Homeಮುಖಪುಟಕೇವಲ ಎರಡೇ ಸಭೆಗೆ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ, ಇದು INDIA ಮೈತ್ರಿಯ ತಾಕತ್ತು: ಮಮತಾ...

ಕೇವಲ ಎರಡೇ ಸಭೆಗೆ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ, ಇದು INDIA ಮೈತ್ರಿಯ ತಾಕತ್ತು: ಮಮತಾ ಬ್ಯಾನರ್ಜಿ

- Advertisement -
- Advertisement -

ಪ್ರತಿಪಕ್ಷಗಳ ಒಕ್ಕೂಟ INDIA ಮೈತ್ರಿಕೂಟದ ಒತ್ತಡಕ್ಕೆ ಮಣಿದು ಮೋದಿ ಸರ್ಕಾರ ಅಡುಗೆ ಅನಿಲದ ಬೆಲೆ ಇಳಿಕೆ ಮಾಡಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟ್ವೀಟ್‌ ಮಾಡಿದ್ದಾರೆ.

”ಪ್ರತಿಪಕ್ಷಗಳ ‘INDIA’ ಒಕ್ಕೂಟವು ರಚನೆಯಾದ ಕಳೆದ ಎರಡು ತಿಂಗಳಲ್ಲಿ ಕೇವಲ ಎರಡು ಸಭೆಗಳನ್ನು ನಡೆಸಿದೆ. ಇದೇ ವೇಳೆ, ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 200 ರೂಪಾಯಿ ಇಳಿಸಲಾಗಿದೆ. ಇದು INDIA ದ ತಾಕತ್ತು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಗೃಹಬಳಕೆ ಎಲ್‌ಪಿಜಿ ದರವನ್ನು ಕಡಿತಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಲೋಕಸಭೆ ಚುನಾವಣೆಗೆ ಬಿಜೆಪಿ ನಡೆಸುತ್ತಿರುವ ʼಚುನಾವಣೆ ಗಿಮಿಕ್ʼ ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಅವರು ಕೇಂದ್ರದ ಬಣ್ಣಿಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅಡುಗೆಯ ಬೆಲೆಯನ್ನು 200 ರೂ. ಕಡಿತಗೊಳಿಸುವ ನಿರ್ಧಾರದ ಬಗ್ಗೆ ವಾಗ್ದಾಳಿ ನಡೆಸಿದ ಎಎಪಿ ರಾಷ್ಟ್ರೀಯ ವಕ್ತಾರೆ ಪ್ರಿಯಾಂಕ ಕಕ್ಕರ್, ”ಪ್ರತಿಪಕ್ಷಗಳ ‘INDIA’ ಮೈತ್ರಿಕೂಟದ ಮೂರನೇ ಸಭೆಯ ನಂತರ ಇಂಧನ ಬೆಲೆಗಳು ಸಹ ಕಡಿಮೆಯಾಗುತ್ತವೆ” ಎಂದು ಹೇಳಿದರು.

”ಪಾಟ್ನಾ ಮತ್ತು ಬೆಂಗಳೂರು ಸಭೆಗಳ ನಂತರ ( ‘INDIA’ ಮೈತ್ರಿಕೂಟ) ಎಲ್‌ಪಿಜಿ ದರವನ್ನು 200ರೂ. ಕಡಿಮೆ ಮಾಡಲಾಗಿದೆ. ಮುಂಬೈ ಸಭೆಯ ನಂತರ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುತ್ತವೆ ಎಂದು ನನಗೆ ಖಾತ್ರಿಯಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಕೇಜ್ರಿವಾಲ್: ಎಎಪಿ ವಕ್ತಾರೆ ಪ್ರಿಯಾಂಕ ಕಕ್ಕರ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...