Homeಅಂಕಣಗಳುಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ.....

ಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ…..

- Advertisement -
- Advertisement -

– ಗೌರಿ ಲಂಕೇಶ್
ಆಗಸ್ಟ್ 10, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಪತ್ರಕರ್ತೆಯಾಗಿ ನನ್ನ 22 ವರ್ಷದ ಅನುಭವದಲ್ಲಿ ಪತ್ರಿಕೋದ್ಯಮ ಹೊಸ ಆಯಾಮಗಳನ್ನು ಪಡೆಯುತ್ತಿರುವುದನ್ನು ಕಂಡಿದ್ದೇನೆ. ಇಂದು ನನ್ನ ಸಹೋದ್ಯೋಗಿ ಮಿತ್ರರು ಮುಂಬೈ, ದೆಹಲಿ, ಅಮೆರಿಕಾ, ಇಂಗ್ಲೆಂಡ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ತಿಂಗಳಿಗೆ ಮೂರು ಲಕ್ಷ ರೂಪಾಯಿ ಪಡೆಯುತ್ತಿದ್ದರೆ, ಮುಂಬೈ ಮತ್ತು ದೆಹಲಿಯಲ್ಲಿರುವವರು ಐವತ್ತು ಸಾವಿರದಷ್ಟು ಸಂಬಳ ಪಡೆಯುತ್ತಿದ್ದಾರೆ.
ಪತ್ರಿಕಾ ವೃತ್ತಿ ಎಂಬುದು ಪತ್ರಿಕೋದ್ಯಮವಾಗಿ ಪರಿವರ್ತನೆಗೊಂಡಿರುವುದರ ಪರಿಣಾಮ ಇದು. ಇವತ್ತು ದೊಡ್ಡ ಉದ್ಯಮಪತಿಗಳು, ಶ್ರೀಮಂತ ರಾಜಕಾರಣಿಗಳು ಪತ್ರಿಕಾ ಮಾಲಿಕರಾಗಿದ್ದಾರೆ. ಇದರಿಂದಾಗಿ ಬಹುತೇಕ ಎಲ್ಲಾ ಪತ್ರಿಕೆಗಳೂ ಕಾಪೆರ್ರೇಟ್ ಮತ್ತು ರಾಜಕಾರಣಿಗಳ ಹಂಗಿನಲ್ಲಿರುತ್ತವೆ. ಅಂತಹವರಿಂದ ಸಮಾಜಿಕ ಬದ್ಧತೆ, ಜನಪರ ಕಾಳಜಿಗಳನ್ನು ನಿರೀಕ್ಷಿಸುವುದು ಅಸಾಧ್ಯ. ಇದಕ್ಕೆ ಒಂದು ಉದಾಹರಣೆ ಕೊಡಬಹುದು. ಬೆಂಗಳೂರು ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ ಸುತ್ತಮುತ್ತ ಅರ್ಕಾವತಿ, ದಕ್ಷಿಣ ಪಿನಾಕಿನಿ ನದಿಗಳಿವೆ. ಇವುಗಳ ಅಂತರ್ಜಲ ಬತ್ತಿ ಹೋಗುತ್ತಿರುವಾಗಲೇ ಖಾಸಗಿ ಕಾರ್ಖಾನೆಗಳು ತಮ್ಮtoxic wasteಗಳನ್ನು ಈ ನದಿಗಳಿಗೇ ಹರಿಸಿ ಜಲಮಾಲಿನ್ಯ ಮಾಡುತ್ತಿವೆ. ಇದರ ವಿರುದ್ಧ ಹೋರಾಟ ಪ್ರಾರಂಭಿಸಿರುವ ವಕೀಲ ಜಯರಾಂ ಮತ್ತು ಸ್ನೇಹಿತರು ಪತ್ರಕರ್ತರನ್ನು ಕರೆದು ಕೊಂಡು ಪೆಪ್ಸಿಯ ಘಟಕವೊಂದು ಹೀಗೆ ಜಲಮಾಲಿನ್ಯ ಮಾಡುತ್ತಿರುವುದನ್ನು ತೋರಿಸಿ ದರು. ಆದರೆ ಅದು ಯಾವ ಪತ್ರಿಕೆಗಳಲ್ಲೂ ಪ್ರಕಟವಾಗಲಿಲ್ಲ. ಇದಕ್ಕೆ ಕಾರಣವೇನೆಂದು ಜಯರಾಂರವರು ವಿಚಾರಿಸಿದಾಗ ಪತ್ರಿಕೆಯ ಮಾಲೀಕರು ಪೆಪ್ಸಿಯ ಜಾಹೀರಾತುಗಳು ಸಿಗುವುದಿಲ್ಲವೆಂದು ಹೆದರಿ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದು ಗೊತ್ತಾಯಿತು. ಅಂದರೆ ಪತ್ರಿಕಾ ಮಾಲೀಕರಿಗೆ ಪೆಪ್ಸಿಯ ಹಣ ಬೇಕೆ ಹೊರತು ಬೆಂಗಳೂರಿಗೆ ಶೇ. 30ರಷ್ಟು ಕುಡಿಯುವ ನೀರನ್ನು ನೀಡುತ್ತಿರುವ ನದಿಗಳ ಸ್ವಚ್ಛತೆ ಅಲ್ಲ!
ಇತ್ತೀಚೆಗೆ ಎಲ್ಲ ಪತ್ರಿಕೆಗಳಲ್ಲಿ ವಾಚಕರು “ಪ್ರತಿಭಟನೆಗಳಿಂದಾಗಿ ಸಾರ್ವಜನಿಕರಾದ ನಮಗೆ ಅನಾನುಕೂಲವಾಗುತ್ತಿದೆ” ಎಂದು ಬರೆದಿರುವ ಪತ್ರಗಳನ್ನೇ ಗಮನಿಸಿ. ಈ ವಾಚಕರಿಗೆ ಬೀದಿಗೆ ಬಿದ್ದು ಪ್ರತಿಭಟಿಸುತ್ತಿರುವವರೂ ಸಾರ್ವಜನಿಕರು ಎಂದು ಯಾಕೆ ಅರ್ಥವಾಗುತ್ತಿಲ್ಲ; ಅಥವಾ ಪತ್ರಿಕೆಗಳು ಯಾಕೆ ಅರ್ಥ ಮಾಡಿಕೊಡುತ್ತಿಲ್ಲ. ಇವತ್ತು ಅಂದರೆ ಭಾನುವಾರದ ಪತ್ರಿಕೆಗಳು ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿ ಕಾರ್ಮಿಕರಿಂದ ನಡೆದ ರ್ಯಾಲಿಯಿಂದಾಗಿ ಎಲ್ಲೆಡೆ ಸಂಚಾರ ಅಸ್ತವ್ಯಸ್ಥ ಗೊಂಡಿತು ಎಂದೇ ವರದಿ ಮಾಡಿವೆ. ಆದರೆ ಅದೇ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಕಾರ್ಮಿಕರ ಶೋಷಣೆ ಬಗ್ಗೆ ಮಾತ್ರ ಯಾರೂ ಬರೆದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...