Homeಅಂತರಾಷ್ಟ್ರೀಯಗಾಲ್ವಾನ್ ಸಂಘರ್ಷ ಚೀನಾದ ಪೂರ್ವ ಯೋಜಿತ ಕೃತ್ಯ: ಅಮೆರಿಕಾ ವರದಿ

ಗಾಲ್ವಾನ್ ಸಂಘರ್ಷ ಚೀನಾದ ಪೂರ್ವ ಯೋಜಿತ ಕೃತ್ಯ: ಅಮೆರಿಕಾ ವರದಿ

- Advertisement -
- Advertisement -

ಜೂನ್‌ 15 ರಂದು ಚೀನಾ ಮತ್ತು ಭಾರತೀಯ ಸೇನೆಯ ನಡುವೆ ಗಾಲ್ವಾನ್‌ ಕಣಿವೆಯಲ್ಲಿ ನಡೆದ ಘರ್ಷಣೆಗೆ ಚೀನಾ ಸರ್ಕಾರ ಮೊದಲೇ ಯೋಜನೆ ರೂಪಿಸಿತ್ತು ಎಂದು ಅಮೆರಿಕ ಕಾಂಗ್ರೆಸ್‌ಗೆ ಸಲ್ಲಿಕೆಯಾಗಿರುವ ಇತ್ತೀಚಿನ ವರದಿಯಲ್ಲಿ ಹೇಳಲಾಗಿದೆ. ಈ ಯೋಜನೆಯಂತೆ ಅಲ್ಲಿ ಸಾಕಷ್ಟು ಸಾವುನೋವುಗಳನ್ನು ಉಂಟು ಮಾಡುವುದೇ ಅದರ ದುರುದ್ದೇಶವಾಗಿತ್ತೆಂದು ಅದು ಹೇಳಿದೆ.

ಮಂಗಳವಾರ ಪ್ರಕಟವಾದ ಈ ವರದಿಯಲ್ಲಿ, ತನ್ನ ನೆರೆಹೊರೆಯ ರಾಷ್ಟ್ರಗಳ ವಿರುದ್ಧ ಚೀನಾವು ಹಲವಾರು ವರ್ಷಗಳಿಂದ ಬೆದರಿಸುವ ಅಭಿಯಾನವನ್ನು ನಡೆಸುತ್ತಾ ಬಂದಿದ್ದು, ಜಪಾನ್‌, ಭಾರತ ಸೇರಿದಂತೆ ಆಗ್ನೇಯ ಏಷ್ಯಾದ ರಾಷ್ಟ್ರಗಳ ಜೊತೆ ಮಿಲಿಟರಿ ಉದ್ವಿಗ್ನತೆಯನ್ನು ಪ್ರಚೋದಿಸುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಚೀನಾ ಪ್ರಸ್ತಾಪಿತ ಒಪ್ಪಂದಕ್ಕೆ ಸಹಿ ಹಾಕಿದ 15 ರಾಷ್ಟ್ರಗಳು; ಹೊರಗುಳಿದ ಭಾರತ!

ಚೀನಾ-ಭಾರತದ ಸಂಬಂಧಗಳ ವಿಷಯದಲ್ಲಿ 2020 ಅತ್ಯಂತ ‘ಕೆಟ್ಟ ವರ್ಷ’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಗಲ್ವಾನ್ ಸಂಘರ್ಷವು 1975ರ ಯುದ್ಧದ ಬಳಿಕ ಇದೇ ಮೊದಲ ಬಾರಿಗೆ ಎರಡೂ ಕಡೆಯ ಸೈನಿಕರ ಸಾವು, ನೋವಿಗೆ ಕಾರಣವಾಗಿದೆಯೆಂದು ವರದಿ ತಿಳಿಸಿದೆ.

ಶಾಂತಿ ಕಾಲದಲ್ಲಿ ಚೀನಾ ಆಡಳಿತ ಪಕ್ಷವು ತನ್ನ ಸಶಸ್ತ್ರ ಪಡೆಗಳನ್ನು ಬೆದರಿಕೆಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ತೈವಾನ್ ಮತ್ತು ದಕ್ಷಿಣ ಚೀನಾ ಸಾಗರಪ್ರದೇಶದಲ್ಲಿ ಬೃಹತ್ ಪ್ರಮಾಣದಲ್ಲಿ ಸಮರಾಭ್ಯಾಸಗಳನ್ನು ನಡೆಸಿ ಭೀತಿ ಮೂಡಿಸಲು ಯತ್ನಿಸುತ್ತಿದೆ ಎಂದು ವರದಿ ಹೇಳಿದೆ.

ಚೀನಾದ ಆಕ್ರಮಣಕಾರಿ ಕ್ರಮಗಳ ಹಿನ್ನೆಲೆಯಲ್ಲಿ ಭಾರತ ಮತ್ತು ಚೀನಾದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ‘ಅಮೆರಿಕ-ಚೀನಾ ಆಯೋಗ’ ಅಮೆರಿಕ ಕಾಂಗ್ರೆಸ್‌ಗೆ ವಿವರವಾದ ಈ ವರದಿಯನ್ನು ನೀಡಿದೆ. ಅಮೆರಿಕ ಮತ್ತು ಚೀನಾ ನಡುವಿನ ಭದ್ರತೆ ಮತ್ತು ವ್ಯಾಪಾರ ಸಮಸ್ಯೆಗಳನ್ನು ಮೇಲ್ವಿಚಾರಣೆ ಮಾಡಲು 2000 ನೇ ಅಕ್ಟೋಬರ್‌ನಲ್ಲಿ ‘ಅಮೆರಿಕ-ಚೀನಾ ಆಯೋಗ’ವನ್ನು ರಚಿಸಲಾಗಿತ್ತು.

ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಈ ಸಂಘರ್ಷದಿಂದ ಭಾರತದ ಸುಮಾರು 20 ಯೋಧರು ಸಾವನ್ನಪ್ಪಿದ್ದರು. ಚೀನಾ ಕೂಡಾ ಸಾವು ನೋವುಗಳಾಗಿತ್ತು ಎಂದು ಒಪ್ಪಿಕೊಂಡಿದ್ದರೂ ಸಾವಿನ ಸಂಖ್ಯೆಯನ್ನು ಬಹಿರಂಗಪಡಿಸಿರಲಿಲ್ಲ.

ಇದನ್ನೂ ಓದಿ: ಚೀನಾ ನಮ್ಮ ಭೂಪ್ರದೇಶವನ್ನು ವಶಪಡಿಸಿಕೊಂಡಿದೆ ಎಂಬುದು ಸ್ಪಷ್ಟ: ಮೋಹನ್ ಭಾಗವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...