Homeಮುಖಪುಟಬಿಜೆಪಿ ಮಂಡಲ ಅಧ್ಯಕ್ಷ ಸೇರಿದಂತೆ 4 ಜನರಿಂದ 20 ವರ್ಷದ ಯುವತಿಯ ಸಾಮೂಹಿಕ ಅತ್ಯಾಚಾರ

ಬಿಜೆಪಿ ಮಂಡಲ ಅಧ್ಯಕ್ಷ ಸೇರಿದಂತೆ 4 ಜನರಿಂದ 20 ವರ್ಷದ ಯುವತಿಯ ಸಾಮೂಹಿಕ ಅತ್ಯಾಚಾರ

ಬಲವಂತವಾಗಿ ಮದ್ಯಪಾನ ಮಾಡಿಸಿ ಎರಡು ದಿನ ಸಾಮೂಹಿಕ ಅತ್ಯಾಚಾರ ಎಸಗಿದ ನಾಲ್ವರು ದುಷ್ಕರ್ಮಿಗಳು

- Advertisement -
- Advertisement -

ಮಧ್ಯಪ್ರದೇಶದ ಶಹಾದೋಲ್ ಜಿಲ್ಲೆಯ ಬಿಜೆಪಿಯ ನಾಯಕ ಸೇರಿದಂತೆ ನಾಲ್ವರು ದುಷ್ಕರ್ಮಿಗಳು 20 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಜೈತ್‌‌‌ಪುರ್‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂತ್ರಸ್ತೆ ಯುವತಿಯನ್ನು ಆರೋಪಿಗಳು ಅಪಹರಿಸಿದ್ದರು. ನಂತರ ಗಡಘಾಟ್ ಪ್ರದೇಶದ ತೋಟದ ಮನೆಯೊಂದರಲ್ಲಿ ಕೂಡಿಹಾಕಿ ಯುವತಿಗೆ ಬಲವಂತವಾಗಿ ಮದ್ಯಪಾನ ಮಾಡಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಘಟನೆಯು ಫೆಬ್ರವರಿ 18 ಮತ್ತು 19 ರಂದು ನಡೆದಿದೆ ಎಂದು ಶಹದೋಲ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಮುಖೇಶ್ ವೈಶ್ ಹೇಳಿದ್ದಾರೆ.

ಇದನ್ನೂ ಓದಿ: ಆತ್ಮನಿರ್ಭರಕ್ಕಾಗಿ ಖಾಸಗಿಯವರನ್ನು ಬೆಂಬಲಿಸಿ: ಮೋದಿ ಹೇಳಿಕೆಗೆ ಕೆಲವು ಪ್ರಶ್ನೆಗಳು

“ಈ ನಾಲ್ವರು ಆರೋಪಿಗಳು ಫೆಬ್ರವರಿ 20 ರಂದು ಯುವತಿಯ ಮನೆಯ ಮುಂದೆ ಸಂತ್ರಸ್ತೆಯನ್ನು ಎಸೆದು ಹೋಗಿದ್ದಾರೆ. ಘಟನೆಯ ಬಗ್ಗೆ ಭಾನುವಾರದಂದು ಪೊಲೀಸ್ ದೂರು ನೀಡಲಾಗಿದೆ. ಯುವತಿಯನ್ನು ಮೊದಲು ಜೈತ್‌‌ಪುರ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ನಂತರ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಜೈತ್‌ಪುತರ್‌ ಮಂಡಲ್ ಮುಖ್ಯಸ್ಥ ವಿಜಯ್ ತ್ರಿಪಾಠಿ ಕೂಡಾ ಈ ಅತ್ಯಾಚಾರದಲ್ಲಿ ಭಾಗಿಯಾಗಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಬಂಧನಕ್ಕೆ ಪ್ರಯತ್ನಗಳು ನಡೆಯುತ್ತಿವೆ ಎಂದು ಎಎಸ್‌ಪಿ ಹೇಳಿದ್ದಾರೆ.

ಆರೋಪಿಗಳ ಹೆಸರಿನಲ್ಲಿ ಬಿಜೆಪಿ ನಾಯಕನ ಹೆಸರು ಉಲ್ಲೇಖಿಸಲ್ಪಟ್ಟಿರುವ ಸುದ್ದಿ ಹೊರಬೀಳುತ್ತಿದ್ದಂತೆ ಅವರನ್ನು ಪಕ್ಷದಿಂದ ಹೊರಹಾಕಲಾಗಿದೆ ಎಂದು ಪಕ್ಷವು ತಿಳಿಸಿದೆ.

ಶಹದೋಲ್ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಮಲ್ ಪ್ರತಾಪ್ ಸಿಂಗ್ ಅವರು ವಿಜಯ್ ತ್ರಿಪಾಠಿ ಅವರನ್ನು ಜೈತ್‌‌ಪುರ ಮಂಡಲ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಿದ್ದು, ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಕಿತ್ತುಹಾಕಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನನ್ನ ಬಂಧನದಲ್ಲಿ ಬಿಜೆಪಿಯ ಪಿತೂರಿಯಿದೆ ಎಂದ ಬಿಜೆಪಿ ನಾಯಕಿ ಪಮೇಲಾ ಗೋಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...