Homeಕರ್ನಾಟಕಗಾಂಧಿ ಜಯಂತಿಯಂದು ಕೃಷಿ ಮಸೂದೆ ವಿರೋಧಿಸಿ ’ಅನ್ನದಾತ’ರ ಉಪವಾಸ ಸತ್ಯಾಗ್ರಹ

ಗಾಂಧಿ ಜಯಂತಿಯಂದು ಕೃಷಿ ಮಸೂದೆ ವಿರೋಧಿಸಿ ’ಅನ್ನದಾತ’ರ ಉಪವಾಸ ಸತ್ಯಾಗ್ರಹ

ಅ.2 ರಂದು ಬೆಳಗ್ಗೆ 8 ಗಂಟೆಯಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಜನವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸುತ್ತಾ ಪತ್ರಿಭಟನಾ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತದೆ

- Advertisement -
- Advertisement -

ಅಕ್ಟೋಬರ್‌ 2 ರಂದು ಮಹಾತ್ಮ ಗಾಂಧಿ ಜನ್ಮದಿನ. ಅಂದು ರೈತ ಸಮುದಾಯ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಗಳ ವಿರುದ್ಧ ಪ್ರತಿಭಟಿಸಲು ತಯಾರಾಗಿವೆ. ರೈತ, ದಲಿತ, ಕಾರ್ಮಿಕರ ಐಕ್ಯ ಹೋರಾಟ ಸಮಿತಿ ಮತ್ತು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಗಳು ಗಾಂಧಿ ಮಾದರಿಯಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿವೆ.

ಗಾಂಧಿ ಜಯಂತಿ ಅಂಗವಾಗಿ ನಾಳೆ ಬೆಳಗ್ಗೆ 8 ಗಂಟೆಯಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಜನವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸುತ್ತಾ ಪತ್ರಿಭಟನಾ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತಿಳಿಸಿದೆ.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ಅಕ್ಟೋಬರ್‌ 2ರಂದು ಗಾಂಧಿ ಜಯಂತಿ ಅಂಗವಾಗಿ ಜನವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸುತ್ತಾ ಪತ್ರಿಭಟನಾ ಉಪವಾಸ…

Posted by ಭೂಮಿ-ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ on Thursday, October 1, 2020

ಕಳೆದ ವಾರವಷ್ಟೇ ಭಾರತ ಬಂದ್, ಕರ್ನಾಟಕ ಬಂದ್‌ಗಳನ್ನು ನಡೆಸಿ ಕೇಂದ್ರ ಅಂಗೀಕರಿಸಿರುವ ಸುಗ್ರೀವಾಜ್ಞೆಗಳಿಗೆ ದೊಡ್ಡಮಟ್ಟದ ಪ್ರತಿರೋಧ ತೋರಿದ್ದ ರೈತ ಸಮುದಾಯ ಈಗ ಮತ್ತೊಂದು ಪ್ರತಿಭಟನೆಗೆ ಸಿದ್ಧರಾಗಿದ್ದಾರೆ.

ಮೂರು ಕೃಷಿ ಮಸೂದೆಗಳನ್ನು ಕೇಂದ್ರ ಸರ್ಕಾರ ರಾಜ್ಯಸಭೆ ಮತ್ತು ಲೋಕಸಭಾ ಅಧಿವೇಶನದಲ್ಲಿ ಅಂಗೀಕರಿಸಿವೆ. ಆದರೂ ರೈತರ ಪ್ರತಿರೋಧ ಮಾತ್ರ ದಿನೇ ದಿನೇ ಹೆಚ್ಚಾಗುತ್ತಿದೆ.

ಗಾಂಧೀಜಿಯವರ ಜನ್ಮದಿನದಂದು ಅವರದ್ದೇ ಪ್ರತಿಭಟನಾ ಮಾರ್ಗವಾದ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ಜಗತ್ತಿಗೆ ಅನ್ನ ನೀಡುವ ಅನ್ನದಾತ ತಾನೇ ಉಪವಾಸಕ್ಕೆ ಕೂರುವ ಸ್ಥಿತಿ ನಿಜಕ್ಕೂ ಅಘಾತ ನೀಡುವಂತಹದ್ದು.


ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಸುಟ್ಟು ರೈತರ ದಿಟ್ಟ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಸಾರ್ವಜನಿಕರ ಮೇಲೆ ಸವಾರಿ ಮಾಡಲು ಬಿಡುವುದಿಲ್ಲ..’; ತಪ್ಪುದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಸುಪ್ರೀಂ ಕಿಡಿ

0
"ಸಾರ್ವಜನಿಕರ ಮೇಲೆ ಸವಾರಿ ಮಾಡಲು ನಾವು ಬಿಡುವುದಿಲ್ಲ" ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದ್ದು, ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಎದುರಿಸಲು ತಾವು ಸಕ್ರಿಯರಾಗಿರಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳಳಿಗೆ ಸೂಚನೆ ನೀಡಿದೆ. 1945ರ...