Homeದಲಿತ್ ಫೈಲ್ಸ್ಫಿರೋಜಾಬಾದ್‌ನಲ್ಲಿ ಸಾಮೂಹಿಕ ಅತ್ಯಾಚಾರ; ಬಹು ಅಂಗಾಂಗ ಹಾನಿಯಿಂದ 16 ವರ್ಷದ ದಲಿತ ಬಾಲಕಿ ಸಾವು

ಫಿರೋಜಾಬಾದ್‌ನಲ್ಲಿ ಸಾಮೂಹಿಕ ಅತ್ಯಾಚಾರ; ಬಹು ಅಂಗಾಂಗ ಹಾನಿಯಿಂದ 16 ವರ್ಷದ ದಲಿತ ಬಾಲಕಿ ಸಾವು

- Advertisement -
- Advertisement -

ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನವೆಂಬರ್ 1 ರಂದು ಬರ್ಬರ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 16 ವರ್ಷದ ದಲಿತ ಬಾಲಕಿ, ಆಗ್ರಾದ ಆಸ್ಪತ್ರೆಯೊಂದರಲ್ಲಿ ಸುಮಾರು ಒಂದು ವಾರಗಳ ಕಾಲ ಸಾವಿನೊಂದಿಗೆ ಹೋರಾಡಿದ ನಂತರ ಶುಕ್ರವಾರ ಕೊನೆಯುಸಿರೆಳೆದಿದ್ದಾಳೆ.

ಆಕೆಯನ್ನು ಹೊಲವೊಂದರಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆ ಮಾಡಲಾಗಿತ್ತು. ಮರಣೋತ್ತರ ಪರೀಕ್ಷಾ ವರದಿಯು “ಲೈಂಗಿಕ ದೌರ್ಜನ್ಯ” ನಡೆದಿರುವುದನ್ನು ಹಾಗೂ “ಕುತ್ತಿಗೆ ಮುರಿತ, ದವಡೆ ಜಜ್ಜಲ್ಪಟ್ಟಿರುವುದು ಮತ್ತು ಬಹು ಅಂಗಾಂಗಗಳಿಗೆ ಗಂಭೀರ ಗಾಯಗಳಾಗಿರುವುದನ್ನು” ದೃಢಪಡಿಸಿದೆ.

ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಆಕೆಯ ಸಂಬಂಧಿಯೊಬ್ಬರು, “ಅವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಹಿಂಸಿಸಿ, ಸಾಯಲು ಬಿಟ್ಟು ಹೋಗಲಾಗಿತ್ತು. ವೆಂಟಿಲೇಟರ್ ಬೆಂಬಲದಲ್ಲಿ ಆಕೆಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಸಾವಿಗೂ ಮುನ್ನ ಆಕೆಗೆ ತನ್ನ ಹೇಳಿಕೆಯನ್ನು ದಾಖಲಿಸಲು ಸಾಧ್ಯವಾಗಲಿಲ್ಲ” ಎಂದು ತಿಳಿಸಿದರು.

ಫಿರೋಜಾಬಾದ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಆದಿತ್ಯ ಲಂಗೇಶ್ ಮಾತನಾಡಿ, “ಆರೋಪಿಗಳಿಬ್ಬರೂ ಸೇರಿದಂತೆ ಒಟ್ಟು ಮೂವರನ್ನೂ ಬಂಧಿಸಲಾಗಿದೆ. ‘ಆಪರೇಷನ್ ಕನ್ವಿಕ್ಷನ್’ ಅಡಿಯಲ್ಲಿ ಈ ಪ್ರಕರಣವನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ‘ಗ್ಯಾಂಗ್‌ಸ್ಟರ್ಸ್ ಆಕ್ಟ್’ ಅಡಿಯಲ್ಲೂ ಕ್ರಮ ಕೈಗೊಳ್ಳಲಾಗುವುದು; ಇದರಲ್ಲಿ ಅವರ ಆಸ್ತಿಪಾಸ್ತಿಗಳ ತನಿಖೆ ಹಾಗೂ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಅಥವಾ ಜಪ್ತಿ ಮಾಡುವ ಪ್ರಕ್ರಿಯೆಗಳೂ ಸೇರಿವೆ” ಎಂದು ಹೇಳಿದರು.

ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ, ಪೊಲೀಸರು 20, 21 ಮತ್ತು 28 ವರ್ಷ ವಯಸ್ಸಿನ ಮೂವರು ಆರೋಪಿಗಳನ್ನು ಗುರುತಿಸಿದ್ದಾರೆ. ಇವರೆಲ್ಲರೂ ಅದೇ ಜಿಲ್ಲೆಯ ಒಂದೇ ಬಡಾವಣೆಗೆ ಸೇರಿದವರಾಗಿದ್ದಾರೆ.

ಆರಂಭದಲ್ಲಿ, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್‌ಗಳಾದ 109(1) (ಕೊಲೆ ಯತ್ನ), 70(2) (18 ವರ್ಷದೊಳಗಿನ ಬಾಲಕಿ ಅಥವಾ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ) ಮತ್ತು 137 (ಅಪಹರಣ) ಅಡಿಯಲ್ಲಿ, ಹಾಗೂ ಪೋಕ್ಸೊ ಕಾಯಿದೆ ಮತ್ತು ಎಸ್‌ಸಿ/ಎಸ್‌ಟಿ ಕಾಯಿದೆಯಡಿ ಎಫ್‌ಐಆರ್ ದಾಖಲಿಸಲಾಗಿತ್ತು. ಬಾಲಕಿಯ ಮರಣದ ನಂತರ, ಬಿಎನ್‌ಎಸ್‌ ಸೆಕ್ಷನ್ 109(1) ಅನ್ನು 103(1) (ಕೊಲೆ) ಎಂದು ಬದಲಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, “ವಿಚಾರಣೆಯ ವೇಳೆ ಆರೋಪಿಗಳು ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿಗಳ ಪೈಕಿ ಒಬ್ಬನಿಗೆ ಆಕೆ ಕಳೆದ ಕೆಲವು ತಿಂಗಳುಗಳಿಂದ ಪರಿಚಯವಿದ್ದಿರಬಹುದು ಎಂದು ಶಂಕಿಸಲಾಗಿದೆ. ಆತ ಆಕೆಯನ್ನು ನಂಬಿಸಿ ಹತ್ತಿರದ ಹೊಲವೊಂದಕ್ಕೆ ಕರೆದೊಯ್ದಿದ್ದನು.

“ಆಕೆ ಪ್ರತಿರೋಧ ವ್ಯಕ್ತಪಡಿಸಿದಾಗ, ಅವರು ಆಕೆಯ ಕುತ್ತಿಗೆಯನ್ನು ಹಿಸುಕಿ, ಅಂಗಾಂಗಗಳನ್ನು ಮತ್ತು ದವಡೆಯನ್ನು ಜಜ್ಜಿದರು. ಆಕೆ ಸತ್ತಿದ್ದಾಳೆ ಎಂದು ಭಾವಿಸಿ ಅವರು ಅಲ್ಲಿಂದ ಪರಾರಿಯಾದರು. ನವೆಂಬರ್ 1 ರ ರಾತ್ರಿ ನಡೆದ ಸಂಕ್ಷಿಪ್ತ ಮುಖಾಮುಖಿಯ ನಂತರ ಇಬ್ಬರು ಆರೋಪಿಗಳನ್ನು ಬಂಧಿಸಲಾಯಿತು; ಮೂರನೇ ಆರೋಪಿಯನ್ನು ಮರುದಿನ ಬಂಧಿಸಲಾಯಿತು” ಎಂದು ಪ್ರಕರಣದ ತನಿಖೆಯ ಬಗ್ಗೆ ಮಾಹಿತಿ ಇರುವ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪರಿಹಾರ ಸೇರಿದಂತೆ ನೆರವು ನೀಡುವುದಾಗಿ ಹಿರಿಯ ಅಧಿಕಾರಿಗಳು ಆಕೆಯ ಕುಟುಂಬಕ್ಕೆ ಭರವಸೆ ನೀಡಿದರು; ಇದರ ಬೆನ್ನಲ್ಲೇ, ಆಕೆಯ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಒಪ್ಪಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ SIR ಟ್ರಿಬ್ಯೂನಲ್‌ನಿಂದ 4ನೇ ನ್ಯಾಯಾಧೀಶರ ನಿರ್ಗಮನ: ನಿವೃತ್ತ ನ್ಯಾಯಮೂರ್ತಿ ಬಿಸ್ವಜಿತ್ ಬಸು ರಾಜೀನಾಮೆ!

ಕೋಲ್ಕತಾ: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಮೇಲ್ಮನವಿ ಟ್ರಿಬ್ಯೂನಲ್‌ನಿಂದ ನಿವೃತ್ತ ನ್ಯಾಯಮೂರ್ತಿ ಬಿಸ್ವಜಿತ್ ಬಸು ಅವರು ಶನಿವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ವರದಿಗಳ ಪ್ರಕಾರ, ಕಲ್ಕತ್ತಾ...

‘6 ತಿಂಗಳಲ್ಲಿ ನನ್ನ ಪ್ರಾಣ ತೆಗೆಯಲು ಇದು 7ನೇ ಯತ್ನ!’: ಕೋರ್ಟ್-ಪೋಲಿಸ್ ಇಲಾಖೆ ಹಾಗೂ ಬಿಜೆಪಿ ವಿರುದ್ಧ ಸಿಡಿದೆದ್ದ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ!

ಕೋಲ್ಕತಾ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಕೋಲ್ಕತಾದ ಕಾಳಿಘಾಟ್ ನಿವಾಸದ ಹೊರಭಾಗದಲ್ಲಿ ಶುಕ್ರವಾರ ನಡುರಾತ್ರಿ ಭಾರಿ ಹೈಡ್ರಾಮಾವೊಂದು ಸಂಭವಿಸಿದೆ. 2...

́ನಿಮ್ಮ ದೀಪಾವಳಿ ವೀಕೆಂಡ್ ಹಾಳುಮಾಡಲ್ಲ, ಸೋಮವಾರ ಉತ್ತರ ಕೊಡ್ತೀವಿ!’: ಎಥನಾಲ್ ಮಿಶ್ರಣ ಸ್ಪಷ್ಟೀಕರಣ ನೀಡಿದ ತೈಲ ಸಂಸ್ಥೆಗಳಿಗೆ ಸಚಿವ ರಿಜ್ವಾನ್ ಅರ್ಷಾದ್ ಟಾಂಗ್!

ಕರ್ನಾಟಕದಲ್ಲಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಮಾರಾಟ ಮಾಡುತ್ತಿರುವ ಪೆಟ್ರೋಲ್‌ನಲ್ಲಿ ನಿಗದಿಪಡಿಸಿದ ಶೇಕಡ 20 ಕ್ಕಿಂತ ಹೆಚ್ಚು ಪ್ರಮಾಣದ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಆರೋಪಿಸಿದ್ದು, ಪ್ರಯೋಗಾಲಯದ ಪರೀಕ್ಷೆಗಳಲ್ಲಿ ಇದರ...

ಯೂಟರ್ನ್ ಹೊಡೆದ ಚುನಾವಣಾ ಆಯೋಗ : SIR ವಿರುದ್ಧದ ಹೋರಾಟದಲ್ಲಿ ಜನ ಸಂಘಟನೆಗಳಿಗೆ ಮತ್ತೊಂದು ಮಹತ್ವದ ಗೆಲುವು

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಹೋರಾಟದಲ್ಲಿ ಜನ ಸಂಘಟನೆಗಳಿಗೆ ಮತ್ತೊಂದು ಮಹತ್ವದ ಗೆಲುವಾಗಿದೆ. ಎಸ್‌ಐಆರ್ ವೇಳೆ ಡಿಲೀಟ್ ಪಟ್ಟಿಗೆ (ಎಎಸ್‌ಡಿಡಿ) ಬಿದ್ದ ಅರ್ಹ ಮತದಾರರು ತಮ್ಮ ಹಕ್ಕು ಮರಳಿ...

‘ಪ್ರಧಾನಿ ಮೋದಿಯನ್ನು ಗೊಂದಲಕ್ಕೀಡುಮಾಡಬೇಡಿ, ನನ್ನೊಂದಿಗೆ ಬಹಿರಂಗ ಚರ್ಚೆಗೆ ಒಪ್ಪಿಸಿ!’: ಅಮಿತ್ ಷಾಗೆ ರಾಹುಲ್ ಗಾಂಧಿ ಆಗ್ರಹ!

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೊಂದಲಕ್ಕೀಡುಮಾಡುವ ಬದಲು, ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಇವಿಎಂ ಕುರಿತು ತಮ್ಮೊಂದಿಗೆ ಬಹಿರಂಗ ಚರ್ಚೆಗೆ...

‘ಅಮೆರಿಕ ಅಧ್ಯಕ್ಷರ ಹತ್ಯೆ ಮಾಡುವಂತೆ ಧ್ವನಿ ಕೇಳಿಸುತ್ತಿತ್ತು’: ವೈಟ್ ಹೌಸ್ ಬಳಿ ಮಾರಕಾಸ್ತ್ರಗಳಿದ್ದ ಕಾರಿನೊಂದಿಗೆ ವೆನಿಜುವೆಲ್ಲಾ ಪ್ರಜೆ ಬಂಧನ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪದ ಮೇಲೆ 26 ವರ್ಷದ ರೋನಿ ಯೋರ್ಡ್ರಿಕ್ಸ್ ಗುವಾನಿಪಾ ಚ್ರಿನೋಸ್ ಎಂಬ ವೆನಿಜುಎಲ್ಲಾ ಮೂಲದ ವಲಸಿಗನನ್ನು ಯುಎಸ್ ಸೀಕ್ರೆಟ್ ಸರ್ವಿಸ್...

‘E20 turned into 420’ : ಕರ್ನಾಟಕ ಸರ್ಕಾರದ ಪರಿಶೀಲನೆಯಲ್ಲಿ ಬಯಲಾದ ‘ಪೆಟ್ರೋಲ್ ಚೋರಿ’; ಕೇಂದ್ರದ ವಿರುದ್ಧ ಜನಾಕ್ರೋಶ

E20 ಹೆಸರಿನಲ್ಲಿ ಮಾರಾಟವಾಗುತ್ತಿರುವ ಪೆಟ್ರೋಲ್‌ನಲ್ಲಿ ಶೇಕಡ 30ಕ್ಕಿಂತ (31.2) ಅಧಿಕ ಎಥೆನಾಲ್ ಇರುವುದು ಕರ್ನಾಟಕ ಸರ್ಕಾರದ ನಡೆಸಿದ ಪರಿಶೀಲನೆಯಲ್ಲಿ ಬಟಾಬಯಲಾಗಿದ್ದು, ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಮತ್ತು ಕೇಂದ್ರ ಸರ್ಕಾರದ ವಿರುದ್ಧ ದೇಶದಾದ್ಯಂತ...

ಜೆಡಿಎಸ್ ಸಮರ್ಥನೆ ಬಿಜೆಪಿಯ ರಾಜಕೀಯ ದಿವಾಳಿತನ ತೋರಿಸುತ್ತದೆ : ಆರ್. ಅಶೋಕ್ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು!

ಕರ್ನಾಟಕ ರಾಜಕೀಯದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ನಡುವೆ ಸೋಶಿಯಲ್ ಮೀಡಿಯಾದಲ್ಲಿ ವಾಕ್ಸಮರ ತೀವ್ರಗೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ಆರ್. ಅಶೋಕ್ ಮಾಡಿದ ಕಟು...

ಪೆಟ್ರೋಲ್‌ನಲ್ಲಿ ಶೇ.31.2ರಷ್ಟು ಎಥೆನಾಲ್ ಪತ್ತೆ : ಕೇಂದ್ರದಿಂದ ಸ್ಪಷ್ಟನೆ ಕೋರಿದ ಕರ್ನಾಟಕ ಸರ್ಕಾರ

ಕರ್ನಾಟಕದಲ್ಲಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಮಾರಾಟ ಮಾಡುತ್ತಿರುವ ಪೆಟ್ರೋಲ್‌ನಲ್ಲಿ ನಿಗದಿಪಡಿಸಿದ ಶೇಕಡ 20ಕ್ಕಿಂತ ಹೆಚ್ಚು ಪ್ರಮಾಣದ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಆರೋಪಿಸಿದ್ದು, ಪ್ರಯೋಗಾಲಯದ ಪರೀಕ್ಷೆಗಳಲ್ಲಿ ಇದರ ಮಟ್ಟವು...

ಸಿಜೆಐ ಸೂರ್ಯ ಕಾಂತ್ ವಿರುದ್ಧದ ಪೋಸ್ಟ್ ಪ್ರಕರಣ: ಕೇರಳ ಕಾಂಗ್ರೆಸ್ ನಾಯಕರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದ ಆಕ್ಷೇಪಾರ್ಹ ಪೋಸ್ಟ್‌ಗೆ ಸಂಬಂಧಿಸಿದಂತೆ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್...