Homeಕರ್ನಾಟಕಬಿಜೆಎ ವತಿಯಿಂದ ಜ.3ರಿಂದ “ಜನ ಗಣ ಮನ ಅಭಿಯಾನ”

ಬಿಜೆಎ ವತಿಯಿಂದ ಜ.3ರಿಂದ “ಜನ ಗಣ ಮನ ಅಭಿಯಾನ”

- Advertisement -
- Advertisement -

ಭಾರತ್ ಜೋಡೋ ಅಭಿಯಾನ್ ನಾಗರಿಕ ಸಮಾಜದ ವೇದಿಕೆ ವತಿಯಿಂದ “ಜನ ಗಣ ಮನ ಅಭಿಯಾನ” ಎಂಬ ಆನ್‌ಲೈನ್ ಮತ್ತು ಆಫ್‌ಲೈನ್ ಕಾರ್ಯಕ್ರಮಗಳ ಒಂದು ತಿಂಗಳ ಅವಧಿಯ ಅಭಿಯಾನ ಜ.3ರಿಂದ ಆರಂಭವಾಗಲಿದ್ದು, ಭಾರತದ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯದ ಸಮಸ್ಯೆಗಳನ್ನು ಎತ್ತಿ ತೋರಿಸುವುದರ ಜೊತೆಗೆ ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸುವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಸಂರಕ್ಷಿಸುವ ಗುರಿಯನ್ನು ಅಭಿಯಾನ ಹೊಂದಿದೆ.

ಭಾರತ್ ಜೋಡೋ ಅಭಿಯಾನ್ (BJA) ಭಾರತದ 15 ರಾಜ್ಯಗಳಾದ್ಯಂತ ಹಲವಾರು ಜನರ ಸಂಘಟನೆಗಳನ್ನು ಒಳಗೊಂಡಿರುವ ನಾಗರಿಕ ಸಮಾಜದ ವೇದಿಕೆಯಾಗಿದೆ. ಭಾರತದ ಬಹು-ವರ್ಣದ ಸಾಮಾಜಿಕ ರಚನೆಯನ್ನು ರಕ್ಷಿಸುವುದು, ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯದ ಸಮಸ್ಯೆಗಳನ್ನು ಎತ್ತಿ ತೋರಿಸುವುದು ಮತ್ತು ಎಲ್ಲಾ ನಾಗರಿಕರ ಸಮಾನತೆ ಮತ್ತು ಭ್ರಾತೃತ್ವಕ್ಕಾಗಿ ಶ್ರಮಿಸುವುದು ಇದರ ಉದ್ದೇಶವಾಗಿದೆ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸುವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಸಂರಕ್ಷಿಸುವ ಗುರಿಯನ್ನು ಹೊಂದಿದೆ.

ಅಭಿಯಾನವು 2024ರ ಜ.3ರಿಂದ 30ನೇ ತಾರೀಕಿನವರೆಗೆ ನಡೆಯಲಿದೆ. ಇದು ಸ್ವಾಮಿ ವಿವೇಕಾನಂದರು, ಸಾವಿತ್ರಿಬಾಯಿ ಫುಲೆ, ಬಾಬಾಸಾಹೇಬ ಅಂಬೇಡ್ಕರ್, ಖಾನ್ ಅಬ್ದುಲ್ ಗಫಾರ್ ಖಾನ್, ಮಹಾತ್ಮ ಗಾಂಧಿ ಅವರ ಕುರಿತ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳು ಮತ್ತು ಸಂಕ್ರಾಂತಿಯಂತಹ ಹಬ್ಬಗಳ ಆಚರಣೆಯನ್ನು ಒಳಗೊಂಡಿದೆ.

ವೀಡಿಯೊಗಳು, ಪೋಸ್ಟರ್‌ಗಳು, ಆನ್‌ಲೈನ್ ಮತ್ತು ಸಂವಾದ, ಸ್ಥಳೀಯ ಕಾರ್ಯಕ್ರಮಗಳು ಸೇರಿವೆ.  7877722353 ಸಂಖ್ಯೆಗೆ ಮಿಸ್ಢ್‌ ಕಾಲ್‌ ನೀಡುವ ಮೂಲಕ ಅಭಿಯಾನದಲ್ಲಿ ಸೇರಿಕೊಳ್ಳಬಹುದು. ನಮ್ಮ ಅಭಿಯಾನಕ್ಕೆ ಸೇರಲು ಎಲ್ಲಾ ನಾಗರಿಕರನ್ನು ಸ್ವಾಗತಿಸುತ್ತೇವೆ ಎಂದು ಸಂಘಟಕರು ಹೇಳಿದ್ದಾರೆ.

ದೇಶವು ಸಂಘಟಿತ ಕೋಮುವಾದದ ಉನ್ಮಾದಕ್ಕೆ ಸಾಕ್ಷಿಯಾಗುತ್ತಿದೆ,  2024ರ ರಾಷ್ಟ್ರೀಯ ಚುನಾವಣೆಯ ಸಮಯದಲ್ಲಿ ಮತದಾರರನ್ನು ಧಾರ್ಮಿಕ ನೆಲೆಯಲ್ಲಿ ಧ್ರುವೀಕರಿಸುವ ಭೀಕರ ಪ್ರಯತ್ನ ನಡೆಯುತ್ತಿದೆ. ಈ ವೇಳೆ ಭಾರತ್ ಜೋಡೋ ಅಭಿಯಾನ್ (BJA) ಪ್ರತಿನಿಧಿಸುವ ನಾಗರಿಕ ಸಮಾಜವು ಭಾರತೀಯ ನಾಗರಿಕರು ಮತ್ತು ಸಮಾಜಕ್ಕೆ ರಾಷ್ಟ್ರದ ಸಾಮರ್ಥ್ಯ ಮತ್ತು ಸ್ವತ್ತುಗಳ ಬಗ್ಗೆ ನೆನಪಿಸಲು ಬಯಸುತ್ತದೆ.  ದೇಶದ ಪರಂಪರೆ, ವೈವಿಧ್ಯಮಯ ಜನರು ಮತ್ತು ಅವರ ವೈವಿಧ್ಯಮಯ ಸಂಸ್ಕೃತಿಗಳನ್ನು ನೆನಪಿಸುತ್ತೇವೆ. ನಮ್ಮ ಪ್ರಗತಿಪರ, ಅಂತರ್ಗತ ನಾಗರಿಕತೆಯ ಬಗ್ಗೆ ಹೆಮ್ಮೆಪಡುವ ಮತ್ತು ನಮ್ಮ ಸಾಂವಿಧಾನಿಕ ಮೌಲ್ಯಗಳಾದ ಭ್ರಾತೃತ್ವ, ಸ್ವಾತಂತ್ರ್ಯ, ಸಮಾನತೆ ಮತ್ತು ನ್ಯಾಯಕ್ಕೆ ಬದ್ಧರಾಗಿರುವ ಎಲ್ಲಾ ಸಮಾನ ಮನಸ್ಕ ನಾಗರಿಕರನ್ನು ನಮಗೆ 7877722353 ಗೆ ಮಿಸ್ಡ್ ಕಾಲ್ ನೀಡಲು ನಾವು ಆಹ್ವಾನಿಸುತ್ತೇವೆ ಎಂದು ಬಿಜೆಎ ತಿಳಿಸಿದೆ.

ಭಾರತ್ ಜೋಡೋ ಅಭಿಯಾನದ ಸಂಚಾಲಕರಾದ ಯೋಗೇಂದ್ರ ಯಾದವ್ ಮತ್ತು ವಿಜಯ್ ಮಹಾಜನ್, ರಾಷ್ಟ್ರೀಯ ಕಾರ್ಯದರ್ಶಿ ಕವಿತಾ ಕುರುಗಂಟಿ ಅವರು ‘ಜನ ಗಣಮನ ಅಭಿಯಾನ’ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಅಭಿಯಾನದ ಪ್ರಮುಖ ದಿನಾಂಕಗಳು

-3ನೇ ಜನವರಿ, ಸಾವಿತ್ರಿಬಾಯಿ ಫುಲೆ ಜಯಂತಿ

– 3ನೇ ಜನವರಿ ಜೈಪಾಲ್ ಸಿಂಗ್ ಮುಂಡಾ ಅವರ ಜಯಂತಿ

-5ನೇ ಜನವರಿ, ಅಖಿಲ ಭಾರತ ಮಹಿಳಾ ಸಮ್ಮೇಳನದ ಸ್ಥಾಪನೆಯ ವಾರ್ಷಿಕೋತ್ಸವ

-6ನೇ ಜನವರಿ, ಅವಧ್ ರೈತರ ಚಳವಳಿ, ರಾಯ್‌ಬರೇಲಿಯಲ್ಲಿ ರೈತರ ಮೇಲೆ ಗುಂಡಿನ ದಾಳಿಯ ವಾರ್ಷಿಕೋತ್ಸವ

-ಜನವರಿ 9, ಮೊದಲ ಮಹಿಳಾ ಮುಸ್ಲಿಂ ಶಿಕ್ಷಕಿ ಫಾತಿಮಾ ಶೇಖ್ ಅವರ ಜಯಂತಿ,

-ಜನವರಿ 9, ಪ್ರವಾಸಿಭಾರತೀಯದಿವಸ್

-11ನೇ ಜನವರಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯತಿಥಿ

– 12 ಜನವರಿ, ಸ್ವಾಮಿ ವಿವೇಕಾನಂದರ ಜಯಂತಿ, ರಾಷ್ಟ್ರೀಯ ಯುವ ದಿನ

-14 ಜನವರಿ, ಸಂಕ್ರಾಂತಿ

-17ನೇ ಜನವರಿ, ಗುರು ಗೋಬಿಂದ್ ಸಿಂಗ್ ಅವರ ಜಯಂತಿ – ಪ್ರಕಾಶ್ ಪರ್ವ್

-ಜನವರಿ 17, ರೋಹಿತ್ ವೇಮುಲ ಸಂಸ್ಮರಣಾ ದಿನ

– ಜನವರಿ 18, ಅಬ್ದುಲ್ ಖೈಯುಮ್ ಅನ್ಸಾರಿ ಅವರ ಪುಣ್ಯತಿಥಿ,

-ಜನವರಿ 20, ಭಾರತರತ್ನ ಖಾನ್ ಅಬ್ದುಲ್ ಗಫಾರ್ ಖಾನ್ ಅವರ ಪುಣ್ಯತಿಥಿ

ಇದನ್ನು ಓದಿ: ರೈತರಿಗೆ ‘ಜಾತಿ’ ಉಲ್ಲೇಖಿಸಿ ಸಮನ್ಸ್‌ ಪ್ರಕರಣ: ‘ED’ ಅಧಿಕಾರಿಗಳ ವಿರುದ್ದ ಎಸ್ಸಿ-ಎಸ್ಟಿ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...