Homeಮುಖಪುಟಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್...

ಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್ ತರಾಟೆ

- Advertisement -
- Advertisement -

ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿ 3,000 ಬಿಘಾ ಅಥವಾ ಸುಮಾರು 1 ಸಾವಿರ ಎಕರೆ ಭೂಮಿಯನ್ನು ಖಾಸಗಿ ಸಿಮೆಂಟ್ ಕಾರ್ಖಾನೆಗೆ ಮಂಜೂರು ಮಾಡಿದ್ದಕ್ಕೆ ಗುವಾಹಟಿ ಹೈಕೋರ್ಟ್ ಆಶ್ಚರ್ಯ ವ್ಯಕ್ತಪಡಿಸಿದ್ದು, ಯಾವ ನಿಯಮದಡಿ ಇಷ್ಟು ದೊಡ್ಡ ಪ್ರಮಾಣದ ಭೂಮಿ ನೀಡಲಾಗಿದೆ ಎಂದು ಉತ್ತರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಒಂದು ಸಾವಿರ ಎಕರೆ ಭೂಮಿಯನ್ನು ಒಂದು ಸಿಮೆಂಟ್ ಕಾರ್ಖಾನೆಗೆ ಧಾರೆ ಎರೆದಿರುವುದು ಕೇವಲ ಒಂದು ವ್ಯವಹಾರವಾಗಿ ಉಳಿದಿಲ್ಲ, ಇದು ಪ್ರಜಾಪ್ರಭುತ್ವದ ಅಣಕವಾಗಿದೆ ಎಂದ ಹೈಕೋರ್ಟ್ ನ್ಯಾಯಾಧೀಶ ಸಂಜಯ್ ಕುಮಾರ್ ಮೇಧಿ ಅವರು, “ಇದೇನು ತಮಾಷೆಯೇ?” ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಏನಿದು ಪ್ರಕರಣ?

2024ರ ಅಕ್ಟೋಬರ್‌ನಲ್ಲಿ ಮಹಾಬಲ್ ಸಿಮೆಂಟ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ದಿಮಾ ಹಸಾವೊ ಜಿಲ್ಲೆಯಲ್ಲಿ 2,000 ಬಿಘಾ ಅಥವಾ ಸುಮಾರು 650ಕ್ಕೂ ಹೆಚ್ಚು ಎಕರೆ ಭೂಮಿಯನ್ನು ಸರ್ಕಾರ ಮಂಜೂರು ಮಾಡಿತ್ತು. ಬಳಿಕ ಅದೇ ವರ್ಷ ನವೆಂಬರ್‌ನಲ್ಲಿ ಮತ್ತೆ 1000 ಸಾವಿರ ಬಿಘಾ ಅಥವಾ ಸುಮಾರು 330 ಎಕರೆ ಭೂಮಿ ಹೆಚ್ಚುವರಿಯಾಗಿದೆ ನೀಡಿದೆ.

ದಿಮಾ ಹಸಾವೊ ಅಸ್ಸಾಂನಲ್ಲಿರುವ ಬುಡಕಟ್ಟು ಜನಾಂಗದವರು ಬಹುಸಂಖ್ಯಾತರಾಗಿರುವ ಗುಡ್ಡಗಾಡು ಜಿಲ್ಲೆಯಾಗಿದೆ. ಇದನ್ನು ಸಂವಿಧಾನದ ಆರನೇ ಶೆಡ್ಯೂಲ್‌ನ ನಿಬಂಧನೆಗಳ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾದ ಉತ್ತರ ಕ್ಯಾಚರ್ ಹಿಲ್ಸ್ ಸ್ವಾಯತ್ತ ಮಂಡಳಿಯ ಮೂಲಕ ನಿರ್ವಹಿಸಲಾಗುತ್ತದೆ.

ಸಂವಿಧಾನದ ಆರನೇ ಶೆಡ್ಯೂಲ್ ಅಸ್ಸಾಂ, ಮೇಘಾಲಯ, ತ್ರಿಪುರ ಮತ್ತು ಮಿಜೋರಾಂನಲ್ಲಿನ ಬುಡಕಟ್ಟು ಪ್ರದೇಶಗಳ ಆಡಳಿತವನ್ನು ನಿಯಂತ್ರಿಸುತ್ತದೆ.

ಅಕ್ಟೋಬರ್ 2024ರಲ್ಲಿ ಸಿಮೆಂಟ್ ಕಾರ್ಖಾನೆಗೆ ಭೂಮಿ ಮಂಜೂರು ಮಾಡುವ ಆದೇಶವನ್ನು ಉತ್ತರ ಕ್ಯಾಚರ್ ಹಿಲ್ಸ್ ಸ್ವಾಯತ್ತ ಮಂಡಳಿಯ ಹೆಚ್ಚುವರಿ ಕಾರ್ಯದರ್ಶಿ (ಕಂದಾಯ) ಹೊರಡಿಸಿದ್ದರು. ಹಂಚಿಕೆಯ ಉದ್ದೇಶ ಸಿಮೆಂಟ್ ಕಾರ್ಖಾನೆ ಸ್ಥಾಪಿಸುವುದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಭೂಮಿ ಮಂಜೂರಾತಿ ವಿರುದ್ದ ಸಲ್ಲಿಸಿರುವ ಎರಡು ಅರ್ಜಿಗಳ ವಿಚಾರಣೆ ಕಳೆದವಾರ ಗುವಾಹಟಿ ಹೈಕೋರ್ಟ್‌ನಲ್ಲಿ ನಡೆದಿದೆ.

ಸಿಮೆಂಟ್ ಕಾರ್ಖಾನೆಗೆ ಕೊಡಲು ನಮ್ಮ ಭೂಮಿಯನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ದಿಮಾ ಹಸಾವೊನ ಸ್ಥಳೀಯರ ಗುಂಪೊಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.

ಈ ವರ್ಷದ ಆರಂಭದಲ್ಲಿ ಮಹಾಬಲ್ ಸಿಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯು, ನಿರ್ಮಾಣ ಕಾರ್ಯಗಳಲ್ಲಿ ‘ಸ್ಥಳೀಯ ಗ್ರಾಮಸ್ಥರು ಸೃಷ್ಟಿಸುವ ಅಡಚಣೆಗಳಿಂದ’ ರಕ್ಷಣೆ ಕೋರಿ ಆರಂಭಿಕ ಅರ್ಜಿಯನ್ನು ಸಲ್ಲಿಸಿತ್ತು.

ಆಗಸ್ಟ್ 12ರಂದು ತನ್ನ ಆದೇಶದಲ್ಲಿ ನ್ಯಾಯಾಲಯವು “ಪ್ರಕರಣದ ಸತ್ಯಾಸತ್ಯತೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಮಂಜೂರು ಮಾಡಲು ಕೋರಿರುವ ಭೂಮಿ ಸುಮಾರು 3,000 ಬಿಘಾಗಳಾಗಿದ್ದು, ಅದು ಅಸಾಧಾರಣವೆಂದು ತೋರುತ್ತದೆ” ಎಂದು ಹೇಳಿದೆ.

“3,000 ಬಿಘಾ ಅಳತೆಯ ಇಷ್ಟು ದೊಡ್ಡ ಭೂಮಿಯನ್ನು ಕಾರ್ಖಾನೆಗೆ ಹಂಚಿಕೆ ಮಾಡುವ” ನೀತಿಯನ್ನು ಒಳಗೊಂಡಿರುವ ದಾಖಲೆಗಳನ್ನು ಪಡೆಯುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಜಿಲ್ಲೆಯ ಉಮ್ರಾಂಗ್ಸೊ ಪ್ರದೇಶವು “ವಲಸೆ ಹಕ್ಕಿಗಳು, ವನ್ಯಜೀವಿಗಳು ಇತ್ಯಾದಿಗಳಿಗೆ ಬಿಸಿನೀರಿನ ಬುಗ್ಗೆ, ನಿಲುಗಡೆ ಸ್ಥಳಗಳನ್ನು ಹೊಂದಿರುವ ಪರಿಸರ ತಾಣ” ಎಂಬುವುದನ್ನೂ ನ್ಯಾಯಾಲಯ ಗಮನಿಸಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ನಿಗದಿಪಡಿಸಿದೆ.

ವಿಚಾರಣೆ ವೇಳೆ, ನ್ಯಾಯಮೂರ್ತಿಗಳು ಸರ್ಕಾರದ ನಿರ್ಧಾರವನ್ನು ಕಂಡು ದಂಗಾಗಿದ್ದಾರೆ. ನ್ಯಾಯಾಧೀಶರು ಸರ್ಕಾರದ ವಕೀಲರನ್ನು ಕೇಳಿದ ಪ್ರಶ್ನೆಯ ವೀಡಿಯೊ ಈಗ ದೇಶಾದ್ಯಂತ ವೈರಲ್ ಆಗಿದೆ.

ನ್ಯಾಯಾಧೀಶರು ಆಶ್ಚರ್ಯ ಮತ್ತು ಆಕ್ರೋಶದಿಂದ, “ಇದೇನು ತಮಾಷೆಯೇ? ನೀವು ಇಡೀ ಜಿಲ್ಲೆಯನ್ನೇ ಕೊಡುತ್ತಿದ್ದೀರಿ. ನಿಮ್ಮ ಅಗತ್ಯ ಮುಖ್ಯವಲ್ಲ, ಸಾರ್ವಜನಿಕ ಹಿತಾಸಕ್ತಿಯೇ ಇಲ್ಲಿ ಮುಖ್ಯ,” ಎಂದು ಖಡಕ್ ಮಾತುಗಳಲ್ಲಿ ಹೇಳಿದ್ದಾರೆ.

ರಾಜ್ಯಕ್ಕೆ ಮರಳುವ ಬಂಗಾಳಿ ವಲಸೆ ಕಾರ್ಮಿಕರಿಗೆ ಮಾಸಿಕ ರೂ. 5000 ಧನ ಸಹಾಯ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...