Homeಅಂಕಣಗಳುತಾಯಿ ಮತ್ತು ಪಿಶಾಚಿ: ಒಂದು ಸಿನಿಮಾ ಕಥೆ...

ತಾಯಿ ಮತ್ತು ಪಿಶಾಚಿ: ಒಂದು ಸಿನಿಮಾ ಕಥೆ…

- Advertisement -
- Advertisement -

 ಗೌರಿ ಲಂಕೇಶ್
14 ಮಾರ್ಚ್, 2007 (`ಕಂಡಹಾಗೆ’ ಸಂಪಾದಕೀಯದಿಂದ)
ತಮ್ಮ ತಂದೆಯ ಹೆಸರಲ್ಲಿ ನೀಡಲಾಗುವ `ಲಂಕೇಶ್ ಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದ ಸಿನಿಮಾ ಕುರಿತು…. |

ಆಕೆಯನ್ನು ಊರಿನವರೆಲ್ಲ ಶವಭಕ್ಷಕ ಪಿಶಾಚಿ ಎಂದು ಕರೆಯುತ್ತಾರೆ. ಅವಳ ಕಣ್ಣು ತಮ್ಮ ಮಕ್ಕಳ ಮೇಲೆ ಬೀಳಬಾರದೆಂದು ದೇವರಲ್ಲಿ ಪ್ರಾರ್ಥಿಸುತ್ತಾರೆ. ಊರಿನಿಂದ ದೂರದಲ್ಲಿ ಏಕಾಂಗಿಯಾಗಿ, ಅರೆಹುಚ್ಚಿಯಾಗಿ ಆಕೆ ಜೀವಿಸುತ್ತಿದ್ದಾಳೆ.
ಒಮ್ಮೆ ಹತ್ತು ವರ್ಷದ ಹುಡುಗನನ್ನು ಆಕೆ ನೋಡುತ್ತಾಳೆ. ಆಕೆಯ ಕಣ್ಣು ತನ್ನ ಮೇಲೆ ಬಿತ್ತೆಂದು ಹೆದರುವ ಹುಡುಗ ತನ್ನ ತಂದೆಗೆ ಹೇಳುತ್ತಾನೆ. ಆದರೆ ತಂದೆ “ಆಕೆ ನಿನಗೆ ಏನನ್ನೂ ಮಾಡುವುದಿಲ್ಲ, ಹೆದರಬೇಡ” ಅಂತ ಹೇಳುತ್ತಾನೆ. “ಯಾಕೆ ನನಗೇನೂ ಆಗುವುದಿಲ್ಲ. ಆಕೆ ಮಕ್ಕಳ ಶವಗಳನ್ನು ತಿನ್ನುವ ಪಿಶಾಚಿ ಅಲ್ಲವೇ?” ಎಂದು ಕೇಳಿದಾಗ “ಯಾಕೆ ನಿನಗೇನು ಮಾಡುವುದಿಲ್ಲ ಯಾಕೆಂದರೆ ಆಕೆ ನಿನ್ನ ತಾಯಿ, ಅದಕ್ಕೆ” ಅಂತ ಉತ್ತರಿಸುತ್ತಾನೆ. ಆ ಹುಡುಗನಿಗೆ ಶಾಕ್ ಆಗುತ್ತೆ. ತಂದೆ ಹಳೆಯ ಕತೆ ಹೇಳುತ್ತಾ ಹೋದಂತೆ ನಮ್ಮ ಸಮಾಜದಲ್ಲಿನ ಜಾತಿ ವ್ಯವಸ್ಥೆ, ಮೂಢನಂಬಿಕೆ, ಮಹಿಳೆಯರ ಶೋಷಣೆ ಎಲ್ಲವೂ ಅನಾವರಣಗೊಳ್ಳುತ್ತಾ ಹೋಗುತ್ತವೆ.
ಆಕೆಯ ಹೆಸರು ಚಂಡಿ. ಸುಂದರಿಯೂ, ದಿಟ್ಟೆಯೂಆದ ಚಂಡಿ ಊರಿನ ಸ್ಮಶಾನ ಕಾಯುವವನ ಏಕೈಕ ಪುತ್ರಿ. ತಮಗದು ಸತ್ಯ ಹರಿಶ್ಚಂದ್ರನಿಂದಲೇ ಬಳುವಳಿಯಾಗಿ ಬಂದ ದೈವಕಾರ್ಯವೆಂದು ನಂಬಿದವಳು. ಈ ದಲಿತ ಮಹಿಳೆ ನೋಡಿಕೊಳ್ಳುತ್ತಿದ್ದುದು ಮಕ್ಕಳ ಸ್ಮಶಾನವನ್ನು. ಓದು ಬರಹ ಬಲ್ಲ, ಸರ್ಕಾರಿ ನೌಕರನೂ ಆಗಿರುವ ನರಸುಗೆ ಚಂಡಿ ಮೇಲೆ ಪ್ರೇಮಾಂಕುರವಾಗಿ ಮದುವೆಯಾಗುತ್ತಾನೆ. ಒಂದು ಗಂಡು ಮಗುವೂ ಜನಿಸುತ್ತದೆ.
ಚಂಡಿಯ ಸಮಸ್ಯೆಗಳು ಆರಂಭವಾಗುವುದೇ ಅಲ್ಲಿಂದ. ಹಸುಗೂಸಿನ ತಾಯಿಯಾಗಿ, ಮಕ್ಕಳ ಶವಗಳನ್ನು ಹೂಳುವುದು ಆಕೆಗೆ ಅಸಾಧ್ಯವಾಗುತ್ತದೆ. ತನ್ನ ಮಗುವನ್ನೇ ಹೂಳುತ್ತಿರುವನೇ ಎಂಬ ಭ್ರಮೆ ಕಾಡುತ್ತದೆ. ಈ ವೃತ್ತಿ ಇನ್ನು ತನಗೆ ಬೇಕಿಲ್ಲ ಅನ್ನಿಸುತ್ತೆ. ಆದರೆ ಇದು ವಂಶಪಾರಂಪರ್ಯ ದೇವರ ಕಾರ್ಯ; ತ್ಯಜಿಸುವುದಾದರೂ ಹೇಗೆ? ಈ ತಳಮಳವನ್ನು ಗಂಡನೊಂದಿಗೆ ಹಂಚಿಕೊಳ್ಳಲು ಯತ್ನಿಸಿದರೆ, ಅವನೂ ಕಿವಿಗೊಡುವುದಿಲ್ಲ.
ಈ ಮಧ್ಯೆ ಚಂಡಿ ತುಂಬಾ ಪ್ರೀತಿಸುತ್ತಿದ್ದ ಸಂಬಂಧಿಕರ ಮಗಳನ್ನು ಚಂಡಿಯೇ ಕೊಂದಳೆಂದೂ, ಆ ಬಾಲಕಿಯ ಶವಕ್ಕೆ ತನ್ನ ಎದೆಯಿಂದ ತೊಟ್ಟಿಕ್ಕುತ್ತಿದ್ದ ಹಾಲನ್ನು ಕುಡಿಸಿದಳೆಂದೂ ಜನ ಆರೋಪಿಸುತ್ತಾರೆ. ಆಕೆಗೆ ಭೂತ ಹಿಡಿದಿದೆ ಎಂದೂ, ಆಕೆ ಮಕ್ಕಳನ್ನು ಜೀವಂತ ಭಕ್ಷಿಸು ತ್ತಾಳೆಂದೂ ಸುಳ್ಳುಗಳು ಊರಲ್ಲಿ ಹಬ್ಬುತ್ತವೆ. “ನಾನು ಹಸಿ ಬಾಣಂತಿ. ನನ್ನ ಮಗುವಿಗೆ ಕುಡಿಸಬೇಕಿರುವ ಹಾಲನ್ನು ಮಕ್ಕಳ ಶವಗಳಿಗೆ ಯಾಕೆ ನೀಡಲಿ? ಯಾರಿಗೂ ನೋವು ಕೂಡ ಮಾಡದ ನಾನು ಹಸುಗೂಸುಗಳನ್ನೇಗೆ ಬಲಿ ಪಡೆಯಲಿ” ಎಂದು ಚಂಡಿ ಗೋಗರೆದರು ಜನ ಕೇಳುವುದಿಲ್ಲ. ನರಸು ಕೂಡ ಹೆಂಡತಿಯ ಬಗ್ಗೆ ಸಂಶಯಪಡಲಾರಂಭಿಸುತ್ತಾನೆ.
ಒಂದು ರಾತ್ರಿ ಚಂಡಿ ಸ್ಮಶಾನದಲ್ಲಿದ್ದಾಗ ಅಲ್ಲಿಗೆ ಆಗಮಿಸುವ ಹಳ್ಳಿಯ ಜನ ಆಕೆ ಶವಗಳನ್ನು ಹೊರತೆಗೆದು ತಿನ್ನುತ್ತಿದ್ದಳು ಎಂದು ಆರೋಪಿಸಿ `ಶವಭಕ್ಷಕ ಪಿಶಾಚಿ’ ಎಂದು ಕೂಗಲಾರಂಭಿಸುತ್ತಾರೆ. “ಇಲ್ಲಿ ನರಿಗಳು ಬಂದು ಗುಂಡಿಯನ್ನು ತೋಡಿದ್ದವು. ಅವುಗಳನ್ನು ಓಡಿಸುತ್ತಿದ್ದೆ. ನರಸು ನೀನಾದರೂ ಹೇಳು ನಾನು ಪಿಶಾಚಿ ಅಲ್ಲ” ಎಂದು ಚಂಡಿ ಬೇಡುತ್ತಾಳೆ. ಆದರೆ ಅವಳಿಂದಾಗಿ ಸಮಾಜದಲ್ಲಿ ತನಗಿದ್ದ ಕಿಂಚಿತ್ತು ಮರ್ಯಾದೆಯೂ ಕರಗುತ್ತದೆ ಎಂದು ಭಾವಿಸುವ ನಸ್ರು “ನೀನು ಪಿಶಾಚಿ” ಎಂದು ಹೇಳಿ ತನ್ನ ಹೆಂಡತಿಯನ್ನೇ ಜೀವಂತ ನರಕಕ್ಕೆ ದೂಕುತ್ತಾನೆ.
ಅಂದಿನಿಂದ ಚಂಡಿ ಯಾರಿಗೂ ಬೇಡವಾದ ಸಾಮಾಜಿಕ ಬಹಿಷ್ಕಾರದ ಬದುಕು ಸಾಗಿಸುತ್ತಿದ್ದಾಳೆ.
ತನ್ನ ತಾಯಿ ಕಥೆ ಕೇಳಿದ ಹುಡುಗ ಮರುಗುತ್ತಾನೆ, ಸಂಕಟಪಡುತ್ತಾನೆ. ಅಮ್ಮನಿಗೆ ಹಪಹಪಿಸುತ್ತಾನೆ. ಆದರೆ ಈ ಸಮಾಜ ಆಕೆಯನ್ನು ಅವನಿಂದ ಬಹಳ ದೂರಕ್ಕೆ ತಳ್ಳಿಯಾಗಿರುತ್ತೆ. ಅದೊಮ್ಮೆ ರೈಲಿನ ಹಳಿ ಮೇಲೆ ಢಕಾಯಿತರು ಮರಗಳನ್ನು ಪೇರಿಸಿಟ್ಟು ಟ್ರೈನಿನಲ್ಲಿರುವ ಹಣವನ್ನು ದೋಚಲು ಸಜ್ಜಾಗಿರುತ್ತಾರೆ. ಅಕಸ್ಮಾತ್ತಾಗಿ ಅಲ್ಲಿಗೆ ಬರುವ `ಶವಭಕ್ಷಕ ಪಿಶಾಚಿ’ ಚಂಡಿಯನ್ನು ಕಂಡು ಅವರೆಲ್ಲ ಓಡಿ ಹೋಗುತ್ತಾರೆ. ಅಪಘಾತ ತಪ್ಪಿಸಲು ಪೇರಿಸಿಟ್ಟ ದಿಮ್ಮಿಗಳನ್ನು ಆಕೆ ಸರಿಸುತ್ತಿರುವಾಗ ರೈಲು ಆಗಮಿಸುತ್ತದೆ. ಟ್ರೈನ್ ಚಾಲಕನಿಗೆ ಗಾಡಿಯನ್ನು ನಿಲ್ಲಿಸುವಂತೆ ಸೂಚಿಸಲು ಆಕೆ ಟ್ರೈನಿನತ್ತ ಓಡುತ್ತಾಳೆ. ಆದರೆ ಚಾಲಕನಿಗೆ ಆಕೆ ಕಾಣದೆ ಚಂಡಿ ಟ್ರೈನಿನಡಿ ಸಿಕ್ಕು ಸತ್ತು ಹೋಗುತ್ತಾಳೆ.
ಢಕಾಯಿತರಿಂದ ಟ್ರೈನನ್ನು ರಕ್ಷಿಸಿದ್ದಕ್ಕೆ ಸರ್ಕಾರ ಅವಳ ಸಂಸಾರಕ್ಕೆ ಪರಿಹಾರ ಧನ ನೀಡಲು ಮುಂದಾಗುತ್ತದೆ. “ಈ ಊರಿನಲ್ಲಿ ಅವಳ ಸಂಬಂಧಿಕರು ಯಾರಾದರೂ ಇದ್ದಾರೆಯೇ?” ಎಂದು ಅಧಿಕಾರಿ ಕೇಳಿದಾಗ, ಎಲ್ಲರೂ ಸುಮ್ಮನಿರುತ್ತಾರೆ. ಹುಡುಗ ತನ್ನ ತಂದೆಯತ್ತ ನೋಡುತ್ತಾನೆ; ಸಾವಿನಲ್ಲಾದರೂ ಆಕೆ ತನ್ನ ಹೆಂಡತಿಯಾಗಿದ್ದಳು ಎಂದು ಒಪ್ಪಿಕೊಳ್ಳಲಿ ತನ್ನ ತಂದೆ ಎಂಬ ಆಶೆಯಿಂದ. ಆದರೆ ನರಸು ಕೂಡ ತುಟಿಪಿಟಿಕ್ ಅನ್ನುವುದಿಲ್ಲ. ಕೊನೆಗೆ ಹುಡುಗನೇ ಬಾಯಿಬಿಟ್ಟು ಕೂಗುತ್ತಾನೆ “ಆಕೆ ನನ್ನ ತಾಯಿ”
ಇದು `ಮಾತಿ ಮಾಯ್’ (ನನ್ನ ತಾಯಿ) ಎಂಬ ಮರಾಠಿ ಚಿತ್ರದ ಕತೆ. ಇದು ಪ್ರಖ್ಯಾತ ಬೆಂಗಾಲಿ ಲೇಖಕಿ ಮಹಾಶ್ವೇತಾ ದೇವಿ ಅವರು ಬರೆದಿರುವ ಕತೆಯನ್ನು ಆಧರಿಸಿ ಚಿತ್ರಾ ಪಾಳೇಕರ್ ನಿರ್ದೇಶಿಸಿರುವ ಚಿತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...