Homeಮುಖಪುಟಮಧ್ಯ ಪ್ರದೇಶ | ಸಹಪಾಠಿಗಳಿಂದ ಸಾಮೂಹಿಕ ಅತ್ಯಾಚಾರ : ವಿದ್ಯಾರ್ಥಿನಿ ಆತ್ಮಹತ್ಯೆ

ಮಧ್ಯ ಪ್ರದೇಶ | ಸಹಪಾಠಿಗಳಿಂದ ಸಾಮೂಹಿಕ ಅತ್ಯಾಚಾರ : ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ಸಹಪಾಠಿಗಳಿಂದ ಸಾಮೂಹಿಕ ಅತ್ಯಾಚಾರ ಮತ್ತು ಬ್ಲ್ಯಾಕ್‌ ಮೇಲ್‌ಗೆ ಒಳಗಾದ 11ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯ ಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ವಿದ್ಯಾರ್ಥಿನಿಯ ಕುಟುಂಬಸ್ಥರು ಈ ಸಂಬಂಧ ದೂರು ದಾಖಲಿಸಿದ್ದು, ಆಕೆಯ ಸಹಪಾಠಿಗಳಾದ ನಾಲ್ವರು ಬಾಲಕರನ್ನು ಆರೋಪಿಗಳನ್ನಾಗಿ ಹೆಸರಿಸಿದ್ದಾರೆ.

ಬಾಲಕಿಯ ತಂದೆಯ ನೀಡಿದ ಮಾಹಿತಿ ಪ್ರಕಾರ, ಕಳೆದ ಸೋಮವಾರ (ಡಿ.2) ತರಗತಿ ಮುಗಿದ ಬಳಿಕ ವಿದ್ಯಾರ್ಥಿನಿಯನ್ನು ಬಲವಂತವಾಗಿ ನಿರ್ಜನ ಸ್ಥಳಕ್ಕೆ ಕರೆದೊಯ್ದ ಸಹಪಾಠಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ತಮ್ಮ ಕೃತ್ಯವನ್ನು ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿದ್ದ ಅವರು, ವಿಷಯ ಬಹಿರಂಗಪಡಿಸಿದರೆ, ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ.

ವಿದ್ಯಾರ್ಥಿನಿ ನಡೆದ ಘಟನೆಯನ್ನು ಮಂಗಳವಾರ ತನ್ನ ತಾಯಿಗೆ ತಿಳಿಸಿದ್ದಳು. ಆದರೆ, ಮನೆಯವರು ತಕ್ಷಣ ಈ ಬಗ್ಗೆ ದೂರು ದಾಖಲಿಸಿರಲಿಲ್ಲ. ಅತ್ಯಾಚಾರದ ಬಳಿಕವೂ ಗುರುವಾರದವರೆಗೆ ಬಾಲಕಿ ಶಾಲೆಗೆ ಹೋಗುತ್ತಿದ್ದಳು. ಆದರೆ, ಆಕೆಯ ಮೇಲೆ ದೌರ್ಜನ್ಯ ನಡೆಸಿದ ಸಹಪಾಠಿಗಳು ಬ್ಲ್ಯಾಕ್ ಮೇಲ್ ಮಾಡಲು ಶುರು ಮಾಡಿದಾಗ ಇನ್ನಷ್ಟು ನೊಂದಿದ್ದಾಳೆ.

ಶುಕ್ರವಾರ ಬಾಲಕಿ ಶಾಲೆಗೆ ಹೋಗಿರಲಿಲ್ಲ. ಶಾಲೆಯವರು ಆಕೆಯ ಗೈರು ಹಾಜರಾತಿಯ ಬಗ್ಗೆ ತಂದೆಗೆ ಮಾಹಿತಿ ನೀಡಿದ್ದಾರೆ. ಗಾಬರಿಗೊಂಡ ತಂದೆ ಮನೆಗೆ ಬಂದಾಗ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡಿದ್ದಾರೆ.

ವರದಿಯೊಂದರ ಪ್ರಕಾರ, ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ವಿಷಯ ಗೊತ್ತಾದ ಬಳಿಕ, ಆಕೆಯ ತಂದೆ ಅದನ್ನು ಗೌಪ್ಯವಾಗಿ ಪರಿಹರಿಸಲು ಪ್ರಯತ್ನಿಸಿದ್ದರು. ಅತ್ಯಾಚಾರವೆಸಗಿದ ಬಾಲಕರನ್ನು ಮನೆಗೆ ಕರೆಸಿ ಮಾತುಕತೆಗೂ ಮುಂದಾಗಿದ್ದರು. ಕುಟುಂಬ ಮತ್ತು ಮಗಳ ಗೌರವ ಕಾಪಾಡಲು ಮುಂದಾಗಿದ್ದರು. ಮಗಳಿಗೂ ಧೈರ್ಯ ತುಂಬಿದ್ದರು. ಆದರೆ, ಈ ನಡುವೆ ಆರೋಪಿ ಬಾಲಕರ ಉಪಟಳ ಹೆಚ್ಚಾಗಿದ್ದರಿಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಸಂಬಂಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ‘ಜೈ ಶ್ರೀರಾಮ್’ ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಿಂದ ಥಳಿತ : ಓರ್ವನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...