Homeಮುಖಪುಟಬುಡಕಟ್ಟು ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ: ಆತ್ಮಹತ್ಯೆ; ಒಬ್ಬ ಬಾಲಕಿ ಸಾವು!

ಬುಡಕಟ್ಟು ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ: ಆತ್ಮಹತ್ಯೆ; ಒಬ್ಬ ಬಾಲಕಿ ಸಾವು!

ಅಕ್ಕ-ತಂಗಿಯರ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಅವರು ಮೂವರನ್ನು ಬಂಧಿಸಿದ್ದಾರೆ ಮತ್ತು ಉಳಿದ ಇಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳದ ಜಲ್ ಪೈಗುರಿ ಜಿಲ್ಲೆಯಲ್ಲಿ ಎರಡು ಅಪ್ರಾಪ್ತ ಬುಡಕಟ್ಟು ಅಕ್ಕ-ತಂಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದು, ಒಬ್ಬ ಹೆಣ್ಣುಮಗಳು ಮೃತಪಟ್ಟಿದ್ದಾಳೆ. ಮತ್ತೊಬ್ಬಳು ಆಸ್ಪತ್ರೆಯಲ್ಲಿ ಜೀವನ್ಮರಣಗಳ ನಡುವೆ ಹೋರಾಟ ನಡೆಸುತ್ತಿದ್ದಾಳೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

16 ಮತ್ತು 14 ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳು ಸೆಪ್ಟೆಂಬರ್ 4 ರಂದು ಕೆಲವು ಸ್ಥಳೀಯ ಯುವಕರೊಂದಿಗೆ ಹೊರಗೆ ಹೊರಟರು ಎಂದು ಅವರ ಕುಟುಂಬ ತಿಳಿಸಿದೆ.

“ಅವರು ಎಂದಿನಂತೆ ಹೊರಗೆ ಹೋಗಿದ್ದಾರೆಂದು ನಾವು ಭಾವಿಸಿದ್ದೆವು. ಆದರೆ, ಅವರು ಎರಡು ದಿನಗಳಿಂದ ಕಾಣೆಯಾಗಿದ್ದು, ಸೆಪ್ಟೆಂಬರ್ 6 ರಂದು ಮನೆಗೆ ಹಿಂತಿರುಗಿದರು” ಎಂದು ಅವರ ಸಹೋದರ ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಹೆಣ್ಣುಮಕ್ಕಳು ಅನಾರೋಗ್ಯದಿಂದ ಬಳಲುತ್ತಿದ್ದರಿಂದ, ಕುಟುಂಬವು ಅವರನ್ನು ಉತ್ತರ ಬಂಗಾಳ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸೇರಿಸಿದ್ದರು.

“ನನ್ನ ಸಹೋದರಿಯರು ಐದು ಜನರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರ ಬಗ್ಗೆ ಮತ್ತು ಅವರು ಹೇಗೆ ತಪ್ಪಿಸಿಕೊಂಡು ಮನೆಗೆ ತಲುಪಿದರು ಎಂಬುದರ ಬಗ್ಗೆ ಆಸ್ಪತ್ರೆಯಲ್ಲಿ ನಮಗೆ ತಿಳಿಸಿದರು. ಅವರು ಮನೆಗೆ ಹಿಂದಿರುಗಿದ ನಂತರ ಅವರು ವಿಷವನ್ನು ಸೇವಿಸಿದ್ದರಿಂದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. ಹಾಗಾಗಿ ಆಸ್ಪತ್ರೆಗೆ ಸೇರಿಸಲಾಯಿತು” ಎಂದು ಸಹೋದರ ಹೇಳಿದರು.

ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ..

ಒಂದು ಹುಡುಗಿ ಸೋಮವಾರ ರಾತ್ರಿ ಮೃತಪಟ್ಟರೆ, ಮತ್ತೊಂದು ಹುಡುಗಿಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ಕ-ತಂಗಿಯರ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಮತ್ತು ಉಳಿದ ಇಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಶವ ಗ್ರಾಮಕ್ಕೆ ತಲುಪುತ್ತಿದ್ದಂತೆ ಸ್ಥಳೀಯರು ಪೊಲೀಸರತ್ತ ಬೆರಳು ತೋರಿಸಿ ಪ್ರತಿಭಟನೆ ಆರಂಭಿಸಿದರು.

ಕಳೆದ ತಿಂಗಳು, ಅದೇ ಪ್ರದೇಶದಲ್ಲಿ ಮತ್ತೊಬ್ಬ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು, ಮತ್ತು ಆಕೆಯ ಶವವನ್ನು ಮನೆಯ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ಇನ್ನೂ ಬಂಧಿಸಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಲು ಜಿಲ್ಲಾ ಪೊಲೀಸ್ ಅಧಿಕಾರಿಗಳು ನಿರಾಕರಿಸಿದ್ದಾರೆ.

ಚಹಾ ತೋಟದಲ್ಲಿ ಕೆಲಸ ಮಾಡುವ ಬಾಲಕಿಯರ ತಂದೆಯನ್ನು ಸ್ಥಳೀಯ ತೃಣಮೂಲ ಕಾಂಗ್ರೆಸ್ ಶಾಸಕ ಖಾಗೇಶ್ವರ ರೇ ಭೇಟಿಯಾದರು. ಈ ಪ್ರಕರಣದ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಆಡಳಿತವನ್ನು ಕೇಳಿಕೊಂಡಿದ್ದೇವೆ ಎಂದು ಹೇಳಿದರು.

ಅತ್ಯಾಚಾರ ಮತ್ತು ಆತ್ಮಹತ್ಯೆ ಆರೋಪದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ಆಂಬುಲೆನ್ಸ್‌ನಲ್ಲಿ ಕೊರೊನಾ ರೋಗಿಯ ಮೇಲೆ ಅತ್ಯಾಚಾರ!: ಚಾಲಕನ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...