ಎದೆ ನೋವಿನ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈಗ ಐಸಿಯುನಲ್ಲಿದ್ದು, ಪ್ರಾಥಮಿಕ ಆ್ಯಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನೀಡಲಾಗಿದೆ.
ಶನಿವಾರ ಕೋಲ್ಕತ್ತಾದ ತಮ್ಮ ಮನೆಯಲ್ಲಿ ವ್ಯಾಯಾಮ ಮಾಡುವಾಗ ಎದೆಯ ನೋವಿನ ಕಾರಣದಿಂದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರನ್ನು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಕೋಲ್ಕತ್ತಾದ ವುಡ್‌ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಐಸಿಯುನಲ್ಲಿರುವ ಅವರಿಗೆ ಪ್ರಾಥಮಿಕ ಆ್ಯಂಜಿಯೋಪ್ಲಾಸ್ಟಿ ಸರ್ಜರಿ ಮಾಡಲಾಗಿದೆ.
ಇದನ್ನೂ ಓದಿ: ತಮಿಳುನಾಡು: ಕೃಷಿ ಕಾನೂನು ವಿರುದ್ಧ ವಿಶೇಷ ಅಧಿವೇಶನ ಕರೆಯುವಂತೆ ’ಸ್ಟಾಲಿನ್’ ಪತ್ರ
He (Sourav Ganguly) is fine now, he even spoke to me. I thank the hospital authority and doctors here: West Bengal CM Mamata Banerjee https://t.co/YQd6WB2o5r pic.twitter.com/fXwll8ZwFy
— ANI (@ANI) January 2, 2021
ಸೌರವ್ ಗಂಗೂಲಿ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜ್ಯಪಾಲ ಜಗದೀಪ್ ಧನಕರ್, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಕ್ರಿಕೆಟಿಗ ವಿರಾಟ್ ಕೊಹ್ಲಿ ಇನ್ನೂ ಹಲವರು ಶೀಘ್ರ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಗಂಗೂಲಿ ಆರೋಗ್ಯ ಸ್ಥಿರವಾಗಿದೆ. ನಮ್ಮ ಜೊತೆಗೆ ಮಾತನಾಡಿದ್ದಾರೆ. ಆಸ್ಪತ್ರೆ ಸಿಬ್ಬಂದಿಗೆ ಧನ್ಯವಾದಗಳು ಎಂದು ಆಸ್ಪತ್ರೆ ಭೇಟಿ ಬಳಿಕ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಇದನ್ನೂ ಓದಿ: ಫ್ಲ್ಯಾಟ್ ವಿಚಾರದಲ್ಲಿ ಕಂಗನಾ ರಾಣಾವತ್ ನಿಯಮ ಉಲ್ಲಂಘಿಸಿದ್ದಾರೆ: ಮುಂಬೈ ಸಿವಿಲ್ ಕೋರ್ಟ್


