Homeಮುಖಪುಟಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

- Advertisement -
- Advertisement -

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ, ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್‌ ಇನ್ಸ್‌ಪೆಕ್ಟರ್‌ ಧನಂಜಯ್ ಅವರು ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಆಯೋಜಕರು ಹಾಗೂ ಹಿಂದುತ್ವವಾದಿ ಗುಂಪುಗಳ ಶಾಂತಿ ಸಭೆ ನಡೆಸಿ ಸೌಹಾರ್ದತೆಯ ಮಾರ್ಗದರ್ಶನ ನೀಡಿದ್ದರು. ಧಾರ್ಮಿಕ ಹಬ್ಬದ ಹೆಸರಿನಲ್ಲಿ ರಂಪಾಟ ನಡೆಸದಂತೆ ಅವರು ನೀಡಿದ್ದ ಖಡಕ್ ಎಚ್ಚರಿಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿತ್ತು.

ಟಿ. ನರಸೀಪುರ ಠಾಣೆ ವ್ಯಾಪ್ತಿಯಲ್ಲಿ ಮೂರ್ತಿ ವಿಸರ್ಜನಾ ಮೆರವಣಿಗೆಯನ್ನು ಪೊಲೀಸರು ನಿಗದಿಪಡಿಸಿದ ನಿರ್ದಿಷ್ಟ ಮಾರ್ಗದಲ್ಲೇ ನಡೆಸಬೇಕು, ಲಿಂಕ್ ರಸ್ತೆಯಲ್ಲಿ ಅವಕಾಶವಿಲ್ಲ, ಮಸೀದಿಗಳ ಮುಂಭಾಗದಲ್ಲಿ ಅನಗತ್ಯವಾಗಿ ಮೆರವಣಿಗೆ ತಡೆದು ನಿಲ್ಲಿಸುವುದು ಅಥವಾ ಪಟಾಕಿ ಸಿಡಿಸಿ ಪ್ರಚೋದನಕಾರಿ ಘೋಷಣೆ ಕೂಗುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಧನಂಜಯ್ ಕಟ್ಟುನಿಟ್ಟಾಗಿ ಹೇಳಿದ್ದರು. “ನಿಯಮ ಉಲ್ಲಂಘಿಸಿ ವಾತಾವರಣ ಕೆಡಿಸಿದರೆ ಗ್ರಹಚಾರ ಬಿಡಿಸುತ್ತೇನೆ” ಎಂದು ಅವರು ನೀಡಿರುವ ಸ್ಪಷ್ಟ ಮತ್ತು ಕರ್ತವ್ಯನಿಷ್ಠ ಎಚ್ಚರಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಯಾವುದೇ ಕೋಮು ಗಲಭೆಗೆ ಆಸ್ಪದ ನೀಡಬಾರದೆಂಬ ಉದ್ದೇಶದಿಂದ ಭದ್ರತಾ ಅಧಿಕಾರಿ ಕೈಗೊಂಡ ಈ ಕ್ರಮವು, ಧಾರ್ಮಿಕ ಸೂಕ್ಷ್ಮತೆಯನ್ನು ಬಳಸಿಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಯುತ್ತಿದ್ದ ಹಿಂದುತ್ವವಾದಿ ಗುಂಪುಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಅಧಿಕಾರಿಯ ಈ ಸೌಹಾರ್ದತೆಯ ನಡೆಯಿಂದ ಕಂಗಾಲಾದ ಬಿಜೆಪಿ ನಾಯಕರು, ತಕ್ಷಣವೇ ವಿಷಯವನ್ನು ‘ಹಿಂದು ವಿರೋಧಿ’ ಎಂದು ಬಿಂಬಿಸಿ ಆಡಳಿತ ಯಂತ್ರಕ್ಕೇ ಬೆದರಿಕೆಯೊಡ್ಡಲು ರಂಗಕ್ಕಿಳಿದಿದ್ದಾರೆ.

ವಿಪಕ್ಷ ನಾಯಕ ಆರ್. ಅಶೋಕ್, ಮೈಸೂರು ಸಂಸದ ಯದುವೀರ್ ಒಡೆಯರ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ತಮ್ಮ ಬೆಂಬಲಿಗರೊಂದಿಗೆ ಟಿ. ನರಸೀಪುರ ಪೊಲೀಸ್ ಠಾಣೆಗೆ ಧಾವಿಸಿ ದಾಂಧಲೆ ನಡೆಸಿದ್ದು, ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಇನ್ಸ್‌ಪೆಕ್ಟರ್ ಧನಂಜಯ್ ಹೀಗೆ ಮಾತನಾಡಿದ್ದಾರೆಂದರೆ ಇದರ ಹಿಂದೆ ಸರ್ಕಾರದ ಷಡ್ಯಂತ್ರವಿದೆ. ಮೆರವಣಿಗೆ ಮಾಡುವವರು ರೌಡಿಗಳಾ” ಎಂದು ಅಶೋಕ್ ಬೆದರಿಕೆ ಒಡ್ಡಿದ್ದರೆ, ಇತ್ತ ಸಂಸದ ಯದುವೀರ್ ಒಡೆಯರ್ ಅವರು “ಜಾತ್ಯತೀತತೆಯ ನೆಪದಲ್ಲಿ ಧಾರ್ಮಿಕ ಆಚರಣೆಗಳಿಗೆ ಅಡೆತಡೆ ಉಂಟುಮಾಡಲಾಗುತ್ತಿದೆ” ಎಂದು ವಾದಿಸಿ ಭದ್ರತಾ ನಿಯಮಗಳನ್ನು ತೆಗಳಿದ್ದಾರೆ.

ಗಲಭೆ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಕೈಗೊಳ್ಳುವ ಕಾನೂನುಬದ್ಧ ಭದ್ರತಾ ನಿಯಮಗಳನ್ನೇ ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವ ಹಾಗೂ ಕರ್ತವ್ಯ ನಿರತ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಗ್ಗಿಸುತ್ತಿರುವ ಬಿಜೆಪಿ ನಾಯಕರ ಈ ಪ್ರಚೋದನಕಾರಿ ನಡೆಗೆ ಪ್ರಜಾಸತ್ತಾತ್ಮಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...