Homeಮುಖಪುಟಗ್ಯಾಂಗ್ ರೇಪ್ ಕೇಸ್ ದಾಖಲಿಸಿದ್ದ ಬಾಲಕಿಯ ತಂದೆ ಮೇಲೆ ಟ್ರಕ್ ಹರಿಸಿದ ದುಷ್ಕರ್ಮಿಗಳು

ಗ್ಯಾಂಗ್ ರೇಪ್ ಕೇಸ್ ದಾಖಲಿಸಿದ್ದ ಬಾಲಕಿಯ ತಂದೆ ಮೇಲೆ ಟ್ರಕ್ ಹರಿಸಿದ ದುಷ್ಕರ್ಮಿಗಳು

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲಾಗಿರುವ ಮುಖ್ಯ ಆರೋಪಿ ಗೋಲು ಯಾದವ್ ತಂದೆ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

- Advertisement -
- Advertisement -

ಮಗಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ವಿರುದ್ಧ ಪ್ರಕರಣ ದಾಖಲಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದ ತಂದೆ ಮೇಲೆ, ದುಷ್ಕರ್ಮಿಗಳು ಆಸ್ಪತ್ರೆ ಹೊರ ಭಾಗದಲ್ಲಿ ಟ್ರಕ್ ಹರಿಸಿ ಕೊಲೆ ಮಾಡಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಕಾನ್ಪುರದ ತನ್ನ ಗ್ರಾಮದಲ್ಲಿ 13 ವರ್ಷದ ಬಾಲಕಿ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಬಾಲಕಿಯನ್ನು ವೈದ್ಯಕೀಯ ತಪಾಸಣೆಗಾಗಿ ತಂದೆ ಆಸ್ಪತ್ರೆಗೆ ಕರೆತಂದಿದ್ದರು. ಈ ಸಮಯದಲ್ಲಿ ಆಸ್ಪತ್ರೆಯ ಹೊರಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲಾಗಿರುವ ಮುಖ್ಯ ಆರೋಪಿ ಗೋಲು ಯಾದವ್ ತಂದೆ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾನ್ಪುರದಿಂದ 100 ಕಿ.ಮೀ ದೂರದಲ್ಲಿರುವ ಕನ್ನೌಜ್ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ 

ಮುಖ್ಯ ಆರೋಪಿ ಗೋಲು ಯಾದವ್‌ನನ್ನು ಬಂಧಿಸಲಾಗಿದ್ದರೂ, ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾದಾಗಿನಿಂದಲೂ ಆರೋಪಿಗಳ ಕುಟುಂಬ ನಮಗೆ ಬೆದರಿಕೆ ಹಾಕುತ್ತಿದೆ. “ಪೊಲೀಸರು ಇದಕ್ಕೆ ಸಹಕರಿಸುತ್ತಿದ್ದಾರೆ” ಎಂದು ಸಂತ್ರಸ್ತ ಬಾಲಕಿಯ ಕುಟುಂಬವು ಪೊಲೀಸರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದೆ.

“ನನ್ನ ಮಗನನ್ನು ಕೊಲೆ ಮಾಡಲಾಗಿದೆ, ಪೊಲೀಸರು ಇದಕ್ಕೆ ಸಹಕರಿಸಿದ್ದಾರೆ” ಎಂದು ಸಾವನ್ನಪ್ಪಿದ ವ್ಯಕ್ತಿಯ ತಂದೆ ಬುಧವಾರ ಬೆಳಿಗ್ಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ.

ಮಂಗಳವಾರ ಬಾಲಕಿಯ ಕುಟುಂಬದ ಮತ್ತೊಬ್ಬ ಸದಸ್ಯರೂ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ನಾವು ದೂರು ಸಲ್ಲಿಸಿದ ಕೂಡಲೇ, ಮುಖ್ಯ ಆರೋಪಿಗಳ ಹಿರಿಯ ಸಹೋದರ ನಮಗೆ ಬೆದರಿಕೆ ಹಾಕಲು ಪ್ರಾರಂಭಿಸಿದರು. ‘ನನ್ನ ತಂದೆ ಸಬ್ ಇನ್ಸ್‌ಪೆಕ್ಟರ್ ಎಚ್ಚರವಹಿಸಿ’ ಎಂದು ಅವರು ನಮಗೆ ಎಚ್ಚರಿಕೆ ನೀಡಿದ್ದರು” ಎಂದು ಹೇಳಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶ- ಶಾಲೆಗೆ ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ನಾಪತ್ತೆ

“ವೈದ್ಯಕೀಯ ಪರೀಕ್ಷೆ ನಡೆಯುತ್ತಿರುವಾಗ, ಮೃತ ವ್ಯಕ್ತಿ ಒಂದು ಕಪ್ ಚಹಾಕ್ಕಾಗಿ ಹೊರಗೆ ಹೋಗಿದ್ದರು. ಆ ಸಮಯದಲ್ಲಿ, ಟ್ರಕ್ ಅಪಘಾತಕ್ಕೆ ಒಳಗಾಗಿದ್ದಾರೆ. ತಕ್ಷಣ ಅವರನ್ನು ಕಾನ್ಪುರ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅವರು ಮೃತಪಟ್ಟಿದ್ದರು. ನಾವು ಅಪಘಾತ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ “ಎಂದು ಕಾನ್ಪುರ ಪೊಲೀಸ್ ಮುಖ್ಯಸ್ಥ ಡಾ.ಪ್ರೀತಿಂದರ್ ಸಿಂಗ್ ತಿಳಿಸಿದ್ದಾರೆ.

ಸಂತ್ರಸ್ತ ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಕಾನ್ಪುರ ಪೊಲೀಸರು ಮಂಗಳವಾರ ಸಾಮೂಹಿಕ ಅತ್ಯಾಚಾರ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿದ್ದರು.

“ತಂದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ನಾವು ಕೂಡಲೇ ಅದರ ಮೇಲೆ ಕ್ರಮ ಕೈಗೊಂಡಿದ್ದೇವೆ. ಸಂತ್ರಸ್ತ ಬಾಲಕಿ ಆರೋಗ್ಯ ಸ್ಥಿರವಾಗಿದೆ. ಪ್ರಕರಣದ ತನಿಖೆಗಾಗಿ ನಾವು ಐದು ತಂಡಗಳನ್ನು ರಚಿಸಿದ್ದೇವೆ” ಎಂದು ಕಾನ್ಪುರದ ಹಿರಿಯ ಪೊಲೀಸ್ ಅಧಿಕಾರಿ ಬ್ರಿಜೇಶ್ ಶ್ರೀವಾಸ್ತವ ಮಂಗಳವಾರ ಹೇಳಿದ್ದರು.

ಘಟನೆ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆ, ಎರಡು ಪ್ರಕರಣಗಳ ತ್ವರಿತ ತನಿಖೆಗೆ ಯುಪಿ ಪೊಲೀಸರು ಕಾನ್ಪುರ ಪೊಲೀಸರಿಗೆ ಆದೇಶಿಸಿದೆ. ಜೊತೆಗೆ ಅಪಘಾತ ಮಾಡಿದ ಟ್ರಕ್ ವಶಪಡಿಸಿಕೊಂಡು, ಚಾಲಕನನ್ನು ಬೇಗ ಬಂಧಿಸುವಂತೆ ಹೇಳಿದೆ.


ಇದನ್ನೂ ಓದಿ: ಉತ್ತರ ಪ್ರದೇಶ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ಮರಣದಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...