿಗಾರ “ನೀವು ಏಕೆ, ಪ್ರತಿಭಟಿಸುತ್ತಿದ್ದೀರಿ?” ಎಂದು ಕೇಳಿದ್ದಕ್ಕೆ, ಕೆಲ ವಿದ್ಯಾರ್ಥಿಗಳು “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಪತ್ತಿನ ಮರು ಹಂಚಿಕೆ ಮಾಡಲಿದೆ, ಪಿತ್ರಾರ್ಜಿತ ಆಸ್ತಿ ತೆರಿಗೆ ಜಾರಿಗೆ ತರಲಿದೆ” ಎಂದಿದ್ದಾರೆ. “ಪಿತ್ರಾರ್ಜಿತ ಆಸ್ತಿ ತೆರಿಗೆ ಎಂದರೇನು?” ಎಂದು ವರದಿಗಾರ ಕೇಳಿದ್ದಕ್ಕೆ ವಿದ್ಯಾರ್ಥಿಗಳು ಉತ್ತರಿಸಲು ತಡವರಿಸಿದ್ದಾರೆ. ಇನ್ನೂ ಕೆಲ ವಿದ್ಯಾರ್ಥಿಗಳು ತಾವು ಹಿಡಿದಿದ್ದ ಭಿತ್ತಿ ಪತ್ರವನ್ನು ಸರಿಯಾಗಿ ಓದಲು ವಿಫಲರಾಗಿದ್ದಾರೆ. ಒಟ್ಟಿನಲ್ಲಿ ಹೇಳುವುದಾದರೆ, ವಿದ್ಯಾರ್ಥಿಗಳಿಗೆ ತಾವು ಏಕೆ ಪ್ರತಿಭಟಿಸುತ್ತೀದ್ದೇವೆ ಎಂದೇ ಗೊತ್ತಿರಲಿಲ್ಲ.

ಆಜ್‌ತಕ್‌ ವರದಿ ಪ್ರಸಾರಗೊಂಡ ತಕ್ಷಣ ವಿದ್ಯಾರ್ಥಿಗಳ ಪ್ರತಿಭಟನೆಯ ವಿಡಿಯೋ ಭಾರೀ ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕರು ಸೇರಿದಂತೆ ಸಾವಿರಾರು ಜನರು ವಿಡಿಯೋ ಹಂಚಿಕೊಂಡು, “ಈ ವಿದ್ಯಾರ್ಥಿಗಳು ಮೋದಿಯ ವಾಟ್ಸಾಪ್ ಯೂನಿವರ್ಸಿಟಿಯವರು” ಎಂದು ಟ್ರೋಲ್ ಮಾಡಿದ್ದಾರೆ. ಎಕ್ಸ್‌ನಲ್ಲಿ ‘ಗಾಲ್ಗೋಟಿಯಾಸ್ ಯೂನಿವರ್ಸಿಟಿ’ ಟ್ರೆಡಿಂಗ್ ಆಗಿದೆ.

ಕ್ಷಮಿಸುವಂತೆ ಮನವಿ ಮಾಡಿದ ವಿದ್ಯಾರ್ಥಿಗಳು :

ತಮ್ಮ ವಿಡಿಯೋ ದೇಶದಾದ್ಯಂತ ವೈರಲ್ ಆಗುತ್ತಿದ್ದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಹೊರಗಡೆ ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಕ್ಷಮೆ ಕೇಳಿದ್ದು, ಪ್ರತಿಭಟನೆಯ ಹಿಂದಿನ ಸತ್ಯ ಬಿಚ್ಚಿಟ್ಟಿದ್ದಾರೆ.

ಲಕ್ಷೀ ಶರ್ಮಾ ಎಂಬ ವಿದ್ಯಾರ್ಥಿನಿ ಎಕ್ಸ್‌ ಮೂಲಕ ಪ್ರತಿಕ್ರಿಯಿಸಿ ” ನಮ್ಮ ತಪ್ಪುಗಳು ನಮಗೆ ಅರಿವಾಗಿದೆ. ನಮಗೆ ಅದು ಪ್ರೊಪಗೊಂಡ ಕಾರ್ಯಕ್ರಮ ಎಂದು ಗೊತ್ತಿರಲಿಲ್ಲ. ಕಂಗನಾ ರಣಾವತ್ ಅವರನ್ನು ಭೇಟಿಯಾಗುವ ಅವಕಾಶ ಸಿಗಲಿದೆ ಎಂದು ನಮಗೆ ಹೇಳಲಾಗಿತ್ತು. ವಿದ್ಯಾರ್ಥಿ ಪರಿಷತ್ತಿನ ಪರವಾಗಿ ನಾನು ಎಲ್ಲರಲ್ಲಿ ಕ್ಷಮೆಯಾಚಿಸುತ್ತೇನೆ. ವಿಶ್ವವಿದ್ಯಾನಿಲಯದ ಆಡಳಿತ ಪ್ರತಿಭಟನೆಗೆ ತೆರಳಲು ನಮ್ಮನ್ನು ಒತ್ತಾಯಿಸಿತ್ತು. ಭಿತ್ತಿ ಪತ್ರಗಳನ್ನೂ ಅವರೇ ನೀಡಿದ್ದು” ಎಂದಿದ್ದಾರೆ.

“ಪ್ರತಿಭಟನೆಯಲ್ಲಿ ಉತ್ತಮ ಮುದ್ರಿತ ಪೋಸ್ಟರ್‌ ಬಳಸಲು ನಮ್ಮ ಬಳಿ ಹಣ ಇರಲಿಲ್ಲ. ಹಾಗಾಗಿ, ಚಾರ್ಟ್ ಪೇಪರ್‌ನಲ್ಲಿ ಭಿತ್ತಿ ಪತ್ರಗಳನ್ನು ಕೈಯಿಂದ ಬರೆದಿದ್ದೆವು. ಅವುಗಳ ಎಲ್ಲಾ ವಿಡಿಯೋಗಳನ್ನು ಇನ್‌ಸ್ಟಾ ಹ್ಯಾಂಡಲ್‌ನಿಂದ ತೆಗೆಸಲಾಗಿದೆ. ಐಎಎಸ್ ಆಗಬೇಕೆಂಬುದು ನನ್ನ ಕನಸು. ನಾವು ಯಾವುದೇ ರಾಜಕೀಯದಲ್ಲಿ ಇಲ್ಲ. ಆಂತರಿಕ ಪರೀಕ್ಷೆಯಲ್ಲಿ ಅಂಕ ನೀಡುವುದಾಗಿ ವಿವಿ ಆಡಳಿತ ನಮಗೆ ಭರವಸೆ ನೀಡಿತ್ತು” ಎಂದು ವಿದ್ಯಾರ್ಥಿನಿ ಸತ್ಯ ಬಹಿರಂಗಪಡಿಸಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆ ಒಂದೆಡೆ ಟ್ರೋಲ್ ಆಗುತ್ತಿದ್ದರೆ, ಮತ್ತೊಂದೆಡೆ ಗಾಲ್ಗೋಟಿಯಾಸ್ ವಿವಿ ಕಾಲೇಜಿನ ಸಿಇಒ ಎನ್ನಲಾದ ಧ್ರುವ್ ಗಾಲ್ಗೋಟಿಯಾ ವಿದ್ಯಾರ್ಥಿಗಳ ಪ್ರತಿಭಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, “ಗಾಲ್ಗೋಟಿಯಾಸ್ ವಿವಿಯ ವಿದ್ಯಾರ್ಥಿಗಳು ಧೈರ್ಯವಾಗಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾರೆ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚಿಸುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಧ್ರವ್ ಅವರ ಪೋಸ್ಟನ್ನು ಉಲ್ಲೇಖಿಸಿ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ರೋಲ್ ಮಾಡಿದ್ದಾರೆ. “ಗಾಲ್ಗೋಟಿಯಾಸ್ ಕಾಲೇಜಿನ ಸಿಇಒ ಧ್ರುವ ಗಾಲ್ಗೋಟಿಯಾ ಅವರು ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅವರಿಗೆ (ವಿದ್ಯಾರ್ಥಿಗಳಿಗೆ) ಹಿಂದಿ. ಇಂಗ್ಲಿಷ್ ಕೂಡ ಓದಲು ಬರುವುದಿಲ್ಲ. ಆದರೆ, ವಿದ್ಯಾರ್ಥಿಗಳು ಧೈರ್ಯವಾಗಿ ಮಾತನಾಡುತ್ತಿದ್ದಾರೆ ಎಂದು ಸಿಇಒ ಬರೆದಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ, ಅವರನ್ನೇ ಹೊಣೆಗಾರರನ್ನಾಗಿಸಬೇಕು ಮತ್ತು ಅವರು ತಮ್ಮ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಏನು ಮಾಡುತ್ತಿದ್ದಾರೆ? ಅವೆಲ್ಲವೂ ವಾಟ್ಸಾಪ್‌ ಯೂನಿವರ್ಸಿಟಿ ಉತ್ಪನ್ನಗಳಾಗಿವೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ‘ಚುನಾವಣೆ ಪ್ರಚಾರದಲ್ಲಿ ಪದೇ ಪದೇ ಸುಳ್ಳು ಹೇಳುತ್ತಿರುವುದರಿಂದ…..’,: ಮೋದಿಗೆ ಕಾಂಗ್ರೆಸ್‌ ಪ್ರಣಾಳಿಕೆಯನ್ನು ವಿವರಿಸಿ ಪತ್ರ ಬರೆದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...