Homeಮುಖಪುಟಗೌರಿ ಲಂಕೇಶ್ ಹತ್ಯೆ ಆರೋಪಿಗಳ ಮೇಲಿನ KCOCA ಕಾಯ್ದೆ ಕೈಬಿಡದಂತೆ ಸುಪ್ರೀಂ ಆದೇಶ

ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಮೇಲಿನ KCOCA ಕಾಯ್ದೆ ಕೈಬಿಡದಂತೆ ಸುಪ್ರೀಂ ಆದೇಶ

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಹಾಕಲಾಗಿದ್ದ KCOCA ಕಾಯ್ದೆಯನ್ನು ಕಳೆದ ಏಪ್ರಿಲ್ 23 ರಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಸುಪ್ರೀಂನಲ್ಲಿ ಸಲ್ಲಿಸಿದ್ದ ವಿಶೇಷ ರಜಾ ಅರ್ಜಿ ಪುರಸ್ಕರಿಸಿರುವ ಸುಪ್ರೀಂ ಸೆಪ್ಟಂಬರ್ 08 ರಂದು ವಿಚಾರಣೆ ನಡೆಸಲು ನಿರ್ಧರಿಸಿದೆ.

ಗೌರಿ ಲಂಕೇಶ್ ಕೊಲೆ ಆರೋಪಿಯಾಗಿರುವ ಮೋಹನ್ ನಾಯಕ್ ಮೇಲೆ ಹಾಕಲಾಗಿದ್ದ KOCCA ಕಾಯಿದೆಯನ್ನು ಕೈಬಿಡದಂತೆ ಕವಿತಾ ಲಂಕೇಶ್ ಸಲ್ಲಿಸಿದ್ದ ಅರ್ಜಿಯನ್ನು ಎ.ಎಂ ಖಾನ್ವಿಲ್ಕರ್ ಮತ್ತು ಸಂಜೀವ್ ಖನ್ನಾ ಅವರ ನ್ಯಾಯಪೀಠ ಆಲಿಸುತ್ತಿದೆ.

ಈ ಮೊದಲು ಇದೇ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಕರ್ನಾಟಕ ಹೈಕೋರ್ಟ್‌ನ ಏಪ್ರಿಲ್ 23 ರ ಆದೇಶಕ್ಕೆ ತಡೆ ನೀಡಿ, KCOCA ಕಾಯ್ದೆ ಕೈಬಿಡದಂತೆ ಜೂನ್ 29 ರಂದು ಮಧ್ಯಂತರ ಆದೇಶ ಹೊರಡಿಸಿತ್ತು.

ಆರೋಪಿ ಮೋಹನ್ ನಾಯಕ್ ಗೌರಿ ಲಂಕೇಶ್ ಹತ್ಯೆಯಲ್ಲಿ ಯೋಜನೆ ರೂಪಿಸಿ ನೇರ ಭಾಗಿಗಳಾಗಿದ್ದ ಅಮೋಲ್ ಕಾಳೆ ಮತ್ತು ರಾಜೇಶ್ ಬಂಗಾರರ ನಿಕಟವರ್ತಿಯಾಗಿದ್ದಾನೆ.


ಗೌರಿ ಲಂಕೇಶ್‌ ಹತ್ಯೆ ಪ್ರಕರಣ – ಪ್ರಭಾವಕ್ಕೆ ಒಳಗಾಗದೆ ಜಾಮೀನು ಅರ್ಜಿ ಇತ್ಯರ್ಥ ಮಾಡಿ: ಸುಪ್ರೀಂ


ಗೌರಿ ಲಂಕೇಶ್ ಹಂತಕರ ವಿರುದ್ಧ ಸಲ್ಲಿಸಲಾಗಿದ್ದ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ 2000 (KOCCA Act, 2000) ಅಡಿಯಲ್ಲಿನ ಆರೋಪಗಳನ್ನು ವಜಾಗೊಳಿಸಿದ್ದ ಹೈಕೋರ್ಟ್ ಹತ್ಯೆಯನ್ನು ಸಾಮಾನ್ಯ ಕೊಲೆಯಂತೆ ವಿಚಾರಣೆ ನಡೆಸಲು ಮುಂದಾಗಿತ್ತು. ಆ ಸಂದರ್ಭದಲ್ಲಿ ಮೋಹನ್ ನಾಯಕ್ ತನಗೆ ಜಾಮೀನು ನೀಡುವಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ.

ಇದಕ್ಕೆ ಗೌರಿ ಸಹೋದರಿ ಕವಿತಾ ಲಂಕೇಶ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. “ಗೌರಿ ಲಂಕೇಶ್ ಅವರ ಹತ್ಯೆ ಸಾಮಾನ್ಯ ಕೊಲೆ ಅಲ್ಲ. ಒಂದು ಸಂಘಟಿತ ಮತ್ತು ಸೈದ್ಧಾಂತಿಕ ದ್ವೇಷದ ಕಾರಣಕ್ಕೆ ನಡೆಸಲಾದ ಹತ್ಯೆ. ಕೋಕಾ ಕಾಯ್ದೆಯನ್ನು ಕೈಬಿಡುವುದರಿಂದ ಹತ್ಯೆಯ ಹಿಂದಿರುವ ಕಾಣದ ಕೈಗಳಿಗೆ ಶಿಕ್ಷೆಯಾಗುವುದಿಲ್ಲ” ಎಂದು ಕವಿತಾ ಲಂಕೇಶ್ ಅವರ ಪರವಾಗಿ ನ್ಯಾಯವಾದಿ ತೀಸ್ತಾ ಸೆತಲ್ವಾದ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು.

ಜುಲೈ 13 ರಂದು ಹೈಕೋರ್ಟ್‌ನ ಜಸ್ಟಿಸ್ ಹರೀಶ್ ಕುಮಾರ್‌ರವರ ಏಕ ಸದಸ್ಯ ಪೀಠ “ಎಸ್‌ಐಟಿ ಸಲ್ಲಿಸಿರುವ ಚಾರ್ಜ್ ಶೀಟ್‌ ಪ್ರಕಾರ ಜಾಮೀನು ನೀಡಲು ಸಾಧ್ಯವಿಲ್ಲ” ಎಂದು ಆದೇಶ ನೀಡಿತ್ತು.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...