Homeಚಳವಳಿಗೌರಿ ದಿನ: ‘ಹೊಸ ಭಾರತ’ದಲ್ಲಿ ಪತ್ರಿಕೋದ್ಯಮಕ್ಕಿರುವ ಬೆದರಿಕೆಗಳು ಕುರಿತು ಉಪನ್ಯಾಸ, ‘ಗೌರಿ’ ಸಿನಿಮಾ ಪ್ರದರ್ಶನ

ಗೌರಿ ದಿನ: ‘ಹೊಸ ಭಾರತ’ದಲ್ಲಿ ಪತ್ರಿಕೋದ್ಯಮಕ್ಕಿರುವ ಬೆದರಿಕೆಗಳು ಕುರಿತು ಉಪನ್ಯಾಸ, ‘ಗೌರಿ’ ಸಿನಿಮಾ ಪ್ರದರ್ಶನ

ಗೌರಿ ಲಂಕೇಶ್‌ರವರ 61ನೇ ಜನ್ಮದಿನದ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಖ್ಯಾತ ಪತ್ರಕರ್ತರಾದ ಸಸಿ ಕುಮಾರ್ ಮತ್ತು ತೀಸ್ತಾ ಸೆಟಲ್ವಾಡ್‌ ಭಾಗವಹಿಸಲಿದ್ದಾರೆ.

- Advertisement -
- Advertisement -

ಗೌರಿ ಲಂಕೇಶ್‌ರವರ 61ನೇ ಜನ್ಮದಿನದ ಅಂಗವಾಗಿ ಗೌರಿ ಸ್ಮಾರಕ ಟ್ರಸ್ಟ್ ವತಿಯಿಂದ “ಮೌನವಾದ ದನಿಗಳು: ‘ಹೊಸ ಭಾರತ’ದಲ್ಲಿ ಪತ್ರಿಕೋದ್ಯಮಕ್ಕಿರುವ ಬೆದರಿಕೆಗಳು” ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಜನವರಿ 29ರ ಭಾನುವಾರದಂದು ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಕವಿತಾ ಲಂಕೇಶ್ ನಿರ್ದೇಶನದ ‘ಗೌರಿ’ ಸಿನಿಮಾ ಪ್ರದರ್ಶನ ಸಹ ನಡೆಯಲಿದೆ.

ಹಿರಿಯ ಪತ್ರಕರ್ತರು, ಭಾರತದ ಮೊದಲ ಪ್ರಾದೇಶಿಕ ಟಿವಿ ಚಾನೆಲ್ ಏಷ್ಯಾನೆಟ್‌ನ ಸಂಸ್ಥಾಪಕರು ಮತ್ತು ಚನ್ನೈನ ಏಷ್ಯನ್ ಕಾಲೇಜ್ ಆಫ್ ಜರ್ನಲಿಸಂನ ಅಧ್ಯಕ್ಷರಾದ ಸಸಿ ಕುಮಾರ್‌ರವರು ಉಪನ್ಯಾಸ ನೀಡಲಿದ್ದು, ಖ್ಯಾತ ಮಾನವಹಕ್ಕು ಹೋರಾಟಗಾರರಾದ ತೀಸ್ತಾ ಸೆಟಲ್ವಾದ್‌ರವರು ಜೈಲಿನಿಂದ ಬಿಡುಗಡೆಗೊಂಡ ನಂತರ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

“ಗೌರಿ” ಸಿನಿಮಾ ಪ್ರದರ್ಶನ

2022ರ ಟೊರೊಂಟೊ ವುಮೆನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಬೆಸ್ಟ್ ಹ್ಯೂಮನ್ ರೈಟ್ಸ್ ಪ್ರಶಸ್ತಿ ಜಯಿಸಿದ ಗೌರಿ ಲಂಕೇಶ್ ಕುರಿತ ಅವರ ಸಹೋದರಿ ಕವಿತಾ ಲಂಕೇಶ್ ನಿರ್ದೇಶನದ “ಗೌರಿ” ಸಿನಿಮಾ ಪ್ರದರ್ಶನ ನಡೆಯಲಿದೆ.

ಗೌರಿ ದಿನ ಕಾರ್ಯಕ್ರಮವು ಭಾನುವಾರ ಸಂಜೆ 5 ಗಂಟೆಗೆ, ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಎದುರಿನ ಕಲಾವಿದರ ಸಂಘದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಗೌರಿ ಸ್ಮಾರಕ ಟ್ರಸ್ಟ್‌ನ ವಿ.ಎಸ್ ಶ್ರೀಧರ್- 9448127571, ದೀಪು-7353770203 ರವರನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: Explainer: ಏನಿದು ಹಿಂಡೆನ್‌ಬರ್ಗ್ ವರದಿ? ಅದಾನಿ ಸಾಮ್ರಾಜ್ಯ ಕುಸಿಯುತ್ತಿರುವುದೇಕೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...