Homeಮುಖಪುಟದೇವಸ್ಥಾನಕ್ಕೆ ಬಂದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ-ಹತ್ಯೆ: ಅರ್ಚಕ ಸೇರಿ ಮೂವರ ಮೇಲೆ FIR

ದೇವಸ್ಥಾನಕ್ಕೆ ಬಂದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ-ಹತ್ಯೆ: ಅರ್ಚಕ ಸೇರಿ ಮೂವರ ಮೇಲೆ FIR

"ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಭಾನುವಾರ ಸಂಜೆ ದೇವಸ್ಥಾನಕ್ಕೆ ಪೂಜೆಗೆಂದು ಹೋದವರು ಹಿಂತಿರುಗಿರಲಿಲ್ಲ. ಬಳಿಕ ಅವರು ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದರು"

- Advertisement -
- Advertisement -

50 ವರ್ಷದ ಮಹಿಳೆಯ ಮೇಲೆ ದೇವಸ್ಥಾನದಲ್ಲಿಯೇ ಸಾಮೂಹಿಕ ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬದಾನ್ ಜಿಲ್ಲೆಯಲ್ಲಿ ನಡೆದಿದ್ದು, ಅರ್ಚಕ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

“ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಭಾನುವಾರ ಸಂಜೆ ದೇವಸ್ಥಾನಕ್ಕೆ ಪೂಜೆಗೆಂದು ಹೋದವರು ಹಿಂತಿರುಗಿರಲಿಲ್ಲ. ಬಳಿಕ ಅವರು ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದರು. ಇದಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಮಂಗಳವಾರ ಬಂಧಿಸಲಾಗಿದೆ. ಅರ್ಚಕ ತಪ್ಪಿಸಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದಕ್ಕಾಗಿ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ” ಎಂದು ಪೊಲೀಸರು ಹೇಳಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಂತ್ರಸ್ತೆಯ ಪುತ್ರ, “ರಾತ್ರಿ 12 ಗಂಟೆ ಸುಮಾರಿಗೆ ಮಹಂತಾ ಬಾಬಾ ಸತ್ಯನಾರಾಯಣ, ವೆದ್ರಮ್ ಹಾಗೂ ಚಾಲಕ ಜಸ್ಪಾಲ್ ರಕ್ತದ ಮಡುವಿನಲ್ಲಿದ್ದ ನನ್ನ ತಾಯಿಯನ್ನು ತಮ್ಮದೇ ವಾಹನದಲ್ಲಿ ಕರೆದುಕೊಂಡುಬಂದು ಮನೆ ಬಳಿ ಬಿಟ್ಟು ಪರಾರಿಯಾದರು. ನನ್ನ ತಾಯಿ ಪ್ರತಿದಿನದ ಪೂಜೆಗಾಗಿ ದೇವಸ್ಥಾನಕ್ಕೆ ಹೋಗುತ್ತಿದ್ದರು. ಭಾನುವಾರ ಸಂಜೆ 5ಕ್ಕೆ ದೇವಾಲಯಕ್ಕೆ ಹೋದ ತಾಯಿಯನ್ನು ರಾತ್ರಿ 12ರ ಸುಮಾರಿಗೆ ಮೂವರು ವಾಹನದಲ್ಲಿ ತಂದುಬಿಟ್ಟಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮಾವಿನ ಸೊಪ್ಪು ಕಿತ್ತ ದಲಿತ ಯುವಕನ ಮೇಲೆ ಹಲ್ಲೆ: ಅಸಹಜ ಸಾವು

ಮರಣೋತ್ತರ ಪರೀಕ್ಷಾ ವರದಿಯ ಪ್ರಕಾರ, ಮಹಿಳೆಯ ಗುಪ್ತಾಂಗಕ್ಕೆ ತೀವ್ರ ಗಾಯವಾಗಿದೆ. ದುಷ್ಕರ್ಮಿಗಳ ನಡೆಸಿರುವ ಹಲ್ಲೆಗೆ ಮಹಿಳೆಯ ಶ್ವಾಸಕೋಶಕ್ಕೆ ಹಾನಿಯಾಗಿದ್ದು, ಮಹಿಳೆಯ ಪಕ್ಕೆಲುಬು ಹಾಗೂ ಕಾಲು ಮುರಿದಿದೆ. ಆಕೆಗೆ ತೀವ್ರ ರಕ್ತಸ್ರಾವವೂ ಆಗಿದೆ ಎಂದು ವರದಿಯಾಗಿದೆ.

“ನಾವು ದೂರು ನೀಡಿದರೂ ಉಘೈಟಿ ಪೊಲೀಸ್ ಠಾಣೆಯ ಅಧಿಕಾರಿ ರವೀಂದ್ರ ಪ್ರತಾಪ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿಲ್ಲ” ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ಘಟನೆ ನಡೆದು 18 ಗಂಟೆಗಳ ಬಳಿಕ ಸೋಮವಾರ ಮಧ್ಯಾಹ್ನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಮೂವರು ವೈದ್ಯರ ತಂಡ ಪೋಸ್ಟ್ ಮಾರ್ಟಂ ಮಾಡಿದೆ.

ಆರೋಪಿಗಳ ಮೇಲೆ ಹತ್ಯೆ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ತಲೆಮರೆಸಿಕೊಂಡಿರುವ ಅರ್ಚಕನನ್ನು ಸೆರೆ ಹಿಡಿಯಲು 4 ತಂಡಗಳನ್ನು ರಚಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ಯುವಕನನ್ನು ಹಾಡಹಗಲೇ ನಡುರಸ್ತೆಯಲ್ಲಿ ಥಳಿಸಿ ಕೊಂದ ದುಷ್ಕರ್ಮಿಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...