ಒಡಿಶಾದ ಪ್ರಸಿದ್ಧ ಗೋಪಾಲಪುರ ಬೀಚ್‌ನಲ್ಲಿ 20 ವರ್ಷದ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ (ಜೂನ್ 17) ಹತ್ತು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಾಸಗಿ ಕಾಲೇಜಿನಲ್ಲಿ ಪದವಿಪೂರ್ವ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ, ರಾಜ ಹಬ್ಬದ ಪ್ರಯುಕ್ತ ತನ್ನ ಗೆಳೆಯ (ಸಹಪಾಠಿ) ಜೊತೆ ಭಾನುವಾರ ರಾತ್ರಿ ಬೀಚ್‌ಗೆ ಹೋದಾಗ ಅತ್ಯಾಚಾರ ನಡೆದಿದೆ.
ಗೋಪಾಲಪುರ ಪೊಲೀಸ್ ಠಾಣೆಗೆ ಯುವತಿ ನೀಡಿದ ದೂರಿನಲ್ಲಿ, ಬೀಚ್‌ನ ನಿರ್ಜನ ಸ್ಥಳದಲ್ಲಿ ಕುಳಿತಿದ್ದಾಗ 10 ಜನರ ಗುಂಪು ತಮ್ಮ ಬಳಿಗೆ ಬಂದು, ತನ್ನ ಗೆಳೆಯನನ್ನು ಸುತ್ತುವರೆದು ಸರದಿಯಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.
“ಪ್ರಕರಣ ಸಂಬಂಧ ಆರಂಭದಲ್ಲಿ ಏಳು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿತ್ತು. ನಂತರ, ಎಲ್ಲಾ 10 ಆರೋಪಿಗಳನ್ನು ಬಂಧಿಸಲಾಯಿಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾಗಿ ಪಿಟಿಐ ವರದಿ ಮಾಡಿದೆ.
ಆರೋಪಿಗಳು ಬೇರೆ ರಾಜ್ಯಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಆರೋಪಿಗಳನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಸಂತ್ರಸ್ತೆ ಇತರ ಮೂವರು ಯುವತಿಯರೊಂದಿಗೆ ಖಾಸಗಿ ಪಿಜಿಯಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಕರಣದ ಕುರಿತು ಒಡಿಶಾ ಉಪಮುಖ್ಯಮಂತ್ರಿ ಪ್ರವತಿ ಪರಿದಾ ಅವರು ಎಸ್ಪಿ ಸರವಣ ವಿವೇಕ್ ಎಂ ಅವರೊಂದಿಗೆ ಮಾತನಾಡಿದ್ದು, ಸಮಗ್ರ ತನಿಖೆಗೆ ಆದೇಶಿಸಿದ್ದಾರೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಆಫಾತ ವ್ಯಕ್ತಪಡಿಸಿದ ನವೀನ್ ಪಟ್ನಾಯಕ್, ತುರ್ತು ಕ್ರಮಕ್ಕೆ ಆಗ್ರಹ
ಬಿಜೆಡಿ ಅಧ್ಯಕ್ಷ ಮತ್ತು ಒಡಿಶಾ ವಿಧಾನಸಭೆಯ ವಿರೋಧ ಪಕ್ಷದ ನಾಯಕ ನವೀನ್ ಪಟ್ನಾಯಕ್ ಅವರು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದು ತೀವ್ರ ಆಘಾತಕಾರಿ ಘಟನೆ ಎಂದಿರುವ ಅವರು, ಮಹಿಳೆಯರ ಸುರಕ್ಷತೆಯನ್ನು ಕಾಪಾಡಲು ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಮಹಿಳೆಯರ ಮೇಲಿನ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ತಡೆಯಲು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಿದೆ. ಒಡಿಶಾದಾದ್ಯಂತ, ವಿಶೇಷವಾಗಿ ಗೋಪಾಲಪುರದಂತಹ ಪ್ರವಾಸಿ ತಾಣಗಳಲ್ಲಿ ಮಹಿಳೆಯರ ಸುರಕ್ಷತೆ ಕಾಪಾಡಲು ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅನುವು ಮಾಡಿಕೊಡಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ


