Homeಮುಖಪುಟಸಾಮೂಹಿಕ ಅತ್ಯಾಚಾರ: ದಲಿತ ಮಹಿಳೆ ಮತ್ತು ಆಕೆಯ ಮಗುವನ್ನು ಕಾಲುವೆಗೆ ಎಸೆದ ಪಾಪಿಗಳು!

ಸಾಮೂಹಿಕ ಅತ್ಯಾಚಾರ: ದಲಿತ ಮಹಿಳೆ ಮತ್ತು ಆಕೆಯ ಮಗುವನ್ನು ಕಾಲುವೆಗೆ ಎಸೆದ ಪಾಪಿಗಳು!

ಐದು ವರ್ಷದ ಮಗು ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣದ ಏಳು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ.

- Advertisement -
- Advertisement -

ಬಿಹಾರದ ಬಕ್ಸರ್ ಜಿಲ್ಲೆಯ ದಲಿತ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಆಕೆಯ ಮೇಲೆ ಹಲ್ಲೆ ನಡೆಸಿ ಕಾಲುವೆಗೆ ಎಸೆದ ನಂತರ ಆಕೆಯ ಮಗು ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಐದು ವರ್ಷದ ಮಗುವನ್ನು ಕಾಲುವೆಗೆ ಎಸೆದಿದ್ದರಿಂದ, ಮುಳುಗಿ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣದ ಏಳು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಇಬ್ಬರನ್ನು ಗುರುತಿಸಲಾಗಿದೆ. ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ಪಾಟ್ನಾದಿಂದ 135 ಕಿ.ಮೀ ದೂರದಲ್ಲಿರುವ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಅತ್ಯಾಚಾರಕ್ಕೊಳಗಾದ ಬಾಲಕಿ ಆತ್ಮಹತ್ಯೆ; ಎರಡು ತಿಂಗಳ ನಂತರ FIR!

“ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಯುತ್ತಿದೆ. ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿ ಕೆ.ಕೆ.ಸಿಂಗ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ:ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಕಳೆದ ತಿಂಗಳು ದೆಹಲಿಯ ಆಸ್ಪತ್ರೆಯಲ್ಲಿ ನಿಧನರಾದ ಉತ್ತರ ಪ್ರದೇಶದ ಹತ್ರಾಸ್‌ನ 20 ವರ್ಷದ ಯುವತಿಯನ್ನು ಕ್ರೂರವಾಗಿ ಅತ್ಯಾಚಾರಗೈದು ಹಲ್ಲೆ ಮಾಡಿದ್ದ ಘಟನೆಯ ಬೆನ್ನಲ್ಲೇ, ದೇಶದಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ವಿರುದ್ಧ ಆಕ್ರೋಶ ಹೆಚ್ಚುತ್ತಿರುವ ನಡುವೆ ಈ ಘಟನೆ ನಡೆದಿದೆ.

ಇದನ್ನೂ ಓದಿ:ದೇಶದಲ್ಲಿ ಕೊಲೆ, ಸುಲಿಗೆ, ಅತ್ಯಾಚಾರಗಳು ಹೆಚ್ಚಾಗಿದೆ; ಆದರೆ ಚೌಕಿದಾರ ಕಾಣಿಸುತ್ತಿಲ್ಲ: ಸಿದ್ದರಾಮಯ್ಯ

ದೆಹಲಿಯಲ್ಲಿ 2012 ರಲ್ಲಿ ನಡೆದ ಸಾಮೂಹಿಕ ಅತ್ಯಾಚಾರವನ್ನು ನೆನಪಿಸುವ ಹತ್ರಾಸ್ ಪ್ರಕರಣವನ್ನು ಸಿಬಿಐ ತೆಗೆದುಕೊಂಡಿದೆ. ಯುವತಿಯನ್ನು ತನ್ನ ಹಳ್ಳಿಯ ನಾಲ್ಕು ಮೇಲ್ಜಾತಿ ಪುರುಷರು ಸಾಮೂಹಿಕ ಅತ್ಯಾಚಾರ ಮತ್ತು ಹಲ್ಲೆ ಮಾಡಿದ್ದಾರೆ ಎಂದು ಕುಟುಂಬ ಆರೋಪಿಸಿದೆ. ಆಕೆಯ ಕುಟುಂಬ ಇಂದು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠದ ಮುಂದೆ ಹಾಜರಾಗಲಿದೆ.

ಕಳೆದ ತಿಂಗಳು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ, ಭಾರತವು 2019 ರಲ್ಲಿ ಪ್ರತಿದಿನ ಸರಾಸರಿ 87 ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿದೆ. ಈ ವರ್ಷದಲ್ಲಿ ಮಹಿಳೆಯರ ಮೇಲಿನ 4,05,861 ಅಪರಾಧಗಳು ದಾಖಲಾಗಿವೆ. ಇದು 2018 ಕ್ಕಿಂತ ಶೇಕಡಾ 7 ರಷ್ಟು ಹೆಚ್ಚಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌‌: ಪಂಜಾಬ್‌‌ನ ಈ ಮಹಿಳಾ ಅಧಿಕಾರಿ ಮೃತಪಟ್ಟಿದ್ದು ಅತ್ಯಾಚಾರದಿಂದಲ್ಲ, ರಸ್ತೆ ಅಫಘಾತದಿಂದ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...