Homeಮುಖಪುಟಹೈದರಾಬಾದ್‌ನಲ್ಲಿ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಹೈದರಾಬಾದ್‌ನಲ್ಲಿ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಸಾಮೂಹಿಕ ಅತ್ಯಾಚಾರ: ಪ್ರಕರಣ ದಾಖಲು

ಆರೋಪಿಗಳೆಲ್ಲರು ಪಿಯುಸಿ ಓದುತ್ತಿದ್ದು, ರಾಜಕೀಯ ಪ್ರಭಾವಿಗಳ ಕುಟುಂಬಕ್ಕೆ ಸೇರಿದ್ದಾರೆ. ಈ ದುಷ್ಕೃತ್ಯದಲ್ಲಿ ಶಾಸಕನ ಮಗನೂ ಭಾಗಿಯಾದ ಬಗ್ಗೆ ಶಂಕಿಸಲಾಗಿದೆ

- Advertisement -
- Advertisement -

ಪಬ್‌ಗೆ ತೆರಳಿದ್ದ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ಐವರು ಅಪ್ರಾಪ್ತ ಶಾಲಾ ಬಾಲಕರು ಕಾರಿನೊಳಗೆ ಕೂಡಿಹಾಕಿ ಸಾಮೂಹಿಕ ಅತ್ಯಾಚಾರಗೈದಿದ್ದಾರೆ ಎಂಬ ಆರೋಪದ ಮೇಲೆ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿರುವ ಆತಂಕಕಾರಿ ಘಟನೆ ಜರುಗಿದೆ.

ಶನಿವಾರ ಸಂಜೆ ಈ ಅಮಾನವೀಯ ಕೃತ್ಯ ಜರುಗಿದ್ದು, ಆರೋಪಿಗಳೆಲ್ಲರು ಪ್ರಥಮ ಮತ್ತು ದ್ವಿತೀಯ ಪಿಯುಸಿ ಓದುತ್ತಿದ್ದು, ರಾಜಕೀಯ ಪ್ರಭಾವಿಗಳ ಕುಟುಂಬಕ್ಕೆ ಸೇರಿದ್ದಾರೆ. ಬಾಲಕಿಯ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ.

ಶನಿವಾರ ಸಂಜೆ 17 ವರ್ಷದ ಬಾಲಕಿಯೊಬ್ಬಳು ತನ್ನ ಸ್ನೇಹಿತನ ಜೊತೆ ಪಬ್ ಒಂದಕ್ಕೆ ತೆರಳಿದ್ದಾಳೆ. ಆದರೆ ಆತ ಬೇಗನೇ ಪಬ್‌ನಿಂದ ತೆರಳಿದ್ದಾನೆ. ಅಲ್ಲಿಂದ ಆರೋಪಿ ಬಾಲಕರು ಡ್ರಾಪ್ ಕೊಡುವುದಾಗಿ ಹೇಳಿ ಬಾಲಕಿಯೊಂದಿಗೆ ಸ್ನೇಹ ಸಾಧಿಸಿದ್ದು ಕಾರ್‌ನಲ್ಲಿ ತೆರಳಿದ್ದಾರೆ. ದಾರಿ ಮಧ್ಯೆ ಬೇಕರಿಗೂ ಭೇಟಿ ಕೊಟ್ಟಿದ್ದಾರೆ ಎನ್ನಲಾಗಿದೆ.

ಆ ಐದು ಬಾಲಕರು ಕಾರನ್ನು ಪ್ರತಿಷ್ಟಿತ ಜ್ಯುಬಿಲಿ ಹಿಲ್ಸ್ ಎಂಬಲ್ಲಿ ನಿಲ್ಲಿಸಿ, ಕಾರಿನೊಳಗೆ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ. ಈ ಸಂದರ್ಭದಲ್ಲಿ ಕೆಲವರು ಹೊರಗೆ ನಿಂತು ಕಾವಲು ಕಾದಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಶಾಸಕನ ಮಗನೂ ಸಹ ಭಾಗಿಯಾಗಿದ್ದು, ಆದರೆ ಅತ್ಯಾಚಾರ ನಡೆಯುವ ಮುನ್ನವೇ ಕಾರಿನಿಂದ ಇಳಿದು ಹೋಗಿದ್ದಾನೆ ಎನ್ನಲಾಗಿದೆ. ಸಂಪೂರ್ಣ ವಿಚಾರಣೆಯ ಬಳಿಕವಷ್ಟೇ ಸತ್ಯ ಹೊರಬೀಳಲಿದೆ.

ಇದನ್ನೂ ಓದಿ: ಹೈದರಾಬಾದ್‌‌ ದಿಶಾ ಪ್ರಕರಣ; ಆರೋಪಿಗಳ ಕೊಲೆ ಮಾಡಲೆಂದೇ ಪೊಲೀಸರಿಂದ ‘ನಕಲಿ ಎನ್‌ಕೌಂಟರ್‌‌’: ತನಿಖಾ ಆಯೋಗ ವರದಿ

ಬಾಲಕಿಯ ತಂದೆಯ ದೂರಿನ ಮೇಲೆ ಮೊದಲು ಪೊಲೀಸರು ‘ಘನತೆಗೆ ಕುಂದು’ ಪ್ರಕರಣ ದಾಖಲಿಸಿದ್ದರು. ಆದರೆ ಬಾಲಕಿಯು ಮಹಿಳಾ ಪೊಲೀಸರ ಬಳಿ ಸಾಮೂಹಿಕ ಅತ್ಯಾಚಾರ ನಡೆದುದರ ಕುರಿತು ಮಾಹಿತಿ ನೀಡಿದ ನಂತರ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾಲಕಿ ಸದ್ಯ ಶಾಕ್‌ನಲ್ಲಿದ್ದಾಳೆ. ಪೂರ್ತಿ ವಿವರ ನೀಡುವ ಪರಿಸ್ಥಿತಿಯಲ್ಲಿಲ್ಲ. ಸದ್ಯಕ್ಕೆ ಸಿಕ್ಕಿರುವ ಮಾಹಿತಿಯ ಆಧಾರದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳು ಸೇರಿ ಇನ್ನಿತರ ತಾಂತ್ರಿಕ ಸಾಕ್ಷಿಗಳ ಆಧಾರದಲ್ಲಿ ತನಿಖೆ ನಡೆಸುತ್ತಿದ್ದೇವೆ. ಅಪ್ರಾಪ್ತರಿಗೆ ಕ್ಲಬ್‌ನಲ್ಲಿ ಹೇಗೆ ಪ್ರವೇಶ ನೀಡಲಾಯಿತು ಎನ್ನುವುದರ ಕುರಿತೂ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ಜೋಲ್ ಡೇವಿಸ್ ತಿಳಿಸಿದ್ದಾರೆ.

ಅತ್ಯಾಚಾರವೆಂಬದು ಹೀನ ಕುಕೃತ್ಯ. ವಿಕೃತ ಮನಸ್ಸಗಳು ಮಾಡುವ ಘೋರ ಅಪರಾಧ. ಇಂತಹ ಹೀನ ಕೃತ್ಯಕ್ಕೆ ಹೈದರಾಬಾದ್‌ನಲ್ಲಿ ಶಾಲಾ ಬಾಲಕರೂ ಇಳಿದಿರುವುದು ದುರಂತವಾಗಿದೆ. ಈ ಕುರಿತು ಸರ್ಕಾರಗಳು ಗಂಭೀರವಾಗಿ ಚಿಂತಿಸಿ ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಅರಿವು ಮೂಡಿಸಬೇಕಿದೆ. ಅತ್ಯಾಚಾರಗಳನ್ನು ತಡೆಯಲು ಗಂಭೀರ ಪ್ರಯತ್ನ ಹಾಕಬೇಕಿದೆ. ಅದು ಘೋರ ಅಪರಾಧ ಎಂದು ಎಲ್ಲರ ಮನಸ್ಸಿನಲ್ಲಿ ಮೂಡುವಂತೆ ಒತ್ತಡ ಹಾಕಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...