Homeಮುಖಪುಟಪ್ರತಿ ಗರ್ಬಾ ಪೆಂಡಾಲ್ ಪ್ರವೇಶದಲ್ಲಿ ದನದ ಮೂತ್ರ ನೀಡಿ | ಇಂದೋರ್ ಬಿಜೆಪಿ ಅಧ್ಯಕ್ಷನ ವಿಲಕ್ಷಣ...

ಪ್ರತಿ ಗರ್ಬಾ ಪೆಂಡಾಲ್ ಪ್ರವೇಶದಲ್ಲಿ ದನದ ಮೂತ್ರ ನೀಡಿ | ಇಂದೋರ್ ಬಿಜೆಪಿ ಅಧ್ಯಕ್ಷನ ವಿಲಕ್ಷಣ ಸಲಹೆ

- Advertisement -
- Advertisement -

ಮಧ್ಯಪ್ರದೇಶದ ಅತಿ ಹೆಚ್ಚು ಜನನಿಬಿಡ ನಗರವಾದ ಇಂದೋರ್‌ನಲ್ಲಿ ಮುಂಬರುವ ನವರಾತ್ರಿ ಆಚರಣೆಯ ವೇಳೆ ಆಗಮಿಸುವ ಜನರನ್ನು ಶುದ್ಧೀಕರಿಸಲು ಮತ್ತು ಬೇರೆ ಸಮುದಾಯಗಳ ಜನರ ಅನಗತ್ಯ ಪ್ರವೇಶವನ್ನು ಪರೀಕ್ಷಿಸಲು ದನದ ಮೂತ್ರ ಬಳಸುವಂತೆ ಆಡಳಿತಾರೂಢ ಬಿಜೆಪಿ ನಾಯಕರೊಬ್ಬರು ವಿಲಕ್ಷಣ ಸಲಹೆಯನ್ನು ನೀಡಿದ್ದಾರೆ.ಗರ್ಬಾ ಪೆಂಡಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಗರ್ಬಾ ಪೆಂಡಾಲ್‌ಗಳಿಗೆ ಪ್ರವೇಶಿಸುವವರು ಪ್ರವೇಶದ್ವಾರದಲ್ಲಿ ದನದ ಮೂತ್ರವನ್ನು ನೀಡಬೇಖು. ಗರ್ಬಾ ಸ್ಥಳಗಳಿಗೆ ಪ್ರವೇಶಿಸುವ ಮೊದಲು ದನದ ಮೂತ್ರವನ್ನು ಹೀರುವುದನ್ನು ಯಾವುದೇ ಹಿಂದೂಗಳು ವಿರೋಧಿಸುವುದಿಲ್ಲ” ಎಂದು ಇಂದೋರ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ಚಿಂಟು ವರ್ಮಾ ಹೇಳಿದ್ದಾರೆ.

“ದನದ ಮೂತ್ರವು ನಮಗೆ ಗೋಮಾತೆಯಷ್ಟೇ ಪವಿತ್ರ. ​​ಅನಾದಿ ಕಾಲದಿಂದಲೂ ಇದನ್ನು ನಮ್ಮ ಋಷಿಮುನಿಗಳು ಶುದ್ಧೀಕರಣಕ್ಕಾಗಿ ಬಳಸುತ್ತಿದ್ದರು. ಆದ್ದರಿಂದ ಇದನ್ನು ಪ್ರತಿ ಗರ್ಬಾ ಪೆಂಡಾಲ್‌ ಹೊರಗೆ ಇರಿಸಿ, ಗರ್ಬಾ ಆಚರಣೆ ನೋಡಲು ಬರುವವರಿಗೆ ನೀಡಬೇಕು. ಅದನ್ನು ಪ್ರಸಾದವಾಗಿ ಸೇವಿಸಲು ಯಾವುದೇ ಹಿಂದೂಗಳು ಆಕ್ಷೇಪಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ವರ್ಮಾ ಹೇಳಿದ್ದಾರೆ.

ಇದನ್ನೂಓದಿ: ಬ್ಯಾಂಕಾಕ್‌: ರಸ್ತೆ ಮಧ್ಯೆ ಹೊತ್ತಿ ಉರಿದ ಶಾಲಾ ಬಸ್‌, 25 ವಿದ್ಯಾರ್ಥಿಗಳು ಸಜೀವ ದಹನ

“ಗರ್ಬಾ ಪೆಂಡಾಲ್‌ಗೆ ಬೇರೆ ಸಮುದಾಯದ ಜನರ ಅನಗತ್ಯ ಪ್ರವೇಶವನ್ನು ಪರಿಶೀಲಿಸಲು ಇದು ಸಹಾಯ ಮಾಡುತ್ತದೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ. ಆಧಾರ್ ಕಾರ್ಡ್‌ಗಳನ್ನು ನಕಲಿ ಮಾಡಬಹುದು ಮತ್ತು ಎಡಿಟ್‌ ಮಾಡಿ ತರಬಹುದು. ಆದ್ದರಿಂದ ಗರ್ಬಾ ಪ್ರವೇಶದಲ್ಲಿ ಪ್ರಸಾದವಾಗಿ ಗೌಮುತ್ರವನ್ನು ಬಳಸುವುದು ಕಾರ್ಯಸಾಧ್ಯವಾದ ಆಯ್ಕೆಯಾಗಿದೆ. ಇದು ಹಿಂದೂ ಧರ್ಮಕ್ಕೆ ಅನುಗುಣವಾಗಿರುತ್ತದೆ” ಎಂದು ಅವರು ಹೇಳಿದ್ದಾರೆ.

ಇಂದೋರ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ಚಿಂಟು ವರ್ಮಾ ಅವರ ವಿಲಕ್ಷಣ ಸಲಹೆಯನ್ನು ಲೇವಡಿ ಮಾಡಿದ ಪ್ರತಿಪಕ್ಷ ಕಾಂಗ್ರೆಸ್‌ನ ರಾಜ್ಯ ಘಟಕದ ವಕ್ತಾರ ನೀಲಭ್ ಶುಕ್ಲಾ, ಬಿಜೆಪಿ ನಾಯಕರು ಗೋವಿನ ಮೇಲೆ ರಾಜಕೀಯ ಮಾಡಲು ಮಾತ್ರ ಆಸಕ್ತಿ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಇಂತಹ ಸಲಹೆಗಳು ಮತ್ತು ಬೇಡಿಕೆಗಳನ್ನು ಮುಂದಿಡುವ ಬಿಜೆಪಿ ನಾಯಕರು ಗೋಶಾಲೆಗಳಲ್ಲಿನ ಗೋವುಗಳ ದುಸ್ಥಿತಿಯ ವಿಚಾರದಲ್ಲಿ ಏಕೆ ಮೌನವಾಗಿದ್ದಾರೆ? ಇದು ಬಿಜೆಪಿಯ ಕೋಮು ಧ್ರುವೀಕರಣ ರಾಜಕೀಯಕ್ಕೆ ಮತ್ತೊಂದು ಉದಾಹರಣೆಯಾಗಿದೆ ಎಂದು ಶುಕ್ಲಾ ಹೇಳಿದ್ದಾರೆ.

ಈ ಸಲಹೆ ನೀಡುವ ನಾಯಕರು ಗರ್ಬಾ ಪೆಂಡಾಲ್‌ಗಳಿಗೆ ಪ್ರವೇಶಿಸುವ ಮೊದಲು ಮೂತ್ರವನ್ನು ಕುಡಿಯಬೇಕು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಈ ವೀಡಿಯೊಗಳನ್ನು ಪೋಸ್ಟ್ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಲೈಂಗಿಕ ಕಿರುಕುಳ ಆರೋಪ: ಮಲಯಾಳಂ ನಟ ನಿವಿನ್ ಪೌಲಿ ವಿಚಾರಣೆ ನಡೆಸಿದ ಎಸ್‌ಐಟಿ

2013 ರಲ್ಲಿ, ಆಗಿನ ಬಿಜೆಪಿ ಶಾಸಕಿ ಉಷಾ ಠಾಕೂರ್ ಅವರು ಹಿಂದೂಯೇತರ ವಿಶೇಷವಾಗಿ ಮುಸ್ಲಿಂ ಯುವಕರ ಪ್ರವೇಶವನ್ನು ತಡೆಯಲು ಗರ್ಬಾ ಸ್ಥಳಗಳಿಗೆ ಪ್ರವೇಶಿಸಲು ಆಧಾರ್ ಮತ್ತು ಇತರ ಐಡಿ ಪುರಾವೆಗಳನ್ನು ಕಡ್ಡಾಯವಾಗಿ ಮಾಡಲು ಸಲಹೆ ನೀಡಿದ್ದರು. ಅದಾಗಿ ಒಂಬತ್ತು ವರ್ಷಗಳ ನಂತರ, ಅವರು ರಾಜ್ಯದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವರಾದಾಗ ಸರಿಯಾದ ಗುರುತಿನ ಪುರಾವೆಗಳಿಲ್ಲದೆ ಸಂದರ್ಶಕರಿಗೆ ಸ್ಥಳಗಳಿಗೆ ಪ್ರವೇಶವನ್ನು ಅನುಮತಿಸದಂತೆ ಗರ್ಬಾ ಪೆಂಡಾಲ್ ಮುಖ್ಯಸ್ಥರನ್ನು ಕೇಳಿದ್ದರು.

ಐದು ವರ್ಷಗಳ ಹಿಂದೆ 2017 ರಲ್ಲಿ, ಭೋಪಾಲ್‌ನಲ್ಲಿ ಹಿಂದೂ ಉತ್ಸವ ಸಮಿತಿ ಕೂಡ ರಾಜ್ಯ ರಾಜಧಾನಿಯಲ್ಲಿ ಜಿಲ್ಲಾಡಳಿತದಿಂದ ನಡೆಸುವ ಗರ್ಬಾ ಪೆಂಡಾಲ್‌ಗಳಿಗೆ ಪ್ರವೇಶಿಸಲು ಐಡಿ ಪುರಾವೆಯಾಗಿ ಆಧಾರ್ ದಾಖಲೆಯನ್ನು ಹೊಂದುವಂತೆ ಒತ್ತಾಯಿಸಿತ್ತು.

ನವರಾತ್ರಿಯ ಸಮಯದಲ್ಲಿ ಗರ್ಬಾ ಆಚರಣೆಯನ್ನು ಮಧ್ಯಮಪ್ರದೇಶದಾದ್ಯಂತ ಅದರಲ್ಲೂ ವಿಶೇಷವಾಗಿ ಇಂದೋರ್ ಮತ್ತು ಉಜ್ಜಯಿನಿ ಪ್ರದೇಶ ಸೇರಿದಂತೆ ರಾಜ್ಯದ ಪಶ್ಚಿಮ ಮತ್ತು ನೈಋತ್ಯ ಭಾಗಗಳಲ್ಲಿ ಬಹಳ ಜನಪ್ರಿಯವಾಗಿ ಅಚರಿಸಲಾಗುತ್ತದೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...