Homeಮುಖಪುಟಯುಪಿ ಸರ್ಕಾರದ ಬಯಕೆಯಂತೆ ಗ್ಯಾಂಗ್‌ಸ್ಟರ್ ಅತೀಕ್, ಅಶ್ರಫ್ ಶೂಟೌಟ್: ಟ್ವೀಟ್ ಮಾಡಿ, ಡಿಲೀಟ್ ಮಾಡಿದ ಬಿಜೆಪಿ...

ಯುಪಿ ಸರ್ಕಾರದ ಬಯಕೆಯಂತೆ ಗ್ಯಾಂಗ್‌ಸ್ಟರ್ ಅತೀಕ್, ಅಶ್ರಫ್ ಶೂಟೌಟ್: ಟ್ವೀಟ್ ಮಾಡಿ, ಡಿಲೀಟ್ ಮಾಡಿದ ಬಿಜೆಪಿ ಸಂಸದ

- Advertisement -
- Advertisement -

ಗ್ಯಾಂಗ್‌ಸ್ಟರ್‌, ಮಾಜಿ ಸಂಸದ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ ಪೊಲೀಸರ ಬಿಗಿ ಭದ್ರತೆಯಲ್ಲಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ವೈದ್ಯಕೀಯ ಪರೀಕ್ಷೆಗೆ ತೆರಳುತ್ತಿದ್ದಾಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದ ಬಿಜೆಪಿ ಸಂಸದ, ಉತ್ತರ ಪ್ರದೇಶ ಸರ್ಕಾರದ ಬಯಕೆಯಂತೆ ಕೊಲೆ ಮಾಡಲಾಗಿದೆ ಎಂದು ಬರೆದು, ಆ ಬಳಿಕ ಆ ಟ್ವೀಟ್‌ನ್ನು ಡಿಲೀಟ್ ಮಾಡಿದ್ದಾರೆ.

ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದಾರಿಗಿರುವ ಪಿಸಿ ಮೋಹನ್‌ ಅವರು, ಈ ಬಗ್ಗೆ ಟ್ವೀಟ್ ಮಾಡಿ ಬಳಿಕ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಆದರೆ ಡಿಲಿಟ್ ಮಾಡುವ ಮುನ್ನವೇ ಕೆಲವರು ಅದರ ಸ್ಕ್ರೀನ್‌ಶಾಟ್ ತೆಗೆದು ಸಾಮಾಜಿಕ ಮಾಧ್ಯದಲ್ಲಿ ಹಂಚಿಕೊಂಡಿದ್ದಾರೆ.

ಈ ಪ್ರಕರಣದ ಬಳಿಕ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ವಿಚಾರವಾಗಿ ಆಡಳಿತರೂಢ ಬಿಜೆಪಿ ಹಾಗೂ ವಿಪಕ್ಷಗಳ ನಡುವೆ ಭಾರೀ ಚರ್ಚೆ ಮಾಡಲಾಗುತ್ತಿದೆ. ಈ ನಡುವೆ ಕರ್ನಾಟಕದ ಬಿಜೆಪಿ ಸಂಸದ ಪಿಸಿ ಮೋಹನ್ ಅವರು, ಈ ಕೊಲೆಯನ್ನು ಬಿಜೆಪಿ ಯೋಗಿ ನೇತೃತ್ವದ ಸರ್ಕಾರ ಬಯಸಿದಂತೆ ಈ ಕೊಲೆಯನ್ನು ಮಾಡಲಾಗಿದೆ ಎನ್ನುವಂತೆ ಯೋಗಿ ಅವರ ಪೋಟೋ ಹಾಕಿ ಟ್ವೀಟ್ ಮಾಡಿದ್ದಾರೆ. ಆ ಬಳಿಕ ಡಿಲೀಟ್ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪೊಲೀಸ್ ಭದ್ರತೆಯಲ್ಲೇ ದುಷ್ಕರ್ಮಿಗಳ ಗುಂಡೇಟಿಗೆ ಗ್ಯಾಂಗ್‌ಸ್ಟರ್‌ ಅತೀಕ್‌, ಅಶ್ರಫ್‌ ಬಲಿ

ಏನಿದು ಘಟನೆ?

ಗ್ಯಾಂಗ್‌ಸ್ಟರ್‌, ಮಾಜಿ ಸಂಸದ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ ಪೊಲೀಸರ ಬಿಗಿ ಭದ್ರತೆಯಲ್ಲಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ವೈದ್ಯಕೀಯ ಪರೀಕ್ಷೆಗೆ ತೆರಳುತ್ತಿದ್ದಾಗಲೇ ದುಷ್ಕರ್ಮಿಗಳು ಗುಂಡಿ ದಾಳಿ ನಡೆಸಿದ್ದಾರೆ.

ಗ್ಯಾಂಗ್‌ಸ್ಟರ್‌ ಅತೀಕ್‌, ಅಶ್ರಫ್‌ ಮೇಲೆ ಗುಂಡಿನ ದಾಳಿ ನಡೆಸುತ್ತಿರುವ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕೃತ್ಯ ಎಸಗಿದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪೊಲೀಸರು ಮತ್ತು ಮಾಧ್ಯಮದವರ ಎದುರೇ ಪತ್ರಕರ್ತರ ಸೋಗಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅತೀಕ್‌ ಮತ್ತು ಅಶ್ರಫ್‌ ಮೇಲೆ ಏಕಾಏಕಿ ದಾಳಿ ನಡೆಸಿದರು. ತೀರಾ ಹತ್ತಿರದಲ್ಲಿಯೇ ದಾಳಿ ನಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೂವರು ಆರೋಪಿಗಳನ್ನು ಅರುಣ್ ಮೌರ್ಯ, ಲವಲೇಶ್ ತಿವಾರಿ ಮತ್ತು ಸನ್ನಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಪತ್ರಿಕಾ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ವಿಪಕ್ಷಗಳ ಪ್ರತಿಕ್ರಿಯೆ:

ಈ ಘಟನೆ ಬಗ್ಗೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಟ್ವೀಟ್ ಮಾಡಿದ್ದು, ”ಬಿಜೆಪಿ ಭಾರತವನ್ನು ಮಾಫಿಯಾ ಗಣರಾಜ್ಯವನ್ನಾಗಿ ಮಾಡಿದೆ ಎಂದು ಇಲ್ಲಿಯೂ ಹೇಳುತ್ತೇನೆ, ವಿದೇಶದಲ್ಲೂ ಹೇಳುತ್ತೇನೆ, ಎಲ್ಲೆಲ್ಲೂ ಹೇಳುತ್ತೇನೆ ಏಕೆಂದರೆ ಇದು ಸತ್ಯ. ಬಂಧನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಮತ್ತು ಕ್ಯಾಮೆರಾಗಳ ಮುಂದೆಯೇ ಗುಂಡಿಕ್ಕಿ ಕೊಂದರು- ಇದು ಕಾನೂನು ನಿಯಮಗಳ ಸಾವು” ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ”ಉತ್ತರ ಪ್ರದೇಶದಲ್ಲಿ ಅಪರಾಧ ಉತ್ತುಂಗಕ್ಕೇರಿದೆ ಮತ್ತು ಅಪರಾಧಿಗಳು ಬೆಚ್ಚಿಬೀಳುತ್ತಿಲ್ಲ. ಪೊಲೀಸ್ ಸರ್ಪಗಾವಲಿನ ನಡುವೆ ಯಾರನ್ನಾದರೂ ಗುಂಡಿಕ್ಕಿ ಕೊಲ್ಲಬಹುದು, ಆಗ ಸಾಮಾನ್ಯರ ಪಾಡೇನು? ಇದರಿಂದ ಸಾರ್ವಜನಿಕರ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದ್ದು, ಕೆಲವರು ಉದ್ದೇಶಪೂರ್ವಕವಾಗಿ ಇಂತಹ ವಾತಾವರಣ ಸೃಷ್ಟಿಸುತ್ತಿರುವಂತೆ ಕಾಣುತ್ತಿದೆ” ಎಂದಿದ್ಧಾರೆ.

ಅತೀಕ್-ಅಶ್ರಫ್ ಹತ್ಯೆ ಕುರಿತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಾತನಾಡಿ, ”ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು ಮತ್ತು ಈ ಬಗ್ಗೆ ತಂಡವನ್ನು ರಚಿಸಿ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ಗೆ ನಾನು ಒತ್ತಾಯಿಸುತ್ತೇನೆ. ಅಲ್ಲಿರುವ ಎಲ್ಲಾ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ತೆಗೆದುಹಾಕಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...