Homeಮುಖಪುಟವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: 10 ಜನರ ಬಂಧನ

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: 10 ಜನರ ಬಂಧನ

- Advertisement -
- Advertisement -

ಒಡಿಶಾದ ಪ್ರಸಿದ್ಧ ಗೋಪಾಲಪುರ ಬೀಚ್‌ನಲ್ಲಿ 20 ವರ್ಷದ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ (ಜೂನ್ 17) ಹತ್ತು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಾಸಗಿ ಕಾಲೇಜಿನಲ್ಲಿ ಪದವಿಪೂರ್ವ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ, ರಾಜ ಹಬ್ಬದ ಪ್ರಯುಕ್ತ ತನ್ನ ಗೆಳೆಯ (ಸಹಪಾಠಿ) ಜೊತೆ ಭಾನುವಾರ ರಾತ್ರಿ ಬೀಚ್‌ಗೆ ಹೋದಾಗ ಅತ್ಯಾಚಾರ ನಡೆದಿದೆ.

ಗೋಪಾಲಪುರ ಪೊಲೀಸ್ ಠಾಣೆಗೆ ಯುವತಿ ನೀಡಿದ ದೂರಿನಲ್ಲಿ, ಬೀಚ್‌ನ ನಿರ್ಜನ ಸ್ಥಳದಲ್ಲಿ ಕುಳಿತಿದ್ದಾಗ 10 ಜನರ ಗುಂಪು ತಮ್ಮ ಬಳಿಗೆ ಬಂದು, ತನ್ನ ಗೆಳೆಯನನ್ನು ಸುತ್ತುವರೆದು ಸರದಿಯಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

“ಪ್ರಕರಣ ಸಂಬಂಧ ಆರಂಭದಲ್ಲಿ ಏಳು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿತ್ತು. ನಂತರ, ಎಲ್ಲಾ 10 ಆರೋಪಿಗಳನ್ನು ಬಂಧಿಸಲಾಯಿಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾಗಿ ಪಿಟಿಐ ವರದಿ ಮಾಡಿದೆ.

ಆರೋಪಿಗಳು ಬೇರೆ ರಾಜ್ಯಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಆರೋಪಿಗಳನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಂತ್ರಸ್ತೆ ಇತರ ಮೂವರು ಯುವತಿಯರೊಂದಿಗೆ ಖಾಸಗಿ ಪಿಜಿಯಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣದ ಕುರಿತು ಒಡಿಶಾ ಉಪಮುಖ್ಯಮಂತ್ರಿ ಪ್ರವತಿ ಪರಿದಾ ಅವರು ಎಸ್ಪಿ ಸರವಣ ವಿವೇಕ್ ಎಂ ಅವರೊಂದಿಗೆ ಮಾತನಾಡಿದ್ದು, ಸಮಗ್ರ ತನಿಖೆಗೆ ಆದೇಶಿಸಿದ್ದಾರೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಆಫಾತ ವ್ಯಕ್ತಪಡಿಸಿದ ನವೀನ್ ಪಟ್ನಾಯಕ್, ತುರ್ತು ಕ್ರಮಕ್ಕೆ ಆಗ್ರಹ

ಬಿಜೆಡಿ ಅಧ್ಯಕ್ಷ ಮತ್ತು ಒಡಿಶಾ ವಿಧಾನಸಭೆಯ ವಿರೋಧ ಪಕ್ಷದ ನಾಯಕ ನವೀನ್ ಪಟ್ನಾಯಕ್ ಅವರು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದು ತೀವ್ರ ಆಘಾತಕಾರಿ ಘಟನೆ ಎಂದಿರುವ ಅವರು, ಮಹಿಳೆಯರ ಸುರಕ್ಷತೆಯನ್ನು ಕಾಪಾಡಲು ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಮಹಿಳೆಯರ ಮೇಲಿನ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ತಡೆಯಲು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಿದೆ. ಒಡಿಶಾದಾದ್ಯಂತ, ವಿಶೇಷವಾಗಿ ಗೋಪಾಲಪುರದಂತಹ ಪ್ರವಾಸಿ ತಾಣಗಳಲ್ಲಿ ಮಹಿಳೆಯರ ಸುರಕ್ಷತೆ ಕಾಪಾಡಲು ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅನುವು ಮಾಡಿಕೊಡಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...