Homeಮುಖಪುಟಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣ | ಜನಾರ್ದನ ರೆಡ್ಡಿ ದೋಷಿ ಎಂದ ಸಿಬಿಐ ಕೋರ್ಟ್; 7...

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣ | ಜನಾರ್ದನ ರೆಡ್ಡಿ ದೋಷಿ ಎಂದ ಸಿಬಿಐ ಕೋರ್ಟ್; 7 ವರ್ಷ ಜೈಲು

- Advertisement -
- Advertisement -

ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ನಾಲ್ವರು ದೋಷಿಗಳು ಎಂದು ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ (ಮೇ.6) ತೀರ್ಪು ನೀಡಿದ್ದು, 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಮೂವರನ್ನು ಖುಲಾಸೆಗೊಳಿಸಿದೆ.

ಶಾಸಕ ಗಾಲಿ ಜನಾರ್ದನ ರೆಡ್ಡಿ, ಓಎಂಸಿಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಿ.ವಿ ಶ್ರೀನಿವಾಸ ರೆಡ್ಡಿ, ಆಂಧ್ರ ಪ್ರದೇಶ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಾಜಿ ನಿರ್ದೇಶಕ ವಿ.ಡಿ ರಾಜಗೋಪಾಲ್, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಾಜಿ ಉಪ ನಿರ್ದೇಶಕರಾಗಿದ್ದ ಕೆ.ಮೆಫಾಝ್ ಅಲಿ ಖಾನ್ ದೋಷಿಗಳು ಎಂದು ನ್ಯಾಯಾಲಯ ಘೋಷಿಸಿದೆ.

ಆಂಧ್ರ ಪ್ರದೇಶ ಗಣಿ ಮತ್ತು ಭೂವಿಜ್ಞಾನ ಇಲಾಖೆ ಮಾಜಿ ಸಚಿವೆ ಸಬಿತಾ ಇಂದ್ರಾ ರೆಡ್ಡಿ, ಗಣಿ ಇಲಾಖೆಯ ಮಾಜಿ ಅಧಿಕಾರಿ ಕೃಪಾನಂದಂ ಅವರನ್ನು ಖುಲಾಸೆಗೊಳಿಸಲಾಗಿದೆ. ಇನ್ನೊಬ್ಬರು, ಗಣಿ ಇಲಾಖೆ ಮಾಜಿ ಪ್ರಧಾನ ಕಾರ್ಯದರ್ಶಿ ವೈ. ಶ್ರೀಲಕ್ಷ್ಮಿ ಅವರನ್ನು 2022ರಲ್ಲಿ ಪ್ರಕರಣದಿಂದ ಬಿಡುಗಡೆ ಮಾಡಲಾಗಿದೆ.

ಇದು 29 ಲಕ್ಷ ಟನ್ ಅದಿರು ಕಳ್ಳತನ ಮಾಡಿದ 13 ವರ್ಷ ಹಳೆಯ ಪ್ರಕರಣವಾಗಿದೆ. ಕರ್ನಾಟಕದಿಂದ ಆಂಧ್ರ ಪ್ರದೇಶಕ್ಕೆ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಲಾಗಿತ್ತು.

2009ರಲ್ಲಿ, ಅಂದಿನ ಆಂಧ್ರಪ್ರದೇಶ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರದ ನಿರ್ದೇಶನದಂತೆ ಸಿಬಿಐ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿತ್ತು. 2011ರಲ್ಲಿ ಮೊದಲ ಚಾರ್ಜ್‌ಶೀಟ್‌ ಸಲ್ಲಿಸಿತ್ತು.

ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿಯಲ್ಲಿ ಆರೋಪಿಗಳ ವಿರುದ್ದ ಆರೋಪಗಳನ್ನು ಹೊರಿಸಲಾಗಿತ್ತು. ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆದ ವಿಚಾರಣೆ ನಡೆದಿತ್ತು. ಮೇ ಅಂತ್ಯದೊಳಗೆ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಗಡುವು ನೀಡಿದ ಹಿನ್ನೆಲೆ, ಸಿಬಿಐ ನ್ಯಾಯಾಲಯ ಕಳೆದ ತಿಂಗಳು ವಿಚಾರಣೆ ಪೂರ್ಣಗೊಳಿಸಿತ್ತು.

ತಿಂಗಳೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಪ್ರಕಟಿಸಿ | ಮಹಾರಾಷ್ಟ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...