ಟ್ಯೂಷನ್‌ನಿಂದ ಹಿಂದಿರುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯ ಮೀರತ್‌ನಲ್ಲಿ ವರದಿಯಾಗಿದೆ. ಅತ್ಯಾಚಾರಕ್ಕೊಳಗಾದ ಬಾಲಕಿ ಡೆತ್ ನೋಟ್‍ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಸರ್ಧಾನ ಕೊಟ್ಟಾಳಿ ಪ್ರದೇಶದ ಹಳ್ಳಿಯಲ್ಲಿ ವಾಸಿಸುತ್ತಿರುವ ಬಾಲಕಿ ತನ್ನ ಮೇಲೆ ಅತ್ಯಾಚಾರವಾದ ಬಳಿಕ ಗುರುವಾರ ಸಂಜೆ ಮನೆಗೆ ಮರಳಿದ್ದಳು. ಮನೆಗೆ ವಾಪಸಾದ ಬಳಿಕ ಬಾಲಕಿಯು ಘಟನೆಯ ಬಗ್ಗೆ ಹೆತ್ತವರಿಗೆ ವಿವರಿಸಿದ್ದಳು. ಸ್ವಲ್ಪ ಹೊತ್ತಿನ ಬಳಿಕ ಕೆಲವು ವಿಷಕಾರಿ ಪದಾರ್ಥಗಳನ್ನು ಸೇವಿಸಿದ್ದಳು. ನಂತರ ಬಾಲಕಿಯನ್ನು ಮೋದಿಪುರಂನ ಎಸ್ ಎಸ್ ಡಿ ಗ್ಲೋಬಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ನಾಲ್ವರನ್ನು ಗುರುತಿಸಲಾಗಿದೆ ಎಂದು ಮೀರತ್ ನ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಕೇಶವಕುಮಾರ್ ತಿಳಿಸಿದ್ದಾರೆ.

ಆತ್ಮಹತ್ಯೆ ಪತ್ರದಲ್ಲಿ ಬಾಲಕಿಯು ಪಕ್ಕದ ಹಳ್ಳಿಯ ಲಖನ್ ಹಾಗೂ ವಿಕಾಸ್ ಸೇರಿದಂತೆ ನಾಲ್ವರನ್ನು ಆರೋಪಿಗಳೆಂದು ಹೆಸರಿಸಿದ್ದಳು. ಡೆತ್‍ನೋಟ್ ಆಧರಿಸಿ ಲಖನ್, ವಿಕಾಸ್ ಪ್ರಕಾಶ್ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.


ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಸಿಡಿ ಪ್ರಕರಣ: ಸಂತ್ರಸ್ತೆ ಪರ ವಕೀಲ ಜಗದೀಶ್ ವಿರುದ್ಧವೇ ದೂರು ನೀಡಿದ ಎಸ್‌ಐಟಿ!

1 COMMENT

LEAVE A REPLY

Please enter your comment!
Please enter your name here